ಕನ್ನಡಪ್ರಭ ವಾರ್ತೆ ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್‌ಗಳಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಪ್ರಕಾಶ ಅಕ್ಕಲಕೋಟ ವಿಶ್ವಾಸ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್‌ಗಳಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಪ್ರಕಾಶ ಅಕ್ಕಲಕೋಟ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ನಗರದ ಡೋಹರ ಗಲ್ಲಿಯಲ್ಲಿ ಹಾಗೂ ಅಗಸರ ಗಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮನೆಮನೆಗೆ ತೆರಳಿ ಕರಪತ್ರ ಹಂಚಿ ಮತಯಾಚಿಸಿದರು. ಜಿಲ್ಲೆಯ ಎಲ್ಲಾ ಬೂತ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅತ್ಯುತ್ಸಾಹದಲ್ಲಿ ಪ್ರಚಾರದಲ್ಲಿ ತೊಡಗಿದ್ದು, ನಮ್ಮ ಅಭ್ಯರ್ಥಿ ರಮೇಶ ಜಿಗಜಿಣಗಿ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಕಳೆದ ಹತ್ತು ವರ್ಷಗಳ ಮೋದಿಯವರ ಆಡಳಿತದಲ್ಲಿ ಇಡೀ ವಿಶ್ವವೇ ತಿರುಗಿ ನೋಡುವಂತೆ ಅಭಿವೃದ್ಧಿ ಗಮನಿಸಿರುವ ಜನ ಮೋದಿ ಆಡಳಿತ ಮೆಚ್ಚಿಕೊಂಡು ಈ ಬಾರಿಯೂ ಬಿಜೆಪಿ ಬೆಂಬಲಿಸಲಿದ್ದಾರೆ ಎಂದರು.
ಈ ವೇಳೆ ಪಾಲಿಕೆ ಸದಸ್ಯ ರಾಹುಲ್ ಜಾಧವ, ಮುಖಂಡರಾದ ಸಂತೋಷ ಬಾಗಲಕೋಟ, ಚಂದ್ರಕಾಂತ ಪೋಳ, ಶಂಕರ ಶೇರಖಾನೆ, ಗುರುರಾಜ ಇಂಗಳೆ, ಸುನಿಲ ಪೋಳ, ಜೀವನ ಹಿಪ್ಪರಗಿ, ಶೇಖರ ಬಾಗಲಕೋಟ ಸೇರಿದಂತೆ ಹಲವರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.