ನಾಳೆ ಪತ್ರಿಕಾ ದಿನಾಚರಣೆ

KannadaprabhaNewsNetwork | Published : Jul 28, 2024 2:06 AM

ಸಾರಾಂಶ

Program at Bidar District Press House

-ಬೀದರ್‌ ಜಿಲ್ಲಾ ಪತ್ರಿಕಾ ಭವನದಲ್ಲಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಬೀದರ್‌:

ಬೀದರ್‌ ಜಿಲ್ಲಾ ಪತ್ರಿಕಾ ದಿನಾಚರಣೆ ಸಮಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಇದೇ ಜು.29ರಂದು ಮಧ್ಯಾಹ್ನ 12.05ಕ್ಕೆ ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಪತ್ರಿಕಾ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಮಂತ್ರಿಗಳಾದ ಈಶ್ವರ ಖಂಡ್ರೆ ಅವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪೌರಾಡಳಿತ ಸಚಿವ ರಹೀಮ್‌ ಖಾನ್‌ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ, ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಹಿರಿಯ ಪತ್ರಕರ್ತರು ಮತ್ತು ಉತ್ತರ ಕರ್ನಾಟಕ ಪ್ರಾದೇಶಿಕ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಶಿವಶರಣಪ್ಪ ವಾಲಿ, ಔರಾದ್‌ ಶಾಸಕರಾದ ಪ್ರಭು ಚವ್ಹಾಣ್‌, ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಹುಮನಾಬಾದ್‌ ಶಾಸಕರಾದ ಡಾ. ಸಿದ್ದಲಿಂಗಪ್ಪ ಪಾಟೀಲ್‌, ವಿಧಾನ ಪರಿಷತ್‌ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ್‌, ಡಾ. ಶಶೀಲ ಜಿ. ನಮೋಶಿ, ಭೀಮರಾವ್‌ ಜಿ. ಪಾಟೀಲ್‌, ಎಂಜಿ ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ್‌, ಬೀದರ್‌ ನಗರಸಭೆ ಅಧ್ಯಕ್ಷರಾದ ಮಹ್ಮದ್‌ ಗೌಸ್‌, ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಡಾ. ಗಿರೀಶ ದಿಲೀಪ ಬದೋಲೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶಕುಮಾರ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮಕ್ಕೆ ಸಮಸ್ತ ಪತ್ರಕರ್ತರು, ಸಂಘ ಸಂಸ್ಥೆಗಳ, ಸಂಘಟನೆಗಳ ಪ್ರಮುಖರು ಪಾಲ್ಗೊಳ್ಳುವಂತೆ ಬೀದರ್‌ ಜಿಲ್ಲಾ ಪತ್ರಿಕಾ ದಿನಾಚರಣೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಆನಂದ ದೇವಪ್ಪ ಮನವಿಸಿದ್ದಾರೆ.

Share this article