ಬಡವರ ಪರವಾದ ಬಜೆಟ್: ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ

KannadaprabhaNewsNetwork |  
Published : Feb 17, 2024, 01:22 AM ISTUpdated : Feb 17, 2024, 03:42 PM IST
Karnataka Budget

ಸಾರಾಂಶ

ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ್ದು 15ನೇ ಐತಿಹಾಸಿಕ ಬಜೆಟ್ ಆಗಿದೆ. ಸಿದ್ದರಾಮಯ್ಯನವರದ್ದು ಗಿನ್ನಿಸ್ ದಾಖಲೆಯಾದಂತಾಗಿದೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ ಬಜೆಟ್ ಬಡವರ ಪರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ್ದು 15ನೇ ಐತಿಹಾಸಿಕ ಬಜೆಟ್ ಆಗಿದೆ. ಸಿದ್ದರಾಮಯ್ಯನವರದ್ದು ಗಿನ್ನಿಸ್ ದಾಖಲೆಯಾದಂತಾಗಿದೆ. ದೀನ, ದಲಿತ, ಶೋಷಿತ, ಬಡವರ ಪರ ಬಜೆಟ್ ಮಂಡಿಸಿದ್ದಾರೆಂದು ತಿಳಿಸಿದ್ದಾರೆ.

ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರು.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಿಎಂ ಘೋಷಣೆ ಮಾಡಿದ್ದು ಸ್ವಾಗತಾರ್ಹವಾಗಿದೆ. 

2024-25ನೇ ಸಾಲಿನಲ್ಲಿ 10 ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜ್ಯ ಸರಕಾರದ ವಿವಿಧ ವಸತಿ ಯೋಜನೆಗಳಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡುವುದು.

ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರಿಗೆ ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ 7 ಕೋಟಿ ರು. ವೆಚ್ಚದಲ್ಲಿ ಖರೀದಿಸುವುದು.

ರಾಜ್ಯದಲ್ಲಿನ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣವನ್ನು ನಬಾರ್ಡ್ ಸಹಯೋಗದೊಂದಿಗೆ 20 ಕೋಟಿ ರು. ವೆಚ್ಚದಲ್ಲಿ ಕೈಗೊಳ್ಳುವ ಕುರಿತು ಸಿಎಂ ಘೋಷಣೆ ಮಾಡಿದ್ದಾರೆ. 

ಮೀನುಗಾರಿಕೆ ಇಲಾಖೆಗೆ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಮಟ್ಟದ ಅನುದಾನ ಮೀಸಲಿಟ್ಟಿರುವುದಕ್ಕೆ ಕಮಕನೂರ ಹರ್ಷ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟಿ ರು. ಮೊತ್ತದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವಿ ರೈತ, ಬೆಂಗಳೂರು ಸಂಸ್ಥೆಗೆ ಮೋದಿ ಭೇಷ್‌
ಹಳ್ಳಿಯ ಜನರು ಅಡುಗೆಗೆ ಸೌದೆ ಬಳಸಿ - ನಗರ ಜನರು ಎಲೆಕ್ಟ್ರಿಕ್‌ ಸ್ಟವ್ ಉಪಯೋಗಿಸಿ : ಮುನಿಯಪ್ಪ