ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಲಿತಪರ ಸಂಘಟನೆಗಳಿಂದ ತಮಟೆ ಚಳವಳಿ

KannadaprabhaNewsNetwork |  
Published : Nov 11, 2025, 01:45 AM IST
10ಕೆಎಂಎನ್ ಡಿ25  | Kannada Prabha

ಸಾರಾಂಶ

ದಲಿತರಿಗೆ ಆಶ್ರಯ ಮನೆ ಮತ್ತು ಉಚಿತ ನಿವೇಶನ ಒದಗಿಸಬೇಕು. ಹಲವು ವರ್ಷಗಳಿಂದಲೂ ದಲಿತ ಸಂಘಟನೆಗಳು ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಈ ಬಗ್ಗೆ ಸರ್ಕಾರ, ತಾಲೂಕು ಆಡಳಿತ, ಜಿಲ್ಲಾಡಳಿತಲಿ ಯಾವುದೇ ಕ್ರಮ ಕೈಗೊಂಡಿಲ್ಲ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣದ ಪ್ರಮುಖ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆ, ಹಳೇ ಕಿಕ್ಕೇರಿ ರಸ್ತೆಗೆ ಅಂಬೇಡ್ಕರ್ ರಸ್ತೆ ನಾಮಕರಣ ಮಾಡಿ ಸ್ವಾಗತ ಕಮಾನು ನಿರ್ಮಾಣ. ದಲಿತರಿಗೆ ಆಶ್ರಯ ಮನೆ ಮತ್ತು ಉಚಿತ ನಿವೇಶನ ಒದಗಿಸಬೇಕು ಎಂದು ಒತ್ತಾಯಿಸಿ ದಲಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪಟ್ಟಣದಲ್ಲಿ ತಮಟೆ ಚಳವಳಿ ನಡೆಸಿದರು.

ತಾಲೂಕು ದಲಿತ ಸಂಘಟನೆಗಳ ಒಕ್ಕೂಟ, ಛಲವಾದಿ ಮಹಾಸಭಾ, ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ದಲಿತ ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ತಮಟೆ ಚಳವಳಿ ಮೂಲಕ ಮೆರವಣಿಗೆ ನಡೆಸಿದ ಸಾವಿರಾರು ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದರು.

ತಾಲೂಕು ಎದುರು, ಪಟ್ಟಣದ ಟಿ.ಬಿ.ವೃತ್ತದ ಬಳಿ, ಪ್ರಮುಖ ವೃತ್ತಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಬೇಕು ಹಾಗೂ ಪಟ್ಟಣದ ಹಳೆ ಕಿಕ್ಕೇರಿ ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಿ ಸ್ವಾಗತ ಕಮಾನು ನಿರ್ಮಾಣ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ದಲಿತರಿಗೆ ಆಶ್ರಯ ಮನೆ ಮತ್ತು ಉಚಿತ ನಿವೇಶನ ಒದಗಿಸಬೇಕು. ಹಲವು ವರ್ಷಗಳಿಂದಲೂ ದಲಿತ ಸಂಘಟನೆಗಳು ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಈ ಬಗ್ಗೆ ಸರ್ಕಾರ, ತಾಲೂಕು ಆಡಳಿತ, ಜಿಲ್ಲಾಡಳಿತಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಂತರ ಗ್ರೇಡ್-1 ತಹಸೀಲ್ದಾರ್ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜಯ್ಯ, ಸಂಚಾಲಕ ಸೋಮಸುಂದರ್, ಉಪಾಧ್ಯಕ್ಷ ಡಿ.ಜಿ.ಎಸ್.ಗಂಗಾಧರ್, ಛಲವಾದಿ ಮಹಾಸಭಾ ಅಧ್ಯಕ್ಷ ಊಚನಹಳ್ಳಿ ನಟರಾಜ್, ಜಿಲ್ಲಾ ಉಸ್ತುವಾರಿ ಮಾಂಬಳ್ಳಿ ಜಯರಾಂ, ಕದಸಂಸ ಸಂಚಾಲಕ ಲಕ್ಷ್ಮೀ ಪುರ ರಂಗಸ್ವಾಮಿ, ನಾಟನಹಳ್ಳಿ ಸೋಮರಾಜು, ಸಿಂಧಘಟ್ಟ ಜಗದೀಶ್, ಹಳೆಯೂರು ದೇವರಾಜು, ಸಂತೋಷ್‌ಕುಮಾರ್, ಬಂಡಿಹೊಳೆ ರಮೇಶ್, ಕತ್ತರಘಟ್ಟ ರಾಜೇಶ್, ದಲಿತ ಸೇನೆ ಜಿಲ್ಲಾಧ್ಯಕ್ಷ ಎನ್.ಜೆ.ಮಂಜು, ತಾಲೂಕು ಅಧ್ಯಕ್ಷ ಚೌಡೇನಹಳ್ಳಿ ದೇವರಾಜು, ಗಿರಿ, ವಡ್ಡರಹಳ್ಳಿ ರಮೇಶ್, ಚನ್ನಕೃಷ್ಣ, ಮುದುಗೆರೆ ಮಹೇಂದ್ರ, ಬಂಡಿಹೊಳೆ ಕೃಷ್ಣಮೂರ್ತಿ, ಹರಿಹರಪುರ ನರಸಿಂಹ, ಐಪನಹಳ್ಳಿ ರವಿ, ಅಕ್ಕಿಹೆಬ್ಬಾಳು ಗಣೇಶ್, ಆನಂದ್, ಸೂರಿ, ಅಂಬೇಡ್ಕರ್ ಮಹಿಳಾ ಹೋರಾಟ ಸಂಘಟನೆ ಕಮಲಾಕ್ಷಿ, ಕರವೇ ಸ್ವಾಭಿಮಾನಿ ಸೇನೆ ಅಧ್ಯಕ್ಷ ಸಮೀರ್ ಸೇರಿದಂತೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿ ಮುಸ್ಲಿಂ ಯುವಕರ ಸಂಘದ ಸದಸ್ಯರ ಬೆಂಬಲ ಸೂಚಿಸಿ ಭಾಗವಹಿಸಿದ್ದರು.

PREV

Recommended Stories

ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಮೋಸ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಸ್ಪಿ ಕಾರ್ಯಕರ್ತರಿಂದ ಪ್ರತಿಭಟನೆ