ದಲಿತ ಪರ ಸಂಘಟನೆಗಳಿಂದ ಶಾಸಕ ಶ್ರೀನಿವಾಸ್ ವಿರುದ್ಧ ಪೊಲೀಸರಿಗೆ ದೂರು

KannadaprabhaNewsNetwork |  
Published : Mar 26, 2026, 02:00 AM IST
24 ಸಿಕೆ.ಎಂ 1ತರೀಕೆರೆ ಶಾಸಕರ ದಲಿತ ವಿರೋಧಿ ಹೇಳಿಕೆಯನ್ನು ಖಂಡಿಸಿ ಅಜ್ಜಂಪುರ ನಗರದ ಗಾಂಧಿ ವೃತ್ತದಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ದಲಿತ ಸಂಘಟನೆಯ ಮುಖಂಡರುಗಳು ಅಜ್ಜಂಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷರಿಗೆ ದೂರು ದಾಖಲಿಸುವಂತೆ ಮನವಿ ಮಾಡಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು:ತರೀಕೆರೆ ಶಾಸಕರ ದಲಿತ ವಿರೋಧಿ ಹೇಳಿಕೆ ಖಂಡಿಸಿ ಅಜ್ಜಂಪುರ ನಗರದ ಗಾಂಧಿ ವೃತ್ತದಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ದಲಿತ ಸಂಘಟನೆ ಮುಖಂಡರು ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು:ತರೀಕೆರೆ ಶಾಸಕರ ದಲಿತ ವಿರೋಧಿ ಹೇಳಿಕೆ ಖಂಡಿಸಿ ಅಜ್ಜಂಪುರ ನಗರದ ಗಾಂಧಿ ವೃತ್ತದಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ದಲಿತ ಸಂಘಟನೆ ಮುಖಂಡರು ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಂತರ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಪೊಲೀಸ್ ಠಾಣೆಗೆ ದಾವಿಸಿ ಸ್ಥಳೀಯ ಶಾಸಕರ ವಿರುದ್ಧ ದೂರು ನೀಡಿ ಎಫ್.ಐ.ಆರ್ ದಾಖಲಿಸುವಂತೆ ಆಗ್ರಹಿಸಲಾಯಿತು.ದಲಿತ ಸಂಘಟನೆ ಮುಖಂಡ ಸುನಿಲ್ ದೊರನಾಳು ಮಾತನಾಡಿ, ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಗ್ರಾಮದ ಬಸವರಾಜ್ ಕಳೆದ ಮಾ. 13 ಶನಿವಾರ ಸಂಜೆ, 7 ಗಂಟೆ ಸಮಯದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಸರ್ಕಾರಿ ಕಾಮಗಾರಿಗಳ ಗುದ್ದಲಿ ಪೂಜೆಗೆಂದು ಶಿವನಿ ಗ್ರಾಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ , ಸಾರ್ವಜನಿಕರನ್ನು ಉದ್ದೇಶಿಸಿ ಶಿವನಿ ಬಸ್ ನಿಲ್ದಾಣದಲ್ಲಿ ಮಾತನಾಡುವಾಗ ಭದ್ರಾ ಮೇಲ್ದಂಡೆ ಯೋಜನೆ ಹನಿ ನೀರಾವರಿ ಪರಿಕರಗಳನ್ನು ಸರ್ಕಾರ ನೀಡಿದ್ದು ಅವುಗಳನ್ನು ದಲಿತರು ತಮ್ಮ ಚಟಗಳಿಗೆ ಮಾರಿಕೊಂಡಿದ್ದಾರೆ ಎಂದು ಸಾರ್ವಜನಿಕವಾಗಿ ನಿಂದಿಸಿ ಅಪಮಾನ ಮಾಡಿರುತ್ತಾರೆ. ದಲಿತರ ಬಗ್ಗೆ ಅಗೌರವಾಗಿ ಮಾತನಾಡಿ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಜ್ಜಂಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಿಗೆ ದೂರು ಸಲ್ಲಿಸುವ ಜೊತೆ ಈ ವಿಷಯವಾಗಿ ರಾಜ್ಯಪಾಲರಿಗೆ ಕಳುಹಿಸುವಂತೆ ಒತ್ತಾಹಿಸಿದರು.ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಬಸವರಾಜ್ ಬಗ್ಗವಳ್ಳಿ ಒಂಕಾರಪ್ಪ ಮಹಾಂತೇಶ ಭಕ್ತನಕಟ್ಟೆ ಕೃಷ್ಣಮೂರ್ತಿ ನಾಗರಾಜ್, ಶೃತಿ ಹಾಗೂ ಇನ್ನಿತರ ದಲಿತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.24 ಸಿಕೆ.ಎಂ 1ತರೀಕೆರೆ ಶಾಸಕರ ದಲಿತ ವಿರೋಧಿ ಹೇಳಿಕೆಯನ್ನು ಖಂಡಿಸಿ ಅಜ್ಜಂಪುರ ನಗರದ ಗಾಂಧಿ ವೃತ್ತದಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ದಲಿತ ಸಂಘಟನೆಯ ಮುಖಂಡರುಗಳು ಅಜ್ಜಂಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷರಿಗೆ ದೂರು ದಾಖಲಿಸುವಂತೆ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನವನ ಸಮಸ್ಯೆಗಳಿಗೆ ವಚನಗಳಲ್ಲಿ ಪರಿಹಾರವಿದೆ: ಡಾ.ಸಿ.ಸೋಮಶೇಖರ್
ಮದ್ದೂರು ನಗರಸಭೆ: 1.15 ಕೋಟಿ ರು. ಉಳಿತಾಯ ಬಜೆಟ್ ಮಂಡನೆ