ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಯಾಗಿಸುವ ಪ್ರಕ್ರಿಯೆಗೆ ಚಾಲನೆ : ಆಂಧ್ರಪ್ರದೇಶಕ್ಕೆ ಅಧ್ಯಯನ ತಂಡ

KannadaprabhaNewsNetwork |  
Published : Mar 28, 2025, 12:34 AM ISTUpdated : Mar 28, 2025, 04:13 AM IST
ಫೋಟೋ: ೨೭ಪಿಟಿಆರ್-ತುಳುರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ | Kannada Prabha

ಸಾರಾಂಶ

ಆಂದ್ರಪ್ರದೇಶಕ್ಕೆ ತೆರಳಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಂಡ ಈ ಬಗ್ಗೆ ಪೂರ್ಣಪ್ರಮಾಣದಲ್ಲಿ ಅಧ್ಯಯನ ನಡೆಸಲಿದೆ. ಅಲ್ಲಿನ ಸ್ಥಳೀಯ ಭಾಷೆಯನ್ನು ಅಲ್ಲಿನ ಎರಡನೇ ಅಧಿಕೃತ ಭಾಷೆಯನ್ನಾಗಿ ಹೇಗೆ ಘೋಷಣೆ ಮಾಡಿದೆ ಮತ್ತು ಇದನ್ನು ಯಾವ ಮಾನದಂಡದಲ್ಲಿ ಮಾಡಿದೆ ಎಂಬುದನ್ನು ಅಧ್ಯಯನ ನಡೆಸಲಿದೆ. 

  ಪುತ್ತೂರು :  ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಬಹುಕಾಲದ ತುಳುವರ ಬೇಡಿಕೆಗೆ ಇದೀಗ ಚಾಲನೆ ದೊರಕುವ ಸಂಭವ ಕಂಡು ಬಂದಿದೆ. ಈ ಬಗ್ಗೆ ಅಧ್ಯಯನ ನಡೆಸಲು ಆಂಧ್ರಪದೇಶಕ್ಕೆ ಅಧಿಕಾರಿಗಳ ತಂಡವನ್ನು ಸರ್ಕಾರ ಕಳಹಿಸಿದೆ, ಇದರಿಂದಾಗಿ ತುಳು ಭಾಷೆಯ ಹೋರಾಟಕ್ಕೆ ಇನ್ನಷ್ಟು ಶಕ್ತಿ ತುಂಬಿದಂತಾಗಿದೆ.

ತಂಡದಿಂದ ಪೂರ್ಣ ಅಧ್ಯಯನ:ಆಂದ್ರಪ್ರದೇಶಕ್ಕೆ ತೆರಳಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಂಡ ಈ ಬಗ್ಗೆ ಪೂರ್ಣಪ್ರಮಾಣದಲ್ಲಿ ಅಧ್ಯಯನ ನಡೆಸಲಿದೆ. ಅಲ್ಲಿನ ಸ್ಥಳೀಯ ಭಾಷೆಯನ್ನು ಅಲ್ಲಿನ ಎರಡನೇ ಅಧಿಕೃತ ಭಾಷೆಯನ್ನಾಗಿ ಹೇಗೆ ಘೋಷಣೆ ಮಾಡಿದೆ ಮತ್ತು ಇದನ್ನು ಯಾವ ಮಾನದಂಡದಲ್ಲಿ ಮಾಡಿದೆ ಎಂಬುದನ್ನು ಅಧ್ಯಯನ ನಡೆಸಲಿದೆ. ತಂಡವು ಅಧ್ಯಯನ ನಡೆಸಿ ವರದಿಯನ್ನು ಸರ್ಕಾರದ ಮುಂದೆ ಇಡಲಿದ್ದು ಇದು ಕರಾವಳಿಯ ಜನರ ನಾಡಿಮಿಡಿತವಾದ ತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ದಾರಿಯನ್ನು ಸುಗಮಗೊಳಿಸಲಿದೆ.

ಆಂಧ್ರಪದೇಶದಲ್ಲಿ ಸ್ಥಳೀಯ ಭಾಷೆಯನ್ನು ಅಲ್ಲಿನ ಎರಡನೇ ಅಧಿಕೃತ ಭಾಷೆಯನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅಲ್ಲಿ ಸ್ಥಳೀಯ ಭಾಷೆಯನ್ನು ಯಾವ ಮಾನದಂಡದ ಆಧಾರದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಿದೆ ಎಂಬುದರ ಬಗ್ಗೆ ಅಧ್ಯಯನ ನಡೆಸಲು ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಕಳುಹಿಸಿದೆ. ಈ ಹಿಂದೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ತನ್ನ ಸ್ವಂತ ಖರ್ಚಿನಿಂದ ಆಂದ್ರಪ್ರದೇಶಕ್ಕೆ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿ ಆ ಅಧ್ಯಯನ ವರದಿಯನ್ನು ಸರ್ಕಾರದ ಮುಂದೆ ಮಂಡನೆ ಮಾಡಿದ್ದರು. ಈ ವಿಚಾರವನ್ನು ಪುತ್ತೂರು ಶಾಸಕ ಅಶೋಕ್‌ ರೈ ವಿಧಾನಸಭಾ ಅಧಿವೇಶನದಲ್ಲೂ ಪ್ರಸ್ತಾಪ ಮಾಡಿದ್ದರು

ಇದು ನಿರಂತರ ಹೋರಾಟದ ಫಲವಾಗಿದೆ. ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಮತ್ತು ಸಿಬಂದಿಗಳನ್ನು ಆಂದ್ರಕ್ಕೆ ಕಳುಹಿಸಿ ಅಲ್ಲಿನ ಸ್ಥಳೀಯ ಭಾಷೆಯನ್ನು ಯಾವ ಮಾನದಂಡದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಿದೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಮಂಡಿಸಲಿದೆ. ಆ ಬಳಿಕ ಕರ್ನಾಟಕದಲ್ಲಿ ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಇದು ಸಹಕಾರಿಯಾಗಲಿದೆ. 

-ಅಶೋಕ್ ರೈ ಪುತ್ತೂರು ಶಾಸಕ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ