ಜ್ಞಾನೇಶಕುಮಾರ್ ಬಂಧನಕ್ಕೆ ಪ್ರಗತಿಪರ ಸಂಘಟನೆಗಳ ಒತ್ತಾಯ

KannadaprabhaNewsNetwork |  
Published : Sep 30, 2026, 02:15 AM IST
 | Kannada Prabha

ಸಾರಾಂಶ

ಎಸ್‌ಐಆರ್‌ಗೆ ಸಂಬಂಧಿಸಿದ ಏಕಪಕ್ಷೀಯ ಆದೇಶಗಳನ್ನು ರದ್ದುಪಡಿಸಿ, ಪ್ರಕ್ರಿಯೆಯನ್ನು ತಕ್ಷಣ ಅಮಾನತುಗೊಳಿಸಬೇಕು.

ಕೊಪ್ಪಳ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರ ಬಂಧಿಸುವ ಜತೆಗೆ ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಪ್ರಗತಿಪರ, ಜನಪರ ಹಾಗೂ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಎಸ್‌ಐಆರ್ ಪ್ರಕ್ರಿಯೆ ರದ್ದುಪಡಿಸಬೇಕು, ಚುನಾವಣಾ ಆಯೋಗದ ಸಾಂವಿಧಾನಿಕ ಪಾವಿತ್ರ್ಯತೆ ಹಾಗೂ ಮತದಾರರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಎಸ್‌ಐಆರ್‌ಗೆ ಸಂಬಂಧಿಸಿದ ಏಕಪಕ್ಷೀಯ ಆದೇಶಗಳನ್ನು ರದ್ದುಪಡಿಸಿ, ಪ್ರಕ್ರಿಯೆಯನ್ನು ತಕ್ಷಣ ಅಮಾನತುಗೊಳಿಸಬೇಕು. ಮತದಾರರ ಹಕ್ಕುಗಳ ಉಲ್ಲಂಘನೆ ಕುರಿತು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಬಳಿಕ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಮಹಾವೀರ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗಳ ಪರವಾಗಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಸಿಐಟಿಯು ಜಿಲ್ಲಾ ಮುಖಂಡ ಖಾಸೀಮ್ ಸರ್ದಾರ್, ಬಸವರಾಜ ಶೀಲವಂತರ್, ಎಸ್.ಎ. ಗಫಾರ್, ತುಕಾರಾಮ ಪಾತ್ರೋಟಿ, ಚಾಂದ್ ಪಾಷಾ, ಮುದುಕಪ್ಪ ಹೊಸಮನಿ, ಮಖಬೂಲ್ ರಾಯಚೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಾರ್ಮಿಕತೆ ಜತೆಗೆ ಶಿಕ್ಷಣಕ್ಕೂ ಆದ್ಯತೆ ನೀಡಿ: ಸಚಿವ ಕೆ.ಎಸ್. ಬಸವಂತಪ್ಪ
ಮಾಜಿ ಸಂಸದ ಮಂಜುನಾಥ ಕುನ್ನೂರಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ