ಸುವರ್ಣ ಕನ್ನಡಿಗ ಪ್ರಶಸ್ತಿ ಪಡೆದ ಪ್ರೊ. ಎಂ. ಮುನಿರಾಜು ಅವರಿಗೆ ಸಂಘದಿಂದ ಸನ್ಮಾನ

KannadaprabhaNewsNetwork |  
Published : Apr 09, 2026, 02:15 AM IST
ವಿವಿಯ ಕುಲಸಚಿವ ಪ್ರೊ. ಎನ್.ಎಂ. ಸಾಲಿ ಅವರು, ಕುಲಪತಿ ಪ್ರೊ. ಮುನಿರಾಜು ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಈಚೆಗೆ ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆ ಕೊಡಮಾಡುವ ‘ಸುವರ್ಣ ಕನ್ನಡಿಗ-2026’ರ ಪ್ರಶಸ್ತಿ ಪ್ರಶಸ್ತಿ ಸ್ವೀಕರಿಸಿದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಅವರನ್ನು ವಿವಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು

ಬಳ್ಳಾರಿ: ನಾಡಿನ ಪ್ರತಿಷ್ಠಿತ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆ ಕೊಡಮಾಡುವ ‘ಸುವರ್ಣ ಕನ್ನಡಿಗ-2026’ರ ಪ್ರಶಸ್ತಿಗೆ ಆಯ್ಕೆಗೊಂಡು ಈಚೆಗೆ ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಅವರನ್ನು ವಿವಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಇದೇವೇಳೆ ಮಾತನಾಡಿದ ವಿವಿಯ ಕುಲಸಚಿವ ಪ್ರೊ. ಎನ್.ಎಂ. ಸಾಲಿ ಅವರು, ಕುಲಪತಿ ಪ್ರೊ. ಮುನಿರಾಜು ಅವರಿಗೆ ದೊರಕಿರುವ ಪ್ರಶಸ್ತಿಯಿಂದ ವಿಶ್ವವಿದ್ಯಾಲಯದ ಘನತೆ ಮತ್ತಷ್ಟು ಹೆಚ್ಚಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ದಣಿವರಿಯದೆ ನಿರಂತರ ಸೇವೆ ನೀಡುತ್ತಿರುವ ಕುಲಪತಿಗಳ ಕಾರ್ಯಕ್ಕೆ ಒದಗಿರುವ ಗರಿಮೆಯಾಗಿದೆ ಎಂದು ತಿಳಿಸಿದರು.

ವಿವಿಯ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕುಲಪತಿಗಳಿಗೆ ಪ್ರಶಸ್ತಿ ಬಂದಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ಮುಂದೆ ಮತ್ತಷ್ಟು ಪ್ರಶಸ್ತಿಗಳು ಅವರಿಗೆ ಒಲಿದು ಬರಲಿ ಎಂದು ಹಾರೈಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಮೂರೂವರೆ ದಶಕಗಳ ಕಾಲ ಸುದೀರ್ಘವಾಗಿ ಸಲ್ಲಿಸಿದ ಸೇವೆ ಗುರುತಿಸಿ ನಾಡಿನ ಪ್ರಭಾವಿ ದಿನಪತ್ರಿಕೆ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ವಾಹಿನಿ ನೀಡಿರುವ ಪ್ರಶಸ್ತಿಯಿಂದ ಹೆಚ್ಚು ಸಂತಸವಾಗಿದೆ. ಬಳ್ಳಾರಿ ವಿವಿಯ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದ್ದು ಇನ್ನೂ ಸಾಕಷ್ಟು ಕೋರ್ಸ್ ಗಳನ್ನು ಆರಂಭಿಸುವ ಮೂಲಕ ಈ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.

ವಿವಿಯ ಸಿಂಡಿಕೇಟ್ ಸದಸ್ಯರು, ಹಣಕಾಸು ಅಧಿಕಾರಿ ಸ್ಫೂರ್ತಿ ಕೆ.ಜಿ., ಅಧ್ಯಾಪಕರ ಸಂಘದ ಪದಾಧಿಕಾರಿಗಳು, ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಅದ್ಧೂರಿ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಎಂ. ಮುನಿರಾಜು ಅವರಿಗೆ ರಾಜ್ಯಮಟ್ಟದ ಸುವರ್ಣ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವೇಶ್ವರ, ಶಂಕರಾಚಾರ್ಯ ಜಯಂತಿಗೆ ಸಿದ್ಧತೆ
ಶ್ರಮದ ಬೆವರಿನ ಫಲ ಶಾಶ್ವತ, ಸುಖದಾಯಕ: ರಂಭಾಪುರಿ ಶ್ರೀ