ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಪಿಇಎಸ್ ವಿದ್ಯಾಸಂಸ್ಥೆಯ ವಿವೇಕಾನಂದ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘ, ಸಂಪೂರ್ಣ ಸಾವಯವ ಕೃಷಿಕರ ಸಂಘ ಹಾಗೂ ಆರಿಗ್ರಾಫ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಕೃಷಿ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕಾರ್ಬನ್ ಕ್ರೆಡಿಟ್ ಯೋಜನೆಯು ಪರಿಸರದಲ್ಲಿನ ಮಾಲಿನ್ಯವನ್ನು ಸರಿದೂಗಿಸಲು ಇಂಗಾಲದ ಹೊರಸೂಸುವಿಕೆಯನ್ನು ತಡೆದು, ಪರಿಸರದಲ್ಲಿನ ಇಂಗಾಲದ ಡೈಯಾಕ್ಸೈಡ್‌ನ್ನು ಹಿಡಿದಿಡುವ ಪ್ರಮುಖ ತಂತ್ರವಾಗಿದೆ. ಈ ಮೂಲಕ ನೈಸರ್ಗಿಕ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘವು ರೈತರ ಬವಣೆಗಳನ್ನು ತಗ್ಗಿಸಲು ಅನೇಕ ರೀತಿಯಲ್ಲಿ ಪ್ರಯತ್ನ ಪಡುತ್ತಿದೆ. ಜಾಗತಿಕವಾಗಿ ಪ್ರಚಲಿತವಾಗಿರುವ ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದರೆ ನಾಡಿನ ಸಮಸ್ತ ರೈತರಿಗೂ ಪ್ರಯೋಜನ ದೊರೆತಂತಾಗುತ್ತದೆ. ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ಮಂಡ್ಯ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸುತ್ತಿರುವುದು ಸಂತಸದ ವಿಚಾರವಾಗಿದೆ. ಇಡೀ ರಾಜ್ಯಾದ್ಯಂತ ಈ ಯೋಜನೆ ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ. ನೊಂದು ಬೆಂದ ರೈತರಿಗೆ ಈ ಯೋಜನೆಯು ವರವಾಗಲಿದೆ ಎಂದರು.
ಕೃಷಿಯಲ್ಲಿ ಬೆಳೆದ ಇನ್ನಿತರೆ ಬೆಳೆಗಳಿಗೆ ಮಾರುಕಟ್ಟೆ ಬೆಲೆಯಲ್ಲಿ ಏರುಪೇರು ಸಾಮಾನ್ಯವಾಗಿದ್ದು, ಸಿರಿಧಾನ್ಯ ಬೆಳೆಗಾರರಿಗೆ ಅದರ ಸಮಸ್ಯೆ ಇರುವುದಿಲ್ಲ. ಸಿರಿಧಾನ್ಯವನ್ನು ಉತ್ತಮ ಬೆಲೆಗೆ ಮಾರಾಟ ಮಾಡಬಹುದು ಆದ್ದರಿಂದ ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು.