ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕನ್ನಡಪರ ಸಂಘಟನೆಗಳು ಬದ್ಧ

KannadaprabhaNewsNetwork |  
Published : Jun 21, 2024, 01:09 AM IST
(ಪೋಟೊ 20 ಬಿಕೆಟಿ2, ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ, ವಿವಿಧ ಸಂಘ ಸಂಸ್ಥೆಗಳ, ಸಾಹಿತಿ ಹಾಗೂ  ಕಲಾವಿದರ ಸಭೆಯು ಜರಗಿತು.) | Kannada Prabha

ಸಾರಾಂಶ

ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ, ವಿವಿಧ ಸಂಘ ಸಂಸ್ಥೆಗಳ, ಸಾಹಿತಿ ಹಾಗೂ ಕಲಾವಿದರ ಸಭೆ ಜರಗಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ನವನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ, ವಿವಿಧ ಸಂಘ ಸಂಸ್ಥೆಗಳ, ಸಾಹಿತಿ ಹಾಗೂ ಕಲಾವಿದರ ಸಭೆ ಜರಗಿತು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ, ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಜಿ. ತಿಪ್ಪರೆಡ್ಡಿ, ಹಾಗೂ ಅರ್ಜುನರೆಡ್ಡಿ ಹಂಚಿನಾಳ, ವಿಜಯಕುಮಾರ ಹುಣಸಿಕಟ್ಟಿ, ಜಿಲ್ಲಾ ಕರವೇ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ, ಕರವೇ ಶಿವರಾಮೇಗೌಡ ಬಣದ ಜಿಲ್ಲಾ ಸಂಚಾಲಕ ಪ್ರವೀಣ ಕಪಾಲೆ, ಮಹಿಳಾ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಲಕ್ಷ್ಮೀ ಗೌಡರ, ಪತ್ರಕರ್ತರಾದ ಕಿರಣ ಬಾಳಗೊಳ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದವರು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ನಿವೃತ್ತ ನೌಕರರ ಸಂಘ ಹಾಗೂ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳೆಲ್ಲರೂ ಜೂನ್ 29 ಮತ್ತು 30ರಂದು ನಡೆಯುವ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಸಮ್ಮೇಳನದ ಯಶಸ್ವಿಗೆ ಬದ್ಧವಾಗಿ ಸಮ್ಮೇಳನದ ಕಾರ್ಯಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತೇವೆ ಎಂದು ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಹೇಳಿದರು.

ಸಭೆಯಲ್ಲಿ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ, ಗೌರವ ಕೋಶಾಧ್ಯಕ್ಷ ಡಾ.ಸಿ.ಎಂ .ಜೋಶಿ, ಬಾಗಲಕೋಟೆ ತಾಲೂಕು ಕಸಾಪ ಅಧ್ಯಕ್ಷ ಪಾಮಡುರಂಗ ಸಣ್ಣಪ್ಪನವರ, ಸಿ.ಎನ್. ಬಾಳಕ್ಕನವರ, ಆರ್.ಸಿ. ಚಿತ್ತವಾಡಿಗಿ, ಸಾಹಿತಿ ಪಿ.ಎಂ. ಹುಗ್ಗಿ, ಶಿರೂರು ಹೊಬಳಿ ಅಧ್ಯಕ್ಷ ಸಂಜು ನಡುವಿನಮನಿ, ಕೆರೂರು ಹೊಬಳಿ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ, ಗುಳೇದಗುಡ್ಡ ತಾಲೂಕು ಅಧ್ಯಕ್ಷ ಡಾ.ಎಚ್.ಎಸ್. ಘಂಟಿ, ಕಲಾವಿದರಾದ ಪವಿತ್ರಾ ಜಕ್ಕಪ್ಪನವರ, ಎಲ್.ಎಚ್. ಕೊಣ್ಣೂರು, ಡಾ.ಉಮಾ ಅಕ್ಕಿ, ಪ್ರೊ.ಸಂಗಮೇಶ ಬ್ಯಾಳಿ, ಪ್ರಿಯಾ ಕಟ್ಟಿ, ಪುಂಡಲೀಕ ಹಲಕುರ್ಕಿ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!