ಗೃಹ ಜ್ಯೋತಿ ಯೋಜನೆ ಪರಿಶೀಲನೆ ಪ್ರಗತಿ

KannadaprabhaNewsNetwork |  
Published : Jul 18, 2026, 01:15 AM IST
ಚಿತ್ರ :  17ಎಂಡಿಕೆ3 : ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ದಾಖಲೆ ಪರಿಶೀಲನಾ ಕಾರ್ಯ. | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ದಾಖಲೆ ಪರಿಶೀಲನಾ ಕಾರ್ಯ ಆರಂಭಗೊಂಡಿದೆ.

ಮಡಿಕೇರಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ದಾಖಲೆ ಪರಿಶೀಲನಾ ಕಾರ್ಯ ಆರಂಭಗೊಂಡಿದೆ. ಸೆಸ್ಕ್ ನೌಕರರು ಗ್ರಾಹಕರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ. ಗೃಹ ಜ್ಯೋತಿ ಯೋಜನೆಯ ಅರ್ಹತೆ ಮರು ಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕಾರ್ಯಕ್ಕೆ ಮುಂದಾಗಿದೆ.

ಗ್ರಾಹಕರ ಮೂಲ ದಾಖಲೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಬಳಿಕ ವಿಶೇಷ ಮೊಬೈಲ್ ಆ್ಯಪ್ ಹಾಗೂ ಅಧಿಕೃತ ಘೋಷಣಾ ಪತ್ರದ ಮೂಲಕ ಹೊಸದಾಗಿ ಮಾಹಿತಿ ಸಂಗ್ರಹಿಸಿ ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಸ್ಥಳದಲ್ಲೇ ಪೂರ್ಣಗೊಳಿಸುತ್ತಿದ್ದಾರೆ. ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ತಪಾಸಣೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಸಾರ್ವಜನಿಕರು ಸೆಸ್ಕ್ ಸಿಬ್ಬಂದಿಗೆ ಮಾಹಿತಿ ನೀಡುತ್ತಿದ್ದಾರೆ. ಮನೆ ಮನೆಗೆ ಭೇಟಿ ಸಂದರ್ಭ ಫಲಾನುಭವಿಗಳು ಆಧಾರ್ ಕಾರ್ಡ್, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ರೇಷನ್ ಕಾರ್ಡ್, ಪಡಿತರ ಚೀಟಿ ಮತ್ತಿತರ ದಾಖಲೆಗಳನ್ನು ನೀಡಿ ಗೃಹ ಜ್ಯೋತಿ ಯೋಜನೆ ಪರಿಷ್ಕರಣಾ ಕಾರ್ಯಕ್ಕೆ ಕೈಜೋಡಿಸುವ ಕಾರ್ಯ ನಡೆದಿದೆ ಎಂದು ಸೆಸ್ಕ್ ಇಇ ರಾಮಚಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಪಡೆದಿರುವ 1,47,812 ಕುಟುಂಬಗಳಲ್ಲಿ 31,255 ಕುಟುಂಬಗಳ ಸರ್ವೆ ಕಾರ್ಯ ನಡೆದಿದ್ದು, ಶೇ.21.15 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸೆಸ್ಕ್ ಇಇ ರಾಮಚಂದ್ರ ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಳ್ವಾಸ್‌ನ 21 ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ
ನೀಟ್ ಮರುಪರೀಕ್ಷೆ ರಿಸಲ್ಟ್‌ ಬಗ್ಗೆ ವಿದ್ಯಾರ್ಥಿಗಳ ಅತೃಪ್ತಿ