ಬ್ಯಾಡಗಿ: ಹಿಂದೂ ಕಾರ್ಯಕರ್ತ ಸುಹಾಸ್‌ಶೆಟ್ಟಿ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ‍್ಯಕರ್ತರು ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟಿಸಿದರು.ಪಟ್ಟಣದ ಸುಭಾಸ್ ವೃತ್ತದಿಂದ ಅರಂಭವಾದ ಮೆರವಣಿಗೆ ಹಳೇ ಪುರಸಭೆ ಎದುರು ಸಂಪನ್ನಗೊಂಡಿತು. ದಾರಿಯುದ್ದಕ್ಕೂ ಜಿಹಾದಿ ಮನಸ್ಥಿತಿಗಳ ವಿರುದ್ಧ ಘೋಷಣೆಗಳನ್ನು ಹಾಕಿದರು.
ಹಾವೇರಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಗಾಲಿ ಕುರ್ಚಿ ಹಾಗೂ ಶ್ರವಣೋಪಕರಣಗಳ ವಿತರಣೆ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮೇ 8ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತದ ಸಭಾಭವನದಲ್ಲಿ ಜರುಗಲಿದೆ.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಚೇರಮನ್ ಸಂಜೀವಕುಮಾರ ನೀರಲಗಿ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿಗಳು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಅಧ್ಯಕ್ಷ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಉಪಾಧ್ಯಕ್ಷರಾದ ರುಚಿ ಬಿಂದಲ್ ಹಾಗೂ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಆಶು ನದಾಫ್ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಗಾಲಿ ಕುರ್ಚಿ ಹಾಗೂ ಶ್ರವಣೋಪಕರಣಗಳ ವಿತರಣೆ ಮಾಡಲಿದ್ದಾರೆ.ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ. ಪ್ರದೀಪಕುಮಾರ ಎಂ.ವಿ. ಅವರು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಲಿದ್ದಾರೆ.