ಕೃಷಿ ವಿ.ವಿ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ತನಿಖೆಗೆ ಆದೇಶ

KannadaprabhaNewsNetwork |  
Published : Nov 26, 2026, 01:30 AM IST
 | Kannada Prabha

ಸಾರಾಂಶ

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಗಂಭೀರ ಲೋಪದೋಷ ಹಾಗೂ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿ ಕೃಷಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ಆದೇಶ ಹೊರಡಿಸಿದೆ.

ಕನ್ನಡಪ್ರಭ ವಾರ್ತೆ ರಾಯಚೂರು

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಗಂಭೀರ ಲೋಪದೋಷ ಹಾಗೂ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿ ಕೃಷಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ಆದೇಶ ಹೊರಡಿಸಿದೆ.

​ಕೃಷಿ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಈ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯಲ್ಲಿ ರಾಯಚೂರು ಜಿಲ್ಲಾಧಿಕಾರಿ, ಕೃಷಿ ಇಲಾಖೆಯ ಅಪರ ನಿರ್ದೇಶಕರು (ಆಡಳಿತ), ರಾಯಚೂರು ಸಹಾಯಕ ಆಯುಕ್ತರು ಹಾಗೂ ಕೃಷಿ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ (ಗ್ರೇಡ್-1) ಅವರು ಸದಸ್ಯರಾಗಿದ್ದಾರೆ.

ಪ್ರಕರಣದ ಹಿನ್ನೆಲೆ ಮತ್ತು ತನಿಖೆಯ ವ್ಯಾಪ್ತಿ: ಇಲ್ಲಿನ ಕೃಷಿ ವಿಜ್ಞಾನಗಳ ವಿವಿದಲ್ಲಿ ನಡೆದ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಸಂಬಂಧ ರಚಿಸಲಾಗಿದ್ದ ಪ್ರಾಥಮಿಕ ತನಿಖಾ ಸಮಿತಿಗೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ನೇಮ ಕಾತಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ನೀಡಿರಲಿಲ್ಲ. ಅಲ್ಲದೆ, ತನಿಖೆಗೆ ಸರಿಯಾಗಿ ಸಹಕರಿಸದೆ ನಿರ್ಲಕ್ಷ್ಯ ವಹಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

​ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಉನ್ನತ ಮಟ್ಟದ ಸಮಿತಿಯ ಮೂಲಕ ಸತ್ಯಾಸತ್ಯತೆ ಹೊರತರಲು ಮುಂದಾಗಿದೆ. ನೇಮಕಾತಿ ಸಂದರ್ಭದಲ್ಲಿ ನಡೆದಿರುವ ಆಡಳಿತಾತ್ಮಕ ಲೋಪದೋಷಗಳು, ಅಕ್ರಮ ನೇಮಕಾತಿ ಹಾಗೂ ಹುದ್ದೆಗಳಿಗಾಗಿ ದೊಡ್ಡ ಮಟ್ಟದಲ್ಲಿ ಹಣದ ವ್ಯವಹಾರ ನಡೆದಿರುವ ಆರೋಪಗಳ ಕುರಿತು ಈ ಸಮಿತಿಯು ಸಮಗ್ರವಾಗಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಕ್ಷಾಂಗಣ ತಾಳಮದ್ದಳೆ ಸಪ್ತಾಹ: ದಿ.ಎ.ಕೆ.ನಾರಾಯಣ ಶೆಟ್ಟಿ, ಮಹಾಬಲ ಶೆಟ್ಟಿ ಸಂಸ್ಮರಣೆ
ಎಂಆರ್‌ಪಿಎಲ್ ಸ್ಫೋಟ ಮನೆ ಹಾನಿ ಪರಿಶೀಲನೆಗೆ ಎನ್‌ಐಟಿಕೆ ಸಹಾಯ: ಡಿಸಿ