ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ.‌ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

KannadaprabhaNewsNetwork |  
Published : Mar 03, 2024, 01:36 AM IST
ಪೊಟೋ: 2ಎಸ್‌ಎಂಜಿಕೆಪಿ03:ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.‌ ಎಸ್. ವಿ. ಕೃಷ್ಣಮೂರ್ತಿ  ಶುಕ್ರವಾರ ಅಧಿಕಾರ ಸ್ವೀಕರಿಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪ್ರೊ.‌ಎಸ್.ವೆಂಕಟೇಶ್ ಅವರ ಡೀನ್ ಅವಧಿ ಮಾ.1ಕ್ಕೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನ್‌ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ‌ ನೇಮಕಗೊಳಿಸಿ‌, ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪ್ರೊ.‌ಎಸ್.ವೆಂಕಟೇಶ್ ಅವರ ಡೀನ್ ಅವಧಿ ಮಾ.1ಕ್ಕೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನ್‌ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ‌ ನೇಮಕಗೊಳಿಸಿ‌, ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮೂಲತಃ ಪರಿಸರ ವಿಜ್ಞಾನ ಪ್ರಾಧ್ಯಾಪಕರಾದ ಪ್ರೊ.‌ ಕೃಷ್ಣಮೂರ್ತಿ ಅವರ ಡೀನ್ ಅವಧಿ ಮಾರ್ಚ್ 2025ರವರೆಗೆ ಇದ್ದು, ಪೂರ್ಣಾವಧಿ ಕುಲಪತಿ ನೇಮಕಗೊಳ್ಳುವವರೆಗೆ ಕಾರ್ಯನಿರ್ವಹಿಸಲಿದ್ದಾರೆ.

ಈ ಸಂದರ್ಭ ಪ್ರೊ.ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ.ಎಸ್. ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ಬಂಗಾರಪ್ಪ, ಡಾ. ಕೆ.‌ಆರ್. ಮಂಜುನಾಥ್, ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.

- - - -2ಎಸ್‌ಎಂಜಿಕೆಪಿ03:

ಕುವೆಂಪು ವಿಶ್ವವಿದ್ಯಾಲಯ ನೂತನ ಪ್ರಭಾರ ಕುಲಪತಿ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2027ರಿಂದ ಪಿಯು ಮಕ್ಳಿಗೆ ಮುದ್ರಿತ ಅಂಕಪಟ್ಟಿ ಸಿಗದು!
ಹೆಣ್ಣುಮಕ್ಕಳು, ಹಳ್ಳಿ ಹೈಕಳೇ ಈ ಬಾರಿಯೂ ಮೇಲುಗೈ-ಪಿಯುಸಿ ಐತಿಹಾಸಿಕ ಫಲಿತಾಂಶ