ಕುಸ್ತಿ ವಿಜೇತರಿಗೆ ಬಹುಮಾನ ವಿತರಣೆ

KannadaprabhaNewsNetwork |  
Published : Dec 14, 2024, 12:45 AM IST
ಹೊನ್ನಾಳಿ ಫೋಟೋ 13ಎಚ್.ಎಲ್.ಐ1.  ಹೊನ್ನಾಳಿ ಶ್ರೀ ಬೀರಲಿಂಗೇಶ್ವರ ಟ್ರಸ್ಟ್ ಕಮಿಟಿಯಿಂದ ನಡೆದ ಎರಡನೇ ದಿನದ ಕುಸ್ತಿ ಪಂದ್ಯಾವಳಿಯಲ್ಲಿ ಪೈಲ್ವಾನರು ಕುಸ್ತಿ ಕ್ರೀಡೆಯ  ವಿವಿಧ ಭಂಗಿಗಳು  | Kannada Prabha

ಸಾರಾಂಶ

ಹೊನ್ನಾಳಿ ಪಟ್ಟಣದ ದೊಡ್ಡಕೇರಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯಿಂದ ಕಾರ್ತಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕುಸ್ತಿಯ ಎರಡನೇ ದಿನದ ಪಂದ್ಯಾವಳಿ ಗುರುವಾರ ಸಂಜೆ ನಡೆಯಿತು. 60 ರಿಂದ 70 ಕುಸ್ತಿಪಟುಗಳು ಪಂದ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಹೊನ್ನಾಳಿ: ಪಟ್ಟಣದ ದೊಡ್ಡಕೇರಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯಿಂದ ಕಾರ್ತಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕುಸ್ತಿಯ ಎರಡನೇ ದಿನದ ಪಂದ್ಯಾವಳಿ ಗುರುವಾರ ಸಂಜೆ ನಡೆಯಿತು. 60 ರಿಂದ 70 ಕುಸ್ತಿಪಟುಗಳು ಪಂದ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಗುರುವಾರ ಸಂಜೆ 4 ಗಂಟೆಯಿಂದ ಆರಂಭವಾದ ಕುಸ್ತಿ ಪಂದ್ಯಗಳು ರಾತ್ರಿ 7.30 ಗಂಟೆವರೆಗೂ ನಡೆದವು. ಕೊಲ್ಲಾಪುರ, ಸೊಲ್ಲಾಪುರ, ಶಿವಮೊಗ್ಗ, ದಾವಣಗೆರೆ ರಾಣೆಬೆನ್ನೂರು, ಶಿಕಾರಿಪುರ, ಮಾಸೂರು, ಮುಂಡಗೋಡು ಸೇರಿದಂತೆ ರಾಜ್ಯ ವಿವಿಧ ಭಾಗಗಳಿಂದ ಯುವ ಪೈಲ್ವಾನರು ಭಾಗವಹಿಸಿದ್ದರು. ವಿಜೇತ ಪೈಲ್ವಾನರಿಗೆ ₹1 ಸಾವಿರದಿಂದ ₹5 ಸಾವಿರದವರೆಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಬೆಳ್ಳಿ ಬಳೆಗಳು, ಗಿಫ್ಟ್‌ಗಳು ಸೇರಿದಂತೆ ಹಲವಾರು ಕೊಡುಗೆಗಳನ್ನು ಸಹ ನೀಡಲಾಯಿತು.

ಕುಸ್ತಿ ಕಮಿಟಿ ಅಧ್ಯಕ್ಷ ಎಚ್.ಬಿ. ಅಣ್ಣಪ್ಪ ಮಾತನಾಡಿ, ಶುಕ್ರವಾರ ಮೂರನೇ ದಿನದ ಕೊನೆಯ ಪಂದ್ಯಾವಳಿಗಳು ನಡೆಯಲಿವೆ. ಈ ಪಂದ್ಯದಲ್ಲಿ ರಾಷ್ಟ್ರಮಟ್ಟದ ನಾಲ್ವರು ಪೈಲ್ವಾನರಿಗೆ ಆಹ್ವಾನ ನೀಡಿದ್ದು, ಅವರಿಗೆ ₹50 ಸಾವಿರ ನಗದು ಬಹುಮಾನ ಹಾಗೂ ಬೆಳ್ಳಿಗದೆ ಘೋಷಣೆ ಮಾಡಲಾಗಿದೆ. ಶುಕ್ರವಾರ ಮಧ್ಯಾಹ್ನ 4 ರಿಂದ ರಾತ್ರಿ 8 ಗಂಟೆವರೆಗೆ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಕುಸ್ತಿ ಅಭಿಮಾನಿಗಳು ಹಾಗೂ ಪೈಲ್ವಾನರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ದೇವರ ಗಣಮಕ್ಕಳು ಪ್ರಭುಸ್ವಾಮಿ, ಅಣ್ಣಪ್ಪ ಸ್ವಾಮಿ, ಎಚ್.ಬಿ. ಗಿಡ್ಡಪ್ಪ, ತೆಂಗಿನಮರದ ಮಾದಪ್ಪ, ಗೌಡರ ನರಸಪ್ಪ, ಎಚ್.ಡಿ. ವಿಜೇಂದ್ರಪ್ಪ, ಗಾಳಿ ನಾಗರಾಜ್, ದಿಡಗೂರು ಫಾಲಾಕ್ಷಪ್ಪ, ಮಾಜಿ ಸೈನಿಕ ಎಂ. ವಾಸಪ್ಪ, ಎಂ.ಎಸ್. ಫಾಲಾಕ್ಷಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ್‌ಕುಮಾರ್, ಪುರಸಭೆ ಮುಖ್ಯಾಧಿಕಾರಿ ಟಿ. ಲೀಲಾವತಿ ಸೇರಿದಂತೆ ಅತಿಥಿಗಳು, ಗಣ್ಯರು ಹಾಗೂ ಕುಸ್ತಿ ಕಮಿಟಿ ಪದಾಧಿಕಾರಿಗಳು ಭಾಗವಹಿಸಿದ್ದರು.

- - - -13ಎಚ್.ಎಲ್.ಐ1.ಜೆಪಿಜಿ:

ಹೊನ್ನಾಳಿ ಶ್ರೀ ಬೀರಲಿಂಗೇಶ್ವರ ಟ್ರಸ್ಟ್ ಕಮಿಟಿಯಿಂದ ನಡೆದ ಎರಡನೇ ದಿನದ ಕುಸ್ತಿ ಪಂದ್ಯಾವಳಿಯಲ್ಲಿ ಪೈಲ್ವಾನರು ಗೆಲವಿಗಾಗಿ ಕಸರತ್ತು ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ ಸುಗ್ಗಿ ಸಂಕ್ರಾಂತಿ
ಕೆರೂರು ಗ್ರಾಮಸ್ಥರಿಂದ ರಸ್ತೆ ಅತಿಕ್ರಮಣ ತೆರವಿಗೆ ಗಡುವ ನಿಗದಿ