ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ವೀರರಾಣಿ ಕಿತ್ತೂರು ಚನ್ನಮ್ಮನವರು ಸ್ವತಂತ್ರ ಹೋರಾಟಕ್ಕಾಗಿ ಬ್ರೀಟಿಷರೊಂದಿಗೆ ಹೋರಾಟ ಮಾಡಿ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ. ಧರ್ಮದ ಬಗ್ಗೆ ಅಪಾರ ಕಳಕಳಿಯನ್ನು ಹೊಂದಿದವರಾಗಿದ್ದರು. ಅವರು ದೇಶದ ಎಲ್ಲ ಜನರಿಗೆ ಮಾದರಿಯಾಗಿ ನಮ್ಮ ಮುಂದೆ ನಿಲ್ಲುತ್ತಾರೆ. ಕಿತ್ತೂರು ಚನ್ನಮ್ಮನವರ ವ್ಯಕ್ತಿತ್ವದ ಮುಂದೆ ಪ್ರಿಯಾಂಕಾ ವಾದ್ರಾ ಅವರು ಏನು ಅಲ್ಲ ಎನ್ನುವ ಸತ್ಯವನ್ನು ಮಲ್ಲಿಕಾರ್ಜುನ ಖರ್ಗೆ ತಿಳಿದುಕೊಳ್ಳಬೇಕು. ಅವರು ಪ್ರಿಯಾಂಕಾ ವಾದ್ರಾ ಅವರನ್ನು ಹೊಗಳಲು ನಮ್ಮದೇನು ಅಭ್ಯಂತರವಿಲ್ಲ. ಆದರೆ, ವೀರರಾಣಿ ಕಿತ್ತೂರು ಚನ್ನಮ್ಮನವರ ಜತೆಗೆ ಹೋಲಿಸುವುದು ಸರ್ವತಾ ಒಪ್ಪುವ ಮಾತಲ್ಲ ಎಂದು ಕಿಡಿಕಾರಿದ್ದಾರೆ.ಈ ರೀತಿ ಮಾತನಾಡುವ ಮೂಲಕ ಕನ್ನಡ ನಾಡಿಗೆ ಅವಮಾನ ಮಾಡಿದ್ದೀರಿ. ಇನ್ನು ಮುಂದೆ ಈ ರೀತಿ ಮಾತನಾಡಬಾರದು. ಇದು ದೇಶದ ಜನತೆಗೆ ಹಾಗೂ ಲಿಂಗಾಯತ ಸಮಾಜಕ್ಕೆ ಅವಮಾನ ಮಾಡಿದಂತಾಗುತ್ತದೆ. ರಾಜಕೀಯ ವ್ಯಕ್ತಿಗಳು ಮಾತನಾಡುವಾಗ ಸೂಕ್ಷ್ಮವಾಗಿ ಮಾತನಾಡಬೇಕಾದ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದ್ದಾರೆ.