ರೈಲ್ವೆ ಯೋಜನೆಗಳಿಂದ ಕರಾವಳಿಯಲ್ಲಿ ಪ್ರಗತಿ: ವಿ. ಸೋಮಣ್ಣ

KannadaprabhaNewsNetwork |  
Published : Sep 22, 2025, 01:02 AM IST
21ರೈಲುಸೋಮಣ್ಣ | Kannada Prabha

ಸಾರಾಂಶ

ಅಮೃತ್ ಭಾರತ್‌ ಸ್ಟೇಷನ್ ಯೋಜನೆಯ ಅಡಿಯಲ್ಲಿ ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ 22 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ನಡೆಯುತ್ತಿದೆ. ಅದೇ ರೀತಿ ಉಡುಪಿ ರೈಲು ನಿಲ್ದಾಣವನ್ನು ಕೂಡ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ರೀತಿಯಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ.ರೈಲ್ವೆ ಇಲಾಖೆಯ ಯೋಜನೆಗಳಿಂದ ಈ ಭಾಗ ಪ್ರಗತಿಯಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿಅಮೃತ್ ಭಾರತ್‌ ಸ್ಟೇಷನ್ ಯೋಜನೆಯ ಅಡಿಯಲ್ಲಿ ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ 22 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ನಡೆಯುತ್ತಿದೆ. ಅದೇ ರೀತಿ ಉಡುಪಿ ರೈಲು ನಿಲ್ದಾಣವನ್ನು ಕೂಡ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ರೀತಿಯಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ.ರೈಲ್ವೆ ಇಲಾಖೆಯ ಯೋಜನೆಗಳಿಂದ ಈ ಭಾಗ ಪ್ರಗತಿಯಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಅವರು ಭಾನುವಾರ ಇಲ್ಲಿನ ಇಂದ್ರಾಳಿಯಲ್ಲಿ ರಾಹೆ 169ಎಯಲ್ಲಿ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿ ಮಾತನಾಡಿದರು.ಯಾವುದೇ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಿದ್ದಾರೆ. ಅದರಂತೆ ರೈಲ್ವೆ ಇಲಾಖೆಯ ಕಾಮಗಾರಿಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದವರು ಹೇಳಿದರು. ಎನ್‌ಡಿಎ ಸರ್ಕಾರವು ಕಳೆದ 11 ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ ಅನುದಾನದ ಶೇ.25ರಷ್ಟನ್ನು ಕೂಡ ಹಿಂದಿನ ಯುಪಿಎ ಸರ್ಕಾರ ನೀಡಿರಲಿಲ್ಲ. ರಾಜ್ಯದಲ್ಲಿ 6 ಸಾವಿರ ಕಿ.ಮೀ. ಇದ್ದ ರಾಷ್ಟ್ರೀಯ ಹೆದ್ದಾರಿ ಇಂದು 10 ಸಾವಿರ ಕಿ.ಮೀ.ಗಳಿಗೆ ವಿಸ್ತರಣೆಯಾಗಿದೆ ಎಂದರು.ಹುಬ್ಬಳ್ಳಿ-ಅಂಕೋಲಾ ರೈಲ್ವೆ - ರಾ.ಹೆ. ಯೋಜನೆ ಜಾರಿಯಾಗಲಿದ್ದು, ಅದಕ್ಕೆ ತಡೆಯಾಗಿದ್ದ ಅರಣ್ಯ ಇಲಾಖೆಯ ಅನುಮತಿ ವಿಚಾರ ಈಗ ಪರಿಹಾರ ಹಂತದಲ್ಲಿದೆ ಎಂದು ಹೇಳಿದರು.ಈ ಸಂದರ್ಭ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ.ಸುನಿಲ್ ಕುಮಾರ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಎಸ್ಪಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.ಫೋಟೋ ಃ ಕೇಂದ್ರ ಸಚಿವ ವಿ. ಸೋಮಣ್ಣ ಇಂದ್ರಾಳಿ ರೈಲ್ವೆ ಮೇಲ್ಸೆತುವೆಯನ್ನು ಉದ್ಘಾಟಿಸಿದರು.

PREV

Recommended Stories

ಸಿಬ್ಬಂದಿ ಕೊರತೆ ಬೆಂಗಳೂರು ನಗರದಲ್ಲಿ ಜಾತಿ ಗಣತಿ ವಿಳಂಬ
ಸಮೀಕ್ಷೆ ಹೆಸರಿನಲ್ಲಿ ಹಿಂದೂ ಸಮಾಜ ಒಡೆಯುವ ಹುನ್ನಾರ