ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಗುರುವಾರ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಗುರುವಾರ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿ ಮಾತನಾಡಿ, ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನರನ್ನು ಆರ್ಥಿಕವಾಗಿ ಸದೃಢರನ್ನಾಗಿಸಿದೆ. ಹೊಸ ಯೋಜನೆಗಳ ಅನುಷ್ಟಾನ ಆಗಿದೆ. ಇಷ್ಟು ದೊಡ್ಡ ಯೋಜನೆಗಳು ದೇಶದಲ್ಲೇ ಇಲ್ಲ. ರಾಜ್ಯ ಸರ್ಕಾರದಲ್ಲಿ ಮಾತ್ರ ಇದೆ. ಜನಪ್ರತಿನಿಧಿಗಳು ಅಧಿಕಾರಿಗಳು ಜೊತೆಯಾಗಿ ಕೆಲಸ ಮಾಡಿದಾಗ ಮಾತ್ರ ಯೋಜನೆಗಳ ಸರಿಯಾದ ಅನುಷ್ಠಾನ ಸಾಧ್ಯ. ಇದು ಇಲ್ಲಿ ಯಶಸ್ವಿಯಾಗಿದೆ ಎಂದರು.ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಸರ್ಕಾರ ನುಡಿದಂತೆ ನಡೆದಿದೆ. ಇದು ಅರ್ಥಪೂರ್ಣ ಕಾರ್ಯಕ್ರಮ. ಅರ್ಹರಿಗೆ ಎಲ್ಲರಿಗೂ ಪಂಚ ಗ್ಯಾರಂಟಿ ಯೋಜನೆಗಳು ಸಿಕ್ಕಿವೆ. ವಿರೋಧ ಪಕ್ಷದವರು ಟೀಕೆಗಳನ್ನು ಮಾಡುತ್ತಾರೆ. ಆದರೆ ಇಷ್ಟು ಯೋಜನೆಗಳನ್ನು ಯಾರೂ ಕೂಡ ಕೊಡಲು ಸಾಧ್ಯವಿಲ್ಲ. ಅದರೆ ಕಾಂಗ್ರೆಸ್ ಸರ್ಕಾರ ಕೊಟ್ಟಿದೆ. ಇದರ ಸದುಪಯೋಗವನ್ನು ಎಲ್ಲಾ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದರು.ಕಡಬ ತಾಲೂಕು ಗ್ರಾರಂಟಿ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಮಾತನಾಡಿ, ಹಸಿವು ಮುಕ್ತ ರಾಜ್ಯ ಆಗಬೇಕು. ಮಹಿಳೆಯರು ಸ್ವಾಭಿಮಾನದಿಂದ ಜೀವನ ಮಾಡಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡಿದೆ. ಉದ್ಯೋಗದಿಂದ ವಂಚಿತರಾದವರಿಗೆ ಯುವ ನಿಧಿಯನ್ನು ಪ್ರಾರಂಭಮಾಡಲಾಗಿದೆ. ಈ ಶಿಬಿರದಿಂದ ಎಲ್ಲರೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಪಂಚಗ್ಯಾರಂಟಿ ಅನುಷ್ಟಾನ ಸಮಿತಿ ಕಡಬ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸದಸ್ಯರಾದ ಅಶೋಕ್ ನೆಕ್ರಾಜೆ, ಅಜಿತ್ ಕುಮಾರ್, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ, ಸೌಮ್ಯ ಭರತ್ ಅವರನ್ನು ಸನ್ಮಾನಿಸಲಾಯಿತು.ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ, ಬಳ್ಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರ್ಷಿತ್ ಕಾರ್ಜಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಸದಸ್ಯರಾದ ಎ.ಕೆ.ಬಶೀರ್, ಹನೀಫ್ ಕೆ.ಎಂ., ಸತೀಶ್ ಪಿ., ಗೌರಿ ಕೆ, ಅವಿನಾಶ್, ಹರಿಣಾಕ್ಷಿ, ಉಷಾ ಅಂಚನ್, ದೀಕ್ಷಿತ್, ರಾಘವೇಂದ್ರ, ಜಗದೀಶ್ ಗಂಗಾಧರ ಶೆಟ್ಟಿ, ಭವಾನಿಶಂಕರ್, ಮಾಧವ ಪೂಜಾರಿ, ಸೈಮನ್ ಸಿ.ಜೆ, ಮೆಸ್ಕಾಂ ಇಲಾಖೆ ಸತೀಶ್, ಶಕ್ತಿ ಯೋಜನೆ ಅಚ್ಚುತ ಭಟ್, ಅನ್ನಭಾಗ್ಯ ಯೋಜನೆ ಶಂಕರ್ ಕೌಶಲ್ಯ ಅಭಿವೃದ್ಧಿ ಇಲಾಖೆ ಮಂಜೂಷಾ ಇದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಪಿಡಿಒ ಮಹೇಶ್ ಸ್ವಾಗತಿಸಿದರು. ಕಡಬ ತಾಲೂಕು ಪಂಚಾಯಿತಿ ಐಇಸಿ ಸಂಯೋಜಕ ಭರತ್ ರಾಜ್ ಕಾರ್ಯಕ್ರಮ ನಿರೂಪಿಸಿದರು. ಗಂಗಾಧರ ಶೆಟ್ಟಿ ವಂದಿಸಿದರು. ಪಂಚ ಗ್ಯಾರಂಟಿ ಯೋಜನೆಗಳ ಐದು ಕಡೆಗಳಲ್ಲಿ ಕೌಂಟರ್ ಮಾಡಲಾಗಿತ್ತು. ಫಲಾನುಭವಿಗಳ ನೋಂದಾವಣೆ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.