ಸಂಘದಲ್ಲಿ ಒಗ್ಗಟ್ಟು ಬಂದಾಗಲೇ ಸಮಸ್ಯೆ ಪರಿಹಾರ

KannadaprabhaNewsNetwork |  
Published : Feb 23, 2026, 01:45 AM IST
22ಎಚ್ಎಸ್ಎನ್6 :  | Kannada Prabha

ಸಾರಾಂಶ

ಶಿಕ್ಷಣ ಇಲಾಖೆಯ ನೌಕರರು ಒಳಒಗ್ಗಟ್ಟಿನಿಂದ ಸಂಘಟಿತರಾದರೆ ಸರ್ಕಾರವೂ ಸಮಸ್ಯೆಗಳಿಗೆ ಸ್ಪಂದಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಚೌಡಪ್ಪ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯಾಧ್ಯಕ್ಷ ಎಸ್. ಚೌಡಪ್ಪ ಕಿವಿಮಾತುಕನ್ನಡಪ್ರಭ ವಾರ್ತೆ ಹಾಸನ

ಶಿಕ್ಷಣ ಇಲಾಖೆಯ ನೌಕರರು ಒಳಒಗ್ಗಟ್ಟಿನಿಂದ ಸಂಘಟಿತರಾದರೆ ಸರ್ಕಾರವೂ ಸಮಸ್ಯೆಗಳಿಗೆ ಸ್ಪಂದಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಚೌಡಪ್ಪ ಹೇಳಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ, ಪದಗ್ರಹಣ ಹಾಗೂ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಹಲವಾರು ಪುಸ್ತಕಗಳನ್ನು ಬರೆದಿದ್ದೇನೆ. ಪ್ರತಿ ಇಲಾಖೆಯಲ್ಲೂ ವೃತ್ತಿ ಸಂಘಗಳಿವೆ. ಶಿಕ್ಷಕರ ಸಂಘದಲ್ಲಿ ಇರುವ ಸಮಸ್ಯೆಗಳ ಶೇಕಡಾ ೭೦ ಭಾಗವನ್ನು ನಾವು ನಮ್ಮಲ್ಲೇ ಕುಳಿತು ಬಗೆಹರಿಸಿಕೊಳ್ಳಬೇಕು, ಅವು ರಾಜ್ಯ ಮಟ್ಟಕ್ಕೆ ಹೋಗಬಾರದು ಎಂದು ಕಿವಿಮಾತು ಹೇಳಿದರು. ರಾಜ್ಯದಲ್ಲಿ ಸುಮಾರು ನಾಲ್ಕು ಲಕ್ಷ ಸರ್ಕಾರಿ ಮತ್ತು ಅನುದಾನಿತ ವಸತಿ ಶಾಲೆಗಳ ಶಿಕ್ಷಣ ಇಲಾಖೆ ನೌಕರರು ಇದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ನಾವು ಒಂದೇ ವೇದಿಕೆಯಲ್ಲಿ ಒಂದಾಗಿದ್ದರೆ, ಸರ್ಕಾರವೂ ನಮ್ಮ ಮಾತು ಕೇಳದೇ ಇರಲು ಸಾಧ್ಯವಿಲ್ಲ. ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾನತೆ ಮತ್ತು ಒಗ್ಗಟ್ಟು ಸಾಧಿಸಿದಾಗ ಮಾತ್ರ ಗುರಿ ಸಾಧನೆ ಸಾಧ್ಯ ಎಂದು ಸಲಹೆ ನೀಡಿದರು. ಹುದ್ದೆಗಳ ಹೆಸರಿಗಿಂತ ಸದಸ್ಯರ ಒಗ್ಗಟ್ಟು ಮುಖ್ಯ; ಸಂಘವು ಪ್ರಜಾಪ್ರಭುತ್ವ, ಜಾತ್ಯಾತೀತ ಹಾಗೂ ರಾಷ್ಟ್ರೀಯ ಚಿಂತನೆಗಳನ್ನು ಬೆಳೆಸುವ ಜೊತೆಗೆ ಸ್ವಸಹಾಯ, ಸ್ವಾವಲಂಬನೆ ಮತ್ತು ಸ್ವಾಭಿಮಾನವನ್ನು ಬಲಪಡಿಸಲು ಕಟಿಬದ್ಧವಾಗಿದೆ ಎಂದರು.ಜಿಲ್ಲಾಧ್ಯಕ್ಷ ಡಿ. ರಮೇಶ್ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ನಾವು ಎಲ್ಲರೂ ಒಂದೇ ಕುಟುಂಬದವರು. ನಾನು ಯಾವುದೇ ರಾಜಕೀಯ ಸಂಘಟನೆಯೊಂದಿಗೆ ಸಂಬಂಧ ಹೊಂದಿಲ್ಲ. ೧ನೇ ತರಗತಿಯಿಂದ ಪಿಯುವರೆಗೆ ಕೆಪಿಎಸ್ ಮಾದರಿಯಲ್ಲಿ ಎಲ್ಲ ವೃಂದಗಳನ್ನೂ ಒಂದೇ ಸಂಘಟನೆಯಡಿ ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.ಶಿಕ್ಷಣ ಇಲಾಖೆ ನೌಕರರ ಸಾಮಾನ್ಯ ಹಿತಾಸಕ್ತಿಯನ್ನು ರಕ್ಷಿಸುವುದು, ನೌಕರರ ನಡುವೆ ಬಾಂಧವ್ಯ ಬೆಳೆಸುವುದು ಹಾಗೂ ಪರಸ್ಪರ ಸಹಕಾರದ ಮನೋಭಾವ ವೃದ್ಧಿಸುವುದು ಸಂಘದ ಪ್ರಮುಖ ಗುರಿಗಳಾಗಿವೆ. ಸೇವಾ ವೇತನ, ನಿವೃತ್ತಿ ವೇತನ, ವಿವಿಧ ಭತ್ಯೆಗಳು ಹಾಗೂ ಭವಿಷ್ಯ ನಿಧಿ ಸಂಬಂಧಿತ ವಿಚಾರಗಳಲ್ಲಿ ಸುಧಾರಣೆಗಾಗಿ ಕ್ರಮ ಕೈಗೊಳ್ಳುವುದು ಸಂಘದ ಧ್ಯೇಯವಾಗಿದೆ ಎಂದು ವಿವರಿಸಿದರು. ಜೊತೆಗೆ ಸಂಘದ ಚಟುವಟಿಕೆಗಳಿಗೆ ಅಗತ್ಯವಿರುವ ವಂತಿಕೆ ಮತ್ತು ದೇಣಿಗೆಗಳನ್ನು ಸಂಗ್ರಹಿಸಿ ಪಾರದರ್ಶಕವಾಗಿ ಬಳಸುವ ವ್ಯವಸ್ಥೆಯೂ ಮಾಡಲಾಗಿದೆ ಎಂದರು.ಸ್ವಜನ ಪಕ್ಷಪಾತ, ಕೋಮಭಾವನೆ, ಭ್ರಷ್ಟಾಚಾರ ಮತ್ತು ಸಾಮಾಜಿಕ ಭೇಧಭಾವಗಳಿಂದ ದೂರವಿದ್ದು ಸಾರ್ವಜನಿಕ ಸೇವೆಯಲ್ಲಿ ದಕ್ಷತೆ ಹೆಚ್ಚಿಸುವುದು ಹಾಗೂ ಶಿಕ್ಷಣ ಇಲಾಖೆ ನೌಕರರ ಶ್ರೇಯೋಭಿವೃದ್ಧಿ ಸಾಧಿಸುವುದು ಸಂಘದ ಮುಖ್ಯ ಉದ್ದೇಶ ಎಂದು ಹೇಳಿದರು.ಇದೇ ವೇಳೆ ಪದಾಧಿಕಾರಿಗಳ ಪದಗ್ರಹಣ ನೆರವೇರಿತು. ಇದೇ ಸಂದರ್ಭದಲ್ಲಿ ಜಿಲ್ಲೆಯ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು, ಬೋಧಕೇತರ ಹಾಗೂ ಲಿಪಿಕ ವರ್ಗದ ನೌಕರರಿಗೆ ಉತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ. ರಂಗನಾಥಸ್ವಾಮಿ, ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಎಸ್. ರವಿಪ್ರಕಾಶ್, ರಾಜ್ಯ ಉಪಾಧ್ಯಕ್ಷ ಎಸ್.ಎನ್. ಶಿವಕುಮಾರ್, ವಿಭಾಗೀಯ ಕಾರ್ಯಾಧ್ಯಕ್ಷೆ ಎಸ್.ಎನ್. ಶುಭಮಂಗಳ, ರಾಜ್ಯ ಜಂಟಿ ಕಾರ್ಯದರ್ಶಿ ಸಿ.ಎಂ. ನಾಗರತ್ನ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರಂಗನಾಥ್, ಕೆ.ಪಿ. ನಾರಾಯಣ್, ರಾಜ್ಯ ಪರಿಷತ್ ಸದಸ್ಯ ಎಸ್.ಎನ್. ಶಿವಕುಮಾರ್, ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಶ್ರೀಕಾಂತ್ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿವಿಲ್‌ ನ್ಯಾಯಾಧೀಶರಾಗಿ ಮಾಳೇನಳ್ಳಿಯ ಮಣಿಕಂಠ ಆಯ್ಕೆ
ಚೆಸ್‌ಕ್ರೀಡೆ ಮಕ್ಕಳ ಬುದ್ದಿ ವಿಕಸನಕ್ಕೆ ಸಹಕಾರಿ