ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಕಡ್ಡಾಯ

KannadaprabhaNewsNetwork |  
Published : Sep 01, 2024, 01:51 AM IST
ಫುಡ್‌ ಕಲರ್‌ | Kannada Prabha

ಸಾರಾಂಶ

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಉದ್ಯಮಿಗಳು ಆಹಾರದ ಸುರಕ್ಷತೆ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಆಹಾರ ಸುರಕ್ಷತಾ ಕಾಯ್ದೆಯ ಮಾನದಂಡಗಳಿಗೆ ಮೀರಿ ಆಹಾರದಲ್ಲಿ ಕೃತಕ ಬಣ್ಣವನ್ನು ಬಳಸುವುದನ್ನು ನಿಷೇಧಿಸಲಾಗಿರುವುದರಿಂದ ಅದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಅಂದೋಲನ ಹಮ್ಮಿಕೊಳ್ಳಲಾಗಿದ್ದು, ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವ ಹೋಟೆಲ್, ಬೇಕರಿ, ದಿನಸಿ ಅಂಗಡಿ, ಆಹಾರ ತಯಾರಕರು, ಆಹಾರ ಸರಬರಾಜುದಾರರು, ಆಹಾರ ಪದಾರ್ಥಗಳ ವಿತರಕರು ಹಾಗೂ ಆಹಾರ ಉತ್ಪನ್ನಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ತೊಡಗಿಕೊಂಡಿರುವ ಎಲ್ಲ ಉದ್ಯಮಿಗಳು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆ ಅಡಿ ಪರವಾನಗಿ ಅಥವಾ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಉದ್ಯಮಿಗಳು ಆಹಾರದ ಸುರಕ್ಷತೆ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಆಹಾರ ಸುರಕ್ಷತಾ ಕಾಯ್ದೆಯ ಮಾನದಂಡಗಳಿಗೆ ಮೀರಿ ಆಹಾರದಲ್ಲಿ ಕೃತಕ ಬಣ್ಣವನ್ನು ಬಳಸುವುದನ್ನು ನಿಷೇಧಿಸಲಾಗಿರುವುದರಿಂದ ಅದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮೊಟ್ಟೆ, ಮೀನು ಮತ್ತು ಮಾಂಸದ ಆಹಾರ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ, ಸುರಕ್ಷಿತವಾಗಿ ಮತ್ತು ಶುಚಿಯಾಗಿ ಗ್ರಾಹಕರಿಗೆ ನೀಡಬೇಕು ಎಂದು ಸೂಚಿಸಲಾಗಿದೆ.ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲದಲ್ಲಿ ಪರೀಕ್ಷಿಸಲು ಕಳುಹಿಸಿಕೊಡಲು ವಿಶೇಷ ಆಂದೋಲನವನ್ನು ಕೈಗೊಂಡಿದ್ದು ಆಹಾರೋದ್ಯಮಿಗಳು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸಹಕರಿಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯನಗರ ಪಾಲಿಕೆ ಬಜಾರ್‌ ಮಳಿಗೆಗಳ ಇ-ಹರಾಜು ಮೂಲಕ ವಿತರಿಸಿ: ಮಹೇಶ್ವರ್ ರಾವ್ ಸೂಚನೆ
ರಸ್ತೆ ಅಪಘಾತ ಸೈಕಲ್‌ ಸವಾರ ಸಾವು