ಚಿಕ್ಕಮಗಳೂರುಜಿಲ್ಲೆಯ 12 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಆರಂಭ ವಾಗಿದ್ದು, ಅ.31ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ ಕೆಪಿಸಿಸಿಗೆ ಶಿಫಾರಸುಗಳ ಪಟ್ಟಿಯನ್ನು ಸಲ್ಲಿಸಲಾಗುವುದು ಎಂದು ಕೆಪಿಸಿಸಿ ವೀಕ್ಷಕ ಅಬ್ದುಲ್ ಗಫರ್ ತಿಳಿಸಿದರು.
- ಕೆಪಿಸಿಸಿ ವೀಕ್ಷಕ ಅಬ್ದುಲ್ ಗಫರ್ ಮಾಹಿತಿ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಜಿಲ್ಲೆಯ 12 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಆರಂಭ ವಾಗಿದ್ದು, ಅ.31ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ ಕೆಪಿಸಿಸಿಗೆ ಶಿಫಾರಸುಗಳ ಪಟ್ಟಿಯನ್ನು ಸಲ್ಲಿಸಲಾಗುವುದು ಎಂದು ಕೆಪಿಸಿಸಿ ವೀಕ್ಷಕ ಅಬ್ದುಲ್ ಗಫರ್ ತಿಳಿಸಿದರು.ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಂಘಟನಾ ಪುನರ್‌ರಚನೆಯ ಭಾಗವಾಗಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 12 ಬ್ಲಾಕ್‌ಗಳಿಗೆ ಪ್ರವಾಸ ಕೈಗೊಂಡು ಶಾಸಕರು, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.ಪ್ರತಿ ಬ್ಲಾಕ್‌ನಿಂದ ಅರ್ಜಿ ಸ್ವೀಕರಿಸಿ, ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಆಧರಿಸಿ ಕನಿಷ್ಠ 3 ಹಾಗೂ ಗರಿಷ್ಠ 5 ಹೆಸರುಗಳನ್ನು ಶಿಫಾರಸು ಮಾಡಲಾಗುವುದು. ಈ ಪಟ್ಟಿಯನ್ನು ಕೆಪಿಸಿಸಿಗೆ ಸಲ್ಲಿಸಿದ ಬಳಿಕ ರಾಜ್ಯ ನಾಯಕತ್ವದ ಮಾರ್ಗದರ್ಶನದಲ್ಲಿ ಅಂತಿಮ ಆಯ್ಕೆ ನಡೆಯಲಿದೆ ಎಂದು ಹೇಳಿದರು.ಪಕ್ಷದ ನೀತಿ-ಸಿದ್ಧಾಂತ ಒಪ್ಪಿಕೊಂಡು ಸಂಘಟನೆಗಾಗಿ ಸಮಯ ಮೀಸಲಿಡುವ ಸಾಮರ್ಥ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಮಹಿಳೆಯರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ದುರ್ಬಲ ವರ್ಗಗಳು ಹಾಗೂ ಪರಿಶಿಷ್ಟ ಜಾತಿ-ಪಂಗಡಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಲಾಗುವುದು. ಯುವಕರು ಹಾಗೂ ಹಿರಿಯರನ್ನು ಒಳಗೊಂಡ ಸಮತೋಲನದ ತಂಡ ರಚಿಸುವ ಉದ್ದೇಶವಿದೆ ಎಂದರು.ಮುಂದಿನ ದಿನಗಳಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆಯಲಿದೆ. ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ಸಂಘಟನಾ ಪುನರ್‌ರಚನೆ ಪ್ರಕ್ರಿಯೆ ಆರಂಭವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಜಿಲ್ಲೆಗೆ ಹೆಚ್ಚಿನ ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳು ದೊರೆಯುವ ನಿಟ್ಟಿನಲ್ಲಿ ಪಕ್ಷದ ಸಂಘಟನೆ ಜನರೊಂದಿಗೆ ನಿರಂತರವಾಗಿ ಕೆಲಸ ಮಾಡಲಿದೆ ಎಂದರು.ಹಿಂದಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಅವರ ತಂಡ ಸಲ್ಲಿಸಿರುವ ಸೇವೆ ಸ್ಮರಿಸಿದ ಅವರು, ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಹಾಗೂ ಅವರ ತಂಡಕ್ಕೆ ಅಭಿನಂದಿಸಿದರು.ಗೋಷ್ಠಿಯಲ್ಲಿ ಕೆಪಿಸಿಸಿ ವೀಕ್ಷಕ ಮೋಹನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ರೂಬಿ, ಶಿವು, ಹೇಮಣ್ಣ, ಪ್ರವೀಣ್ ಬೆಟ್ಟಗೆರೆ ಸೇರಿದಂತೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.