ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಬೆಂಗಳೂರಿನ ಜಿಕೆವಿಕೆ ಸಭಾಂಗಣದಲ್ಲಿ ನಡೆದ ಕ್ಷೀರ ಸಂಜೀವಿನಿ ಯೋಜನೆಯ ದಶಮಾನೋತ್ಸವ ಪ್ರಯುಕ್ತ, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ನಡೆದ, ಪ್ರಗತಿಪರ ಮಹಿಳಾ ಹೈನುಗಾರರ ಸಮಾವೇಶ ಮತ್ತು ತಾಂತ್ರಿಕ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಮತ್ತು ನಗದು ಬಹುಮಾನ ನೀಡಿ ಅಭಿನಂದಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಪ್ರಿಯಾಂಕ ಒಬ್ಬರೇ ಆಯ್ಕೆಯಾಗಿದ್ದು, ಈ ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ. ಪ್ರಿಯಾಂಕ, ಚನ್ನರಾಯಪಟ್ಟಣದ ಡಿ. ಸಾತೇನಹಳ್ಳಿಯ ಕೃತಕ ಗರ್ಭಧಾರಣಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.