ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಿಯಾಂಕ ಖರ್ಗೆ ನಿಶಕ್ತ ಸಚಿವ: ಗಾಲಿ ಜನಾರ್ದನ ರೆಡ್ಡಿ

KannadaprabhaNewsNetwork |  
Published : Jul 12, 2026, 03:30 AM IST
11ಉಳಉ2 | Kannada Prabha

ಸಾರಾಂಶ

ಸಚಿವ ಪ್ರಿಯಾಂಕ ಖರ್ಗೆ ಅವರು ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದನ್ನು ಬಿಟ್ಟು ಮಾಧ್ಯಮಗಳಲ್ಲಿ ಸುದ್ದಿಯಲ್ಲಿರಬೇಕು ಎಂದು ನಿತ್ಯ ಆರ್‌ಎಸ್‌ಎಸ್‌ ಸಂಘಟನೆಯ ಬಗ್ಗೆ ಮಾತನಾಡುತ್ತಿದ್ದಾರೆ

ಗಂಗಾವತಿ: ಆರ್‌ಎಸ್‌ಎಸ್‌ ಸೇರಿದಂತೆ ಹಿಂದು ಸಂಘಟನೆಗಳ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಗೃಹ ಸಚಿವ ಪ್ರಿಯಾಂಕ ಖರ್ಗೆ ಕಾಂಗ್ರೆಸ್‌ ಸರ್ಕಾರದಲ್ಲಿ ನಿಶಕ್ತ ಸಚಿವರಾಗಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಅವರು ತಾಲೂಕಿನ ಆನೆಗೊಂದಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಸಚಿವ ಪ್ರಿಯಾಂಕ ಖರ್ಗೆ ಅವರು ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದನ್ನು ಬಿಟ್ಟು ಮಾಧ್ಯಮಗಳಲ್ಲಿ ಸುದ್ದಿಯಲ್ಲಿರಬೇಕು ಎಂದು ನಿತ್ಯ ಆರ್‌ಎಸ್‌ಎಸ್‌ ಸಂಘಟನೆಯ ಬಗ್ಗೆ ಮಾತನಾಡುತ್ತಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ ಇವರಿಗೆ ಪ್ರಮುಖ ಜವಾಬ್ದಾರಿ ನೀಡಿದ್ದು, ಆದರೆ ಇವರು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ. ಇನ್ನೂ ಹದಿನೈದು ದಿನಗಳ ಕಾಲ ಇವರ ನಡವಳಿಕೆ ಗಮನಿಸಿ, ತದ ನಂತರ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಸ್ಥಿತಿ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ತಪಾಸಣೆ ಒಳಪಡಿಸಬೇಕಿದೆ ಎಂದು ಲೇವಡಿ ಮಾಡಿದರು.

ದೇಶದಲ್ಲಿ ಜವಾಹರಲಾಲ್‌ ನೆಹರು ಹಾಗೂ ಇಂದಿರಾ ಗಾಂಧಿ ಕಾಲದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಯಾರಿಂದ ಅಲುಗಾಡಿಸಲು ಸಾಧ್ಯವಾಗಿಲ್ಲ, ಇತಂಹ ಬಲಿಷ್ಠ ಸಂಘಟನೆಯನ್ನು ಸಚಿವ ಪ್ರಿಯಾಂಕ ಖರ್ಗೆ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದ ಶಾಸಕರು, ಇದು ಕೇವಲ ರಾಜಕೀಯ ದ್ವೇಷವಲ್ಲ, ಬದಲಿಗೆ ಕ್ಷೇತ್ರ ಕಳೆದುಕೊಳ್ಳುವ ಭೀತಿಯಿಂದ ಹೀಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೃಹಲಕ್ಷ್ಮಿ ವದಂತಿಗೆ ಕಿವಿಗೊಡದಿರಿ: ಧರ್ಮಜ ಉತ್ತಪ್ಪ
ಅಡಕೆ ಸಾಗಾಟ ಕಂಟೈನರ್‌ಗೆ ‘ಮಹಾ’ ತಡೆ ನಿವಾರಣೆ: ಡೀವಿ