ಕನ್ನಡಪ್ರಭ ವಾರ್ತೆ ಮೈಸೂರು
ಬಿಜೆಪಿ ಮಹಿಳಾ ಮೋರ್ಚಾದ ಮುಖಂಡರು ಹಾಗೂ ಕಾರ್ಯಕರ್ತೆಯರು ರನ್ ಫಾರ್ ನೇಷನ್, ರನ್ ಫಾರ್ ಮೋದಿ ಎಂಬ ಘೋಷಣೆಯೊಂದಿಗೆ ನಾರಿ ಶಕ್ತಿ ವಂದನಾ ವಾಕಾಥಾನ್ ಅನ್ನು ಸೋಮವಾರ ಹಮ್ಮಿಕೊಂಡಿದ್ದರು.ನಗರದ ನ್ಯಾಯಾಲಯದ ಮುಂಭಾಗದಿಂದ ಆರಂಭವಾದ ನಡಿಗೆಯೂ ವಾಣಿ ವಿಲಾಸ ರಸ್ತೆ, ಆರ್‌ಟಿಒ, ಜೆಎಲ್ ಬಿ ರಸ್ತೆ, ರಾಮಸ್ವಾಮಿ ವೃತ್ತದ ಮೂಲಕ ಬಿಜೆಪಿ ಕಚೇರಿ ಬಳಿ ಅಂತ್ಯವಾಯಿತು.
ಈ ವಾಕಾಥಾನ್ ಗೆ ಚಾಲನೆ ನೀಡಿದ ಬಿಜೆಪಿ ನಗರಾಧ್ಯಕ್ಷ ಮಾಜಿ ಶಾಸಕ ಎಲ್. ನಾಗೇಂದ್ರ ಮಾತನಾಡಿ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಾರಿ ಶಕ್ತಿ ವಂದನಾ ಮೂಲಕ ಪ್ರತಿ ರಾಜ್ಯದಲ್ಲಿನ ಸ್ವಸಹಾಯ ಸಂಘಗಳಿಗೆ ನಗರ ಮತ್ತು ಗ್ರಾಮೀಣ ಭಾಗದ ಮಹಿಳೆಯರಿಗೆ ಕೇಂದ್ರದ ಹಲವಾರು ಯೋಜನೆಗಳನ್ನು ತಲುಪಿಸುವುದು ಹಾಗೂ ತಿಳಿವಳಿಕೆ ಹೇಳುವ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.ಮೋದಿ ಅವರ ಹಲವಾರು ಯೋಜನೆಗಳು ಸ್ವ ಉದ್ಯೋಗ ಕೈಗೊಳ್ಳಲು ಸಹಕಾರಿಯಾಗಲಿದೆ.
ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಮೋದಿ ಅವರು ಮಹಿಳೆಯರ ಸಬಲೀಕರಣಕ್ಕಾಗಿ ಕೈಗೊಂಡಿರುವ ಯೋಜನೆಗಳನ್ನು ನಗರ ಹಾಗೂ ಗ್ರಾಮದ ಪ್ರತಿಯೊಬ್ಬ ಮಹಿಳೆಯರಿಗೂ ತಲುಪಿಸುವ ಕೆಲಸವಾಗಬೇಕು ಎಂದು ಅವರು ಹೇಳಿದರು.ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಉಪ ಮೇಯರ್ ಡಾ. ರೂಪಾ, ಪಾಲಿಕೆ ಮಾಜಿ ಸದಸ್ಯರಾದ ಪ್ರಮೀಳಾ ಭರತ್, ಲಕ್ಷ್ಮಿ ಕಿರಣ್ ಗೌಡ, ಸೌಭಾಗ್ಯ ಮೂರ್ತಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜ್, ಪದಾಧಿಕಾರಿ ಎಚ್.ಜಿ. ಗಿರಿಧರ್, ಕೇಬಲ್ ಮಹೇಶ್, ಬಿ.ಎಂ. ರಘು, ಚಂದ್ರಕಲಾ, ಮಮತಾ ಶೆಟ್ಟಿ, ಹೇಮ ನಂದೀಶ್, ಡಾ. ಅನಿಲ್ ಥಾಮಸ್, ಎನ್.ವಿ. ಫಣೀಶ್, ಹೇಮಂತ್ ಕುಮಾರ್ ಗೌಡ, ಜಯಪ್ರಕಾಶ್ ಮೊದಲಾದವರು ಇದ್ದರು.