)
ದಾವಣಗೆರೆ: ಜಿಲ್ಲೆಯಲ್ಲಿ ಜೂನ್ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್‌ಗಳನ್ನು ಮುದ್ರಿಸಿ ಬಿಎಲ್‌ಒಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್ 6ರಿಂದ ಜುಲೈ 29ರ ಅವಧಿಯಲ್ಲಿ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.
ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್‌ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.
103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ.105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ.
107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ.
109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಜೂನ್ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ ಪ್ರಕರಣಗಳಾಗಿವೆ.
ಪತ್ರಿಕಾಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ.ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರಂಗಳನ್ನು ನಮೂದಿಸಿ ಬಿ.ಎಲ್.ಒ.ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.