ರಾಜ್ಯದಲ್ಲಿ ಜನಪರ-ದೃಢ ಸರ್ಕಾರ ಅಧಿಕಾರಕ್ಕೆ: ಬೊಮ್ಮಾಯಿ

KannadaprabhaNewsNetwork |  
Published : Oct 16, 2026, 02:00 AM IST
ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರ ಪರ ಸಂಸದ ಬಸವರಾಜ ಬೊಮ್ಮಾಯಿ ಧಾರವಾಡದಲ್ಲಿ ಮತಯಾಚನೆ ನಡೆಸಿದರು.  | Kannada Prabha

ಸಾರಾಂಶ

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಜನಪರ ಹಾಗೂ ದೃಢವಾದ ಸರ್ಕಾರದ ಆಡಳಿತ ಬರಲಿದೆ ಮತ್ತು ಬದಲಾವಣೆಯ ವಾತಾವರಣ ನಿರ್ಮಾಣವಾಗಲಿದೆ.

ಧಾರವಾಡ:

ವಿಧಾನ ಪರಿಷತ್‌ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕೆಂದು ಮನವಿ ಮಾಡಿರುವ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಜನಪರ ಹಾಗೂ ದೃಢವಾದ ಸರ್ಕಾರದ ಆಡಳಿತ ಬರಲಿದೆ ಮತ್ತು ಬದಲಾವಣೆಯ ವಾತಾವರಣ ನಿರ್ಮಾಣವಾಗಲಿದೆ ಹೇಳಿದರು.

ಇಲ್ಲಿಯ ಭಾರತಿ ನಗರದಲ್ಲಿರುವ ಲಿಂಗರಾಜ ಸಭಾಭವನದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರ ಪರ ಮತಯಾಚನೆ ನಡೆಸಿದ ಅವರು, ದೇಶದಲ್ಲಿ ರಾಜಕಾರಣ ಹಾಳಾಗಬೇಕು ಎಂದು ಯಾವ ಪಕ್ಷ ಹೋರಾಟ ಮಾಡುತ್ತಿದೆಯೋ ಅದೇ ಪಕ್ಷ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ. ಈ ಸರ್ಕಾರದಲ್ಲಿ ದಿನಕ್ಕೊಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ರಾಜ್ಯದಲ್ಲಿ ಬದಲಾವಣೆಯ ಪರ್ವ ಆರಂಭವಾಗಲಿದೆ ಎಂದರು.

ಪ್ರಸ್ತುತ ರಾಜ್ಯದಲ್ಲಿ ಸರ್ಕಾರವೇ ಹಗರಣ ಹಾಗೂ ವಿವಾದಗಳನ್ನು ಸೃಷ್ಟಿಸುತ್ತಿದೆ. ರಾಜ್ಯದಲ್ಲಿ ಲಕ್ಷಾಂತರ ಸಾಲದ ಹಗರಣಗಳು ನಡೆಯುತ್ತಿದ್ದು, ಸರ್ಕಾರದ ಆದಾಯ ಹೆಚ್ಚಿದೆಯಾದರೂ ಅಭಿವೃದ್ಧಿ ಕಾರ್ಯಗಳು ಮಾತ್ರ ಕುಂಠಿತಗೊಂಡಿವೆ ಎಂದು ದೂರಿದರು.

ಇಂದು ಜಗತ್ತಿನಾದ್ಯಂತ ಹಾಗೂ ವಿವಿಧ ರಾಷ್ಟ್ರಗಳಲ್ಲಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ವೈರ್‌ಲೆಸ್ ಕಮ್ಯುನಿಕೇಷನ್ ಬಳಸಿ ರಾಜಕಾರಣವನ್ನು ನಿಯಂತ್ರಿಸುವ ಪ್ರಯತ್ನಗಳು ನಡೆಯುತ್ತಿವೆ. ನಮ್ಮ ದೇಶದಲ್ಲಿ ರಾಜಕೀಯ ಬದಲಾವಣೆ ತರಲು ಕೇವಲ ದೊಡ್ಡ ಪಕ್ಷಗಳನ್ನು ಕಟ್ಟಿ ಸಾರ್ವಜನಿಕ ಭಾಷಣ ಮಾಡುವುದಕ್ಕಿಂತ ಹೆಚ್ಚಾಗಿ, ಭಾರತವು ಸಂಸ್ಕೃತಿ ಮತ್ತು ಸಂಸ್ಕಾರಕ್ಕೆ ಹೆಚ್ಚು ಒತ್ತು ನೀಡುವ ಸಾಂಸ್ಕೃತಿಕ ಪ್ರಜಾಪ್ರಭುತ್ವದ ರಾಷ್ಟ್ರವಾಗಿದೆ ಎಂದರು.

ಈ ವೇಳೆ ಬಿಜೆಪಿ ಮಂಡಳದ ಅಧ್ಯಕ್ಷ ಮಂಜುನಾಥ ಮಲ್ಲಿಗವಾಡ, ಮುಖಂಡರಾದ ಚಂದ್ರಶೇಖರ ಪಾಟೀಲ, ಬಸವರಾಜ ಗರಗ, ಸಂಜಯ ಕಪಟಕರ, ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ವಿಷ್ಣು ಕೊಲ್ಲಳ್ಳಿ, ಮಂಜುನಾಥ ಬಟ್ಟಣ್ಣವರ, ಚಂದ್ರಕಲಾ ಕೋಟಬಾಗಿ ಇದ್ದರು.

ಸಂಕನೂರಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹುಬ್ಬಳ್ಳಿ ನಗರದ ವಿವಿಧೆಡೆ ಮಿಂಚಿನ ಸಂಚಾರ ನಡೆಸಿ ಬಿಜೆಪಿ ಅಭ್ಯರ್ಥಿ ಎಸ್‌.ವಿ.ಸಂಕನೂರ ಪರವಾಗಿ ಅಬ್ಬರದ ಪ್ರಚಾರ ನಡೆಸಿದರು. ಇಲ್ಲಿನ ಕೆಎಲ್‌ಇ ಮೆಡಿಕಲ್‌ ಕಾಲೇಜ್‌, ಅಶೋಕನಗರ ನವನೀತ ಹಾಲ್‌ನಲ್ಲಿ ಸಭೆ ನಡೆಸಿ ಸೇರಿದಂತೆ ವಿವಿಧೆಡೆ ಮಿಂಚಿನ ಸಂಚಾರ ನಡೆಸಿ ಅಬ್ಬರದ ಪ್ರಚಾರ ಕೈಗೊಂಡರು. ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ, ಪದವೀಧರ, ನೌಕರರ, ಶಿಕ್ಷಕರ ಹಿತ ಕಾಪಾಡಲು ಬಿಜೆಪಿ ಅಭ್ಯರ್ಥಿ ಎಸ್‌.ವಿ. ಸಂಕನೂರಗೆ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್‌ಗೆ ಈ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕೆಂದರು.

ಈ ವೇಳೆ ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಶಾಸಕ ಮಹೇಶ ಟೆಂಗಿನಕಾಯಿ, ವಿಪ ಮಾಜಿ ಮಹಾಂತೇಶ ಕವಟಗಿಮಠ, ವೀರಣ್ಣ ಸವಡಿ, ಸಂತೋಷ ಚವ್ಹಾಣ, ಸಿದ್ದು ಮೊಗಲಿಶೆಟ್ಟರ್‌ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿ.15ರ ವರೆಗೆ ಕಾಲುವೆಗೆ ನೀರು ಹರಿಸಲು ರೈತ ಸಂಘ ಅಧ್ಯಕ್ಷ ಮಾಧವರೆಡ್ಡಿ ಆಗ್ರಹ
ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಪಾದ ಭಟ್ ಥಂಡಿಮನೆ ಅಸ್ತಂಗತ