ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ: ಸದಸ್ಯರ ಆಕ್ರೋಶ

KannadaprabhaNewsNetwork |  
Published : Aug 30, 2025, 01:00 AM IST
ಕೆ ಕೆ ಪಿ ಸುದ್ದಿ 03: ನಗರಸಭಾ ಅಧ್ಯಕ್ಷೆ ಹೇಮಾರಾಜು ಅಧ್ಯಕ್ಷತೆಯಲ್ಲಿ ನಗರಸಭೆಯ ಸಾಮಾನ್ಯ ಸಭೆ ನಡೆಯಿತು.  | Kannada Prabha

ಸಾರಾಂಶ

ಕನಕಪುರ: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರಸಭಾ ವ್ಯಾಪ್ತಿಯ ಗುತ್ತಿಗೆದಾರದ ಮಂದಗತಿಯ ಕಾಮಗಾರಿಯಿಂದ ಜನ ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವುದಾಗಿ ನಗರಸಭಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿರು.

ಕನಕಪುರ: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರಸಭಾ ವ್ಯಾಪ್ತಿಯ ಗುತ್ತಿಗೆದಾರದ ಮಂದಗತಿಯ ಕಾಮಗಾರಿಯಿಂದ ಜನ ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವುದಾಗಿ ನಗರಸಭಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿರು. ನಗರಸಭಾಧ್ಯಕ್ಷೆ ಹೇಮಾರಾಜು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು ರಸ್ತೆ ಕಾಮಗಾರಿಯನ್ನು ನಿಧಾನಗತಿಯಲ್ಲಿ ಮಾಡುವುದರ ಜೊತೆಗೆ ಯುಜಿಡಿ ಕಾಮಗಾರಿ ಮಾಡದೆ ರಸ್ತೆ ಮಾಡುತ್ತಿದ್ದು, ರಸ್ತೆಗಳಿಗೆ ಮತ್ತೆ ಸಂಪರ್ಕ ನೀಡಿದರೆ ಸಾರ್ವಜನಿಕರು ಪ್ರತಿನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸದಸ್ಯರಾದ ಕೋಟೆ ಕಿರಣ್, ಜಯರಾಂ, ಸ್ಟುಡಿಯೋ ಚಂದ್ರು, ವಿಜಯಕುಮಾರ್ ಸೇರಿದಂತೆ ಹಲವು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭಾ ಆಯುಕ್ತ ಎಂ.ಎಸ್.ಮಹದೇವ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾಗಲಿ, ಗುತ್ತಿಗೆದಾರರಾಗಲಿ ಎಂ.ಜಿ.ರಸ್ತೆ ಕಾಮಗಾರಿಯ ಯಾವುದೇ ಸಮಸ್ಯೆ ಬಗ್ಗೆ ನಗರಸಭಾ ಅಧಿಕಾರಿಗಳೊಂದಿಗೆ ಚರ್ಚೆ ಮಾಡದೆ ತಮ್ಮ ಮನಸೋ ಇಚ್ಛೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ನಗರಸಭೆಯ ಇಂಜಿನಿಯರ್‌ಗಳ ಬಳಿ ಕುಳಿತು ರಸ್ತೆ ಕಾಮಗಾರಿಯ ಬಗ್ಗೆ ಚರ್ಚಿಸಿ ಜನರ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ಸಮರ್ಪಕವಾಗಿ ಬೀದಿ ದೀಪಗಳನ್ನು ಅಳವಡಿಸಲು ಸೂಚಿಸಿದ ಸದಸ್ಯರು, ನಗರ ವ್ಯಾಪ್ತಿಯಲ್ಲಿರುವ ಪರವಾನಗಿ ಪಡೆಯದ ಕುರಿ, ಕೋಳಿ, ಮಾಂಸದ ಅಂಗಡಿಗಳ ಮೇಲೆ ಯಾವುದೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾರ್ವಜನಿಕ ಇ-ಖಾತಾ ಬದಲಾವಣೆ ಅರ್ಜಿಯನ್ನು ಆನ್‌ಲೈನ್ ಮೂಲಕ ಪಡೆದು ಖಾತೆ ಮಾಡಿಕೊಡಲು ಬೇಕಾಗುವ ದಾಖಲೆಗಳ ಬಗ್ಗೆ ಮೊದಲೇ ಅವರಿಗೆ ಸೂಕ್ತ ಮಾಹಿತಿ ತಿಳಿಸಿ ನಂತರ ದಾಖಲೆಗಳನ್ನ ಪರಿಶೀಲಿಸಿ ಇ-ಖಾತಾ ಮಾಡಿಕೊಡಬೇಕು. ನಗರಸಭಾ ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಮಾಡಿರುವುದರಿಂದ ಯಾವುದೇ ಶುಭ ಸಮಾರಂಭಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗಿದೆ. ಇದನ್ನು ಉಲ್ಲಂಘಿಸಿ ಅಕ್ರಮವಾಗಿ ಪ್ಲಾಸ್ಟಿಕ್ ಬಳಕೆ ಮಾಡಿದಲ್ಲಿ ಕಾನೂನು ಕ್ರಮ ಜರುಗಿಸುವ ಜೊತೆಗೆ ಕಲ್ಯಾಣ ಮಂಟಪಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಯಿತು.

ನಿಗದಿತ ವೇಳೆಯಲ್ಲಿ ಕಾಮಗಾರಿ ಮುಗಿಸದ ಗುತ್ತಿಗೆದಾರರ ಗುತ್ತಿಗೆ ರದ್ದುಗೊಳಿಸಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದ ಸದಸ್ಯರು, ನಗರಸಭೆಯಲ್ಲಿ ಕೆಲ ನೌಕರರು ಯಾವುದೇ ಅನುಮತಿ ಪಡೆಯದೆ ಗೈರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.

ಸಭೆಯಲ್ಲಿ ನಗರಸಭಾ ಉಪಾಧ್ಯಕ್ಷ ಸೈಯದ್‌ ಸಾದಿಕ್ ಸೇರಿದಂತೆ ನಗರಸಭಾ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ 03:

ಕನಕಪುರ ನಗರಸಭಾ ಅಧ್ಯಕ್ಷೆ ಹೇಮಾರಾಜು ಅಧ್ಯಕ್ಷತೆಯಲ್ಲಿ ನಗರಸಭೆಯ ಸಾಮಾನ್ಯ ಸಭೆ ನಡೆಯಿತು. ನಗರಸಭಾ ಆಯುಕ್ತ ಎಂ.ಎಸ್.ಮಹದೇವ್‌, ಉಪಾಧ್ಯಕ್ಷ ಸೈಯದ್‌ ಸಾದಿಕ್, ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ಜಿಎಸ್ಟಿ ಸ್ಲ್ಯಾಬ್‌ ಕಡಿತದಿಂದ 2.5 ಲಕ್ಷ ಕೋಟಿ ರು. ನಷ್ಟ
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ