ಇಂದಿನಿಂದ 30 ದಿನಗಳ ಕಾಲ ನಿಷೇಧಾಜ್ಞೆ ಜಾರಿ

KannadaprabhaNewsNetwork |  
Published : Nov 20, 2026, 02:45 AM IST
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ನೇತೃತ್ವದಲ್ಲಿ ತಾಲೂಕು ಘಟಕದ ಅಧ್ಯಕ್ಷ  ಸಂತೋಷಕುಮಾರ ಅವರ ನೇತೃತ್ವದಲ್ಲಿ ಮಾನ್ಯ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿಅಧಿವೇಶನದ ಕಾಲಕ್ಕೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸುವರ್ಣ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನ.20ರಿಂದ ಡಿ.19 ವರೆಗೆ 30 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಅಧಿವೇಶನದ ಕಾಲಕ್ಕೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸುವರ್ಣ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನ.20ರಿಂದ ಡಿ.19 ವರೆಗೆ 30 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಆದೇಶ ಹೊರಡಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2ರಿಂದ 11ರವರೆಗೆ ಜರುಗಲಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ರೈತರು ಹಾಗೂ ಇತರ ಸಾರ್ವಜನಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ತಮ್ಮ ಬೇಡಿಕೆಗಳ ಕಡೆಗೆ ಸರ್ಕಾರದ ಗಮನ ಸೆಳೆಯಲು ಬೆಳಗಾವಿ ಸುವರ್ಣ ವಿಧಾನಸೌಧದ ಮುಂದೆ ಧರಣಿ ಸತ್ಯಾಗ್ರಹಗಳನ್ನು ಆಯೋಜಿಸಿ ಸುವರ್ಣ ವಿದಾನಸೌಧದ ಮುಂದೆ ಹಾಯ್ದು ಹೋಗಿರುವ ರಾಷ್ಟ್ಕೀಯ ಹೆದ್ದಾರಿ 48 ರಲ್ಲಿಯ ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟು ಮಾಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಿಕ್ಕಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಂಕ್ ಸೌಲಭ್ಯ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಿ: ಸದಾಶಿವ ಮೇತ್ರಿ
ಕಲಾ ಜಗತ್ತಿನಲ್ಲಿ ಪ್ರತಿಭೆ ಗುರುತಿಸಿಕೊಳ್ಳಿ