ಜಿಲ್ಲಾ ಬಿಎಸ್‌ಪಿ ಕಾರ್ಯಾಲಯದಲ್ಲಿ ಪ್ರೊ.ಬಿ.ಕೃಷ್ಣಪ್ಪರವರ ಜನ್ಮ ದಿನಾಚರಣೆ,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುದಲಿತ ಸಮುದಾಯಗಳ ಶೋಷಣೆ, ಹಿಂಸೆ, ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿ, ಶೋಷಣೆಗೆ ಒಳಗಾದ ಎಲ್ಲಾ ಸಮುದಾಯವನ್ನು ಒಗ್ಗೂಡಿಸಿ ಅವರ ಏಳಿಗೆಗೆ ದುಡಿದ ಮಹಾನಾಯಕ ಪ್ರೊ.ಬಿ.ಕೃಷ್ಣಪ್ಪ ಎಂದು ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಹೇಳಿದರು.
ನಗರದ ಜಿಲ್ಲಾ ಬಿ.ಎಸ್.ಪಿ. ಕಾರ್ಯಾಲಯದಲ್ಲಿ ಭಾನುವಾರ ನಡೆದ ಪ್ರೊ.ಬಿ.ಕೃಷ್ಣಪ್ಪರವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ದೀನ, ದಲಿತರ ಹಾಗೂ ಹಿಂದುಳಿದ ವರ್ಗದವರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಧೀಮಂತ ನಾಯಕ ಪ್ರೊ.ಬಿ.ಕೃಷ್ಣಪ್ಪ ಅವರ ಬದುಕು ಇಂದಿನ ಹೋರಾಟಕ್ಕೆ ಸ್ಪೂರ್ತಿ ದಾಯಕ. ಸರ್ವರ ಏಳಿಗೆ ಬಯಸುವ ಮೂಲಕ ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದ ವರ್ಗದವರನ್ನು ಶೋಷಣೆಯಿಂದ ಮುಕ್ತಗೊಳಿಸಲು ಶ್ರಮಿಸಿದವರು ಎಂದರು.
ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಪ್ರಭಾವ ಬೀರಿದ್ದ ಅವರು ಬಡವರ, ಕೃಷಿಕರ ಹಾಗೂ ಕೂಲಿ ಕಾರ್ಮಿಕರ ಧ್ವನಿಯಾಗಿ ಸದಾ ಹೋರಾಟ ಮಾಡುತ್ತಾ ಬಂದಿದ್ದು ಇಂದಿನ ಎಲ್ಲಾ ಹೋರಾಟಗಾರರಿಗೆ ಪ್ರೇರಣೆ ಯಾಗಿದ್ದು. ಅವರ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಕಿವಿಮಾತು ಹೇಳಿದರು.ದೂರದೃಷ್ಟಿ ಉಳ್ಳವರಾಗಿದ್ದ ಕೃಷ್ಣಪ್ಪನವರು ಜನರ ಏಳಿಗೆಗಾಗಿ ನಿರಂತರ ಕೆಲಸ ಮಾಡಿದವರು. ಹೋರಾಟದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಾ ಶೋಷಣೆಯಿಂದ ಮುಕ್ತವಾಗಬಹುದು ಎಂಬ ನಂಬಿಕೆಯಿಂದ ಬದುಕಿದವರು. ಅವರ ಜೀವನ ದಾರಿಯೇ ಇಂದಿನ ಹೋರಾಟಗಾರರಿಗೆ ದಾರಿದೀಪ ಎಂದು ಹೇಳಿದರು.ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಮಾತನಾಡಿ, ಶೋಷಿತ ಸಮುದಾಯಗಳ ಬದುಕಿನಲ್ಲಿ ಸ್ವಾಭಿ ಮಾನದ ಹಣತೆ ಹಚ್ಚಿದವರು ದಸಂಸ ಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ. ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳಲ್ಲಿ ನಂಬಿಕೆಯಿಟ್ಟಿದ್ದ ಅವರು ಶೋಷಿತ ಸಮುದಾಯಗಳ ಪ್ರಗತಿಗೆ ಸಾಮಾಜಿಕ ಚಳುವಳಿ ರೂಪಿಸಿ ಸ್ವಾಭಿಮಾನದ ಸಂಕೇತವಾದವರು ಎಂದು ಸ್ಮರಿಸಿದರು.ಮೌಢ್ಯಗಳನ್ನು ಮುಂದಿಟ್ಟುಕೊಂಡು ದಲಿತರಿಗೆ ಅನ್ಯಾಯ ಮಾಡಿದ ಪುರೋಹಿತಶಾಹಿಗಳ ವಿರುದ್ಧ ಸೆಟೆದು ನಿಂತು ದಲಿತರಲ್ಲಿ ಜಾಗೃತಿ ಮೂಡಿಸಿದ ಮಹಾಚೇತನ ಬಿ.ಕೃಷ್ಣಪ್ಪ ಅವರ ಆಚಾರ ವಿಚಾರ ಗಳನ್ನು ನೆನಪು ಮಾಡಿಕೊಳ್ಳುವುದೇ ನಿಜವಾಗಿಯೂ ಅವರಿಗೆ ನೀಡುವ ದೊಡ್ಡ ಗೌರವ ಎಂದರು.ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಯೋಜಕ ಪಿ.ಪರಮೇಶ್, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಕೆ.ಎಸ್. ಮಂಜುಳಾ, ಅಸೆಂಬ್ಲಿ ಉಪಾಧ್ಯಕ್ಷರಾದ ಸಿದ್ದಯ್ಯ, ಗಿರೀಶ್, ಶಂಕರ್, ಸರಸ್ವತಿ, ಪ್ರಧಾನ ಕಾರ್ಯದರ್ಶಿ ಆರ್. ವಸಂತ್, ಖಜಾಂಚಿ ಟಿ.ಎಚ್.ರತ್ನ ಉಪಸ್ಥಿತರಿದ್ದರು.ಪೋಟೋ ಫೈಲ್ ನೇಮ್ 9 ಕೆಸಿಕೆಎಂ 3ಚಿಕ್ಕಮಗಳೂರಿನ ಬಿಎಸ್‌ಪಿ ಕಾರ್ಯಾಲಯದಲ್ಲಿ ಭಾನುವಾರ ನಡೆದ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಸುಧಾ ಉದ್ಘಾಟಿಸಿದರು. ಕೆ.ಟಿ. ರಾಧಾಕೃಷ್ಣ, ಪರಮೇಶ್, ಮಂಜುಳಾ, ಗಿರೀಶ್ ಇದ್ದರು.