*ಅಧಿಕಾರಿಗಳಿಂದ ಮಾಹಿತಿ
----------
ಕನ್ನಡಪ್ರಭ ವಾರ್ತೆ ಯಾದಗಿರಿಯಾದಗಿರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಬಸವರಾಜಪ್ಪ ಬಾಗ್ಲಿ ರಾಮಸಮುದ್ರ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಗಳನ್ನು ನೀಡಿದರು. ಗ್ಯಾರಂಟಿ ಯೋಜನೆ ಸದಸ್ಯ ಹಣಮಂತ ಲಿಂಗೇರಿ ಮಾತನಾಡಿ, ಆಹಾರಧಾನ್ಯ ಅಂಗಡಿಗಳಿಗೆ ಗುಣಮಟ್ಟದ ಆಹಾರ ಸರಬರಾಜು ಮಾಡುವಂತೆ ಹಾಗೂ ಆಹಾರಧಾನ್ಯಗಳ ಕಾಳಸಂತೆಯಲ್ಲಿ ಮಾರಾಟವಾಗದಂತೆ ಕ್ರಮ ವಹಿಸಲು ತಿಳಿಸಿದರು. ಅಧಿಕಾರಿಗಳು ಪ್ರತಿಕ್ರಿಯಿಸಿ ಆಹಾರಧಾನ್ಯ ಅಂಗಡಿಗಳನ್ನು ಮೇಲಿಂದ ಮೇಲೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿದರು.
ಕೌಶಲ್ಯ ಅಭಿವೃದ್ಧಿ ಉದ್ದಿಮೆಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯುವನಿಧಿ ಯೋಜನೆಯಡಿಯಲ್ಲಿ ಪದವೀಧರ ಡಿಪ್ಲೋಮಾ, ಎಸ್ಸಿ/ಎಸ್ಟಿ ಪದವೀಧರರಿಗೆ ಸರ್ಕಾರದ ಸಹಾಯ ಮಂಜೂರಾಗಿರುವ ಕುರಿತು ತಿಳಿಸಲಾಯಿತು. ಸಾರಿಗೆ ಇಲಾಖೆಯ ಶಕ್ತಿ ಯೋಜನೆಯಡಿ ತಾಲೂಕಿನ ಮಹಿಳೆಯರು ಉಚಿತ ಬಸ್ ಪ್ರಯಾಣ ಸೌಲಭ್ಯ ಪಡೆಯುತಿದ್ದಾರೆ. ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಸೌಕರ್ಯ ಇದೆ. ಮಹಿಳೆಯರ ಮತ್ತು ಪುರುಷರ ಶೌಚಾಲಯ ಉತ್ತಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಮುಖ್ಯಸ್ಥ ಮಹಿಳೆಯರಿಗೆ ಮಾಸಿಕ 2000 ರು. ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮ ಮಾಡಲಾಗುವುದು. ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದರು. ಬಸವರಾಜಪ್ಪ ಬಾಗ್ಲಿ ಅವರು ಗ್ಯಾರಂಟಿ ಯೋಜನೆಯ ಸದಸ್ಯರಿಗೂ ಮತ್ತು ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಿದರು.
------ಫೋಟೊ---------
ಯಾದಗಿರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಬಸವರಾಜಪ್ಪ ಬಾಗ್ಲಿ ರಾಮಸಮುದ್ರ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಬಸವರಾಜ ಶರಭೈ, ಶಿವರಾಯ, ಸಾಯಿಕುಮಾರ್ ಇತರರಿದ್ದರು.