ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲಾಗುವುದು: ಆರತಿ ಕೃಷ್ಣ

KannadaprabhaNewsNetwork |  
Published : Jan 30, 2024, 02:02 AM IST
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಡಾ. ಅರತಿ ಕೃಷ್ಣ ಅವರು ಮಾತನಾಡಿದರು. | Kannada Prabha

ಸಾರಾಂಶ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅನಿವಾಸಿ ಭಾರತೀಯ ಉಪಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಆರತಿ ಕೃಷ್ಣ ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲಾಗುವುದು ಎಂದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಸಮಾಲೋಚನಾ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲಾಗುವುದು ಎಂದು ಅನಿವಾಸಿ ಭಾರತೀಯ ಉಪಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಆರತಿ ಕೃಷ್ಣ ಹೇಳಿದರು. ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ಎನ್‌ಆರ್‌ಐ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಬಗೆಹರಿಸಲಾಗುವುದು ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಿದಲ್ಲಿ ಗೆಲುವು ನಮ್ಮ ದಾಗಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವಂತೆ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಎಲ್ಲರೂ ಸದುಪಯೋಗ ಪಡಿಸಿ ಕೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಆರತಿ ಕೃಷ್ಣ ಅವರು ಕಾಂಗ್ರೆಸ್ ಹಿನ್ನೆಲೆ ಯುಳ್ಳ ವರು. ಅವರ ತಂದೆ ಬೇಗಾನೆ ರಾಮಯ್ಯ ಶಾಸಕರಾಗಿ, ಮಂತ್ರಿಗಳಾಗಿ ಪ್ರಾಮಾಣಿಕ ರಾಜಕಾರಣಿಯಾಗಿ ಆಡಳಿತ ನಡೆಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಆರತಿ ಕೃಷ್ಣರವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಆರತಿ ಕೃಷ್ಣರವರು ಜನರಿಗೆ ಸಹಾಯ ಮಾಡುವ ಮೂಲಕ ಜನಮನ್ನಣೆ ಗಳಿಸಿದ್ದಾರೆ. ದೇಶದಲ್ಲಿ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಸಹಾಯಹಸ್ತ ಚಾಚುವ ಮೂಲಕ ಕಷ್ಟಗಳಿಗೆ ಸ್ಪಂದನೆ ಮಾಡಿದ್ದಾರೆ. ಅವರ ಸಹಾಯ ವನ್ನು ಯಾರೂ ಮರೆಯಬಾರದು ಎಂದು ಹೇಳಿದರು. ಈ ಹಿಂದೆಯೂ ಸಹ ಅನಿವಾಸಿ ಭಾರತೀಯ ಉಪಾಧ್ಯಕ್ಷರಾಗಿ ಆರತಿ ಕೃಷ್ಣ ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಎನ್‌ಆರ್‌ಐಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು, ಚರ್ಚಿಸಲು ಜಿಲ್ಲೆಗೆ ಆಗಮಿಸಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬಹುದಾಗಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಬಾನ ಸುಲ್ತಾನ್, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್ ನಾಯ್ಡು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಪ್, ನಗರಸಭಾ ಸದಸ್ಯರಾದ ಇಂದಿರಾ, ಲಕ್ಷ್ಮಣ್, ಸೇವಾದಳ ಜಿಲ್ಲಾಧ್ಯಕ್ಷ ಆರ್.ಎಂ.ಬಸವರಾಜ್, ಲೆಬರ್ ಸೆಲ್ ಅಧ್ಯಕ್ಷ ವೇಣುಗೋಪಾಲ್ ರಾಜ್ ಅರಸ್ ಸೇರಿದಂತೆ ಉಪಸ್ಥಿತರಿದ್ದರು. 29 ಕೆಸಿಕೆಎಂ 2ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಡಾ. ಅರತಿ ಕೃಷ್ಣ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

163 ವೈದ್ಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಅನೈತಿಕ ಸಂಬಂಧ ಮುಚ್ಚಿಕೊಳ್ಳಲುಸುಳ್ಳು ವಂಚನೆಯ ಕಥೆ ಕಟ್ಟಿದ ಪತಿ