ಕನ್ನಡಪ್ರಭ ವಾರ್ತೆ ಅಮೀನಗಡ ಸಮೀಪದ ಸೂಳೇಬಾವಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 102 ರಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮತ ಚಲಾಯಿಸಿದರು. ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಲೋಕಸಭೆಗೆ ವಿದ್ಯಾವಂತೆ ಹಾಗೂ ಕ್ರಿಯಾಶೀಲ ಅಭ್ಯರ್ಥಿಯನ್ನು ಕಾಂಗ್ರೆಸ್ ನಿಲ್ಲಿಸಿದ್ದು, ಜಿಲ್ಲೆಯ ಸಂಪೂರ್ಣ ಪ್ರಗತಿಗೆ ಕಂಕಣಬದ್ಧರಾಗಿದ್ದೇವೆ. ಕಾಂಗ್ರೆಸ್ ಗೆಲುವಿನ ಉತ್ತಮ ವಾತಾವರಣವಿದೆ ಎಂದರು.
ಕನ್ನಡಪ್ರಭ ವಾರ್ತೆ ಅಮೀನಗಡ
ಸಮೀಪದ ಸೂಳೇಬಾವಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 102 ರಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮತ ಚಲಾಯಿಸಿದರು. ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಲೋಕಸಭೆಗೆ ವಿದ್ಯಾವಂತೆ ಹಾಗೂ ಕ್ರಿಯಾಶೀಲ ಅಭ್ಯರ್ಥಿಯನ್ನು ಕಾಂಗ್ರೆಸ್ ನಿಲ್ಲಿಸಿದ್ದು, ಜಿಲ್ಲೆಯ ಸಂಪೂರ್ಣ ಪ್ರಗತಿಗೆ ಕಂಕಣಬದ್ಧರಾಗಿದ್ದೇವೆ. ಕಾಂಗ್ರೆಸ್ ಗೆಲುವಿನ ಉತ್ತಮ ವಾತಾವರಣವಿದೆ ಎಂದರು. ಅಮೀನಗಡ ಸಮೀಪದ ಸೂಳೇಬಾವಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ102ರಲ್ಲಿ ಗ್ರಾಮದ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಜಡಿಸಿದ್ದೇಶ್ವರ ಸ್ವಾಮೀಜಿ ಅವರ ಪರಿಚಾರಕ ದಾದಾಪೀರ್ ಪಾಚೇಸಾಬ ತಂಗಡಗಿ ಅವರ ಸಹಕಾರದಿಂದ ಮತದಾನ ಮಾಡಿದರು.
ಅಮೀನಗಡ ಪಟ್ಟಣದ ಮತಗಟ್ಟೆ ಸಂಖ್ಯೆ 260ರಲ್ಲಿ ಪಟ್ಟಣದ ಪ್ರಭುಶಂಕರೇಶ್ವರ ಗಚ್ಚಿನಮಠದ ಪೀಠಾಧಿಪತಿ ಶಂಕರರಾಜೇಂದ್ರ ಶ್ರೀಗಳು ಮತದಾನ ಮಾಡಿದರು.
ಸಮೀಪದ ಸೂಳೇಬಾವಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 104ರಲ್ಲಿ, ರಾಜ್ಯ ದೇವಾಂಗ ಸಮಾಜದ ಅಧ್ಯಕ್ಷ,ನೇಕಾರ ಧುರೀಣ ರವೀಂದ್ರ ಕಲಬುರ್ಗಿ ಮತ ಚಲಾಯಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.