ಶ್ರೀರಂಗಪಟ್ಟಣ- ಕುಶಾಲನಗರ ರಾಷ್ಟ್ರೀಯ ಹೆದ್ದಾರಿ: ಸರ್ವೀಸ್ ರಸ್ತೆ ನಿರ್ಮಾಣದ ಭರವಸೆ

KannadaprabhaNewsNetwork |  
Published : Sep 12, 2025, 12:06 AM IST
11ಕೆಎಂಎನ್ ಡಿ11 | Kannada Prabha

ಸಾರಾಂಶ

ಶ್ರೀರಂಗಪಟ್ಟಣ- ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆಗಾಗಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದ ರೈತರ ನಿಯೋಗ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಶ್ರೀರಂಗಪಟ್ಟಣ- ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆಗಾಗಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದ ರೈತರ ನಿಯೋಗ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಶ್ರೀರಂಗಪಟ್ಟಣ-ಕುಶಾಲನಗರ ಹೆದ್ದಾರಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದು, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ರೈತರ ಹೋರಾಟದ ಶ್ರಮಕ್ಕೆ ಪ್ರತಿಫಲ ಸಿಕಿದಂತಾಗಿದೆ.

ನವ ದೆಹಲಿಯಲ್ಲಿ ನಿತಿನ್ ಗಡ್ಕರಿ ಅವರ ಗೃಹ ಕಚೇರಿಗೆ ಭೇಟಿ ನೀಡಿ ಶ್ರೀರಂಗಪಟ್ಟಣ- ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಎರಡು ಭಾಗಗಳಲ್ಲಿ ಸರ್ವೀಸ್ ರಸ್ತೆ ನಿರ್ಮಿಸಿಕೊಂಡಬೇಕು. ಹೆದ್ದಾರಿ ಪಕ್ಕದಲ್ಲಿ ಸರ್ವೀಸ್ ರಸ್ತೆ ಮಾಡಿಸದೇ ಹೋದಲ್ಲಿ ರೈತರು ತಮ್ಮ ಜಮೀನುಗಳಿಗೆ ತೆರಳಲು ಸಾಧ್ಯವಿಲ್ಲ. ರೈತರು ಬೆಳೆದ ಬೆಳೆಗಳನ್ನು ಸಾಗಾಣಿಕೆ ರಸ್ತೆ ಇಲ್ಲ. ಶ್ರೀರಂಗಪಟ್ಟಣ ಒಂದು ಐತಿಹಾಸಿಕ ಪ್ರವಾಸಿ ತಾಣ. ಹೀಗಾಗಿ ಸರ್ವಿಸ್ ರಸ್ತೆ ನಿರ್ಮಿಸಿಕೊಡುವಂತೆ ವಿವರವಾಗಿ ಮಾಹಿತಿ ನೀಡಿದರು.

ನಂತರ ಕೇಂದ್ರವರು ಮನವಿಗೆ ಸ್ಪಂದಿಸಿ, ನಿರ್ಮಾಣ ಮಾಡಲಾಗುತ್ತಿರುವ ಹೆದ್ದಾರಿ ಎರಡು ಭಾಗಗಳಲ್ಲಿ ಎತ್ತರದ ತಡೆಗೋಡೆಗಳು ನಿರ್ಮಾಣವಾಗುತ್ತಿರುವುದರಿಂದ ಯಾವುದೇ ಸರ್ವೀಸ್ ರಸ್ತೆ ನಿರ್ಮಿಸಿಕೊಡಲು ಸಾಧ್ಯವಿಲ್ಲ. ಆದರೂ ಎಚ್.ಡಿ ಕುಮಾರಸ್ವಾಮಿ ಅವರೇ ಖುದ್ದು ಆಗಮಿಸಿ ರೈತರ ಪರ ಸರ್ವೀಸ್ ರಸ್ತೆ ಕೇಳುತ್ತಿರುವುದನ್ನು ಪರಿಗಣನೆಗೆ ತೆಗೆದುಕೊಂಡು ಹೆಚ್ಚುವರಿಯಾಗಿ ಅಗತ್ಯ ಹಣ ಬಿಡುಗಡೆ ಮಾಡಿ ರಸ್ತೆ ಮಾಡಿಕೊಂಡುವುದಾಗಿ ಭರವಸೆ ನೀಡಿದರು.

ಈ ವೇಳೆ ರೈತರು ಹರ್ಷ ವ್ಯಕ್ತಪಡಿಸಿ. ಸಚಿವರಾದ ನಿತಿನ್ ಗಡ್ಕರಿ, ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

ರೈತ ಹಾಗೂ ಗ್ರಾಪಂ ಸದಸ್ಯ ರಾಮಕೃಷ್ಣ ಮಾತನಾಡಿ, ಮಾಜಿ‌ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತು ಕೊಟ್ಟಂತೆ 20ಕ್ಕೂ ಹೆಚ್ಚು ರೈತರ ನಿಯೋಗವನ್ನ ದೆಹಲಿಗೆ ಕರೆತಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಸಿದ್ದು, ನಮ್ಮನ್ನು ನೋಡಿದ ಕುಮಾರಸ್ವಾಮಿ ಅವರು, ಮಂಡ್ಯದ ಜಿಲ್ಲಾ ರೈತರು ಬಂದಿದ್ದಾರೆ ಎಂದು ಹೆಚ್ಚಿನ ಗೌರವ ತೋರಿ ಎಲ್ಲರಿಗೂ ಊಟೋಪಚಾರ ನೀಡಿದರು.

ನಂತರ ಖುದ್ದು ಸಂಬಂಧಪಟ್ಟ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿ ಮಾಡಿಸಿ ರೈತರ ದೊಡ್ಡ ತಲೆನೋವಾಗಿ ಪರಿಗಣಿಸಿದ್ದ ಸರ್ವೀಸ್ ರಸ್ತೆ ಮಾಡಿಸಿಕೊಡಲು ಒಪ್ಪಿಸಿದ್ದಾರೆ. ಈ ಭಾಗದ ರೈತರು ಸೇರಿದಂತೆ ಸಾರ್ವಜನಿಕರು ಸಚಿವರಿಗೆ ಆಭಾರಿಯಾಗಿದ್ದೇವೆ‌ ಎಂದರು.

ಈ ವೇಳೆ ಪಾಲಹಳ್ಳಿ ಗ್ರಾಮದ ಡಾ.ಪ್ರಶಾಂತ್ ಡಿ.ಎ, ವೆಂಕಟೇಶ್, ರವಿ, ಎಂಪಿಸಿಎಸ್ ಅಧ್ಯಕ್ಷ ಲೋಕೇಶ್, ತಾಂಡು ಶ್ರೀರಂಗಪಟ್ಟಣ ಸುನಿಲ್, ಚಂದನ್, ಪಶ್ಚಿಮಾಹಿನಿ ಸತ್ಯಪ್ಪ, ಪುರಸಭಾ ಮಾಜಿ ಸದಸ್ಯಾದ ಸಾಯಿ ಕುಮಾರ್, ವೆಂಕಟೇಶ್, ಅಶ್ವಥ್ ನಾರಾಯಣ, ಲೊಕೇಶ್, ರಾಂಪುರ ಪ್ರೀತಂ, ಪ್ರವೀಣ್, ರಾಕೇಶ್ ಸೇರಿದಂತೆ ಇತರರಿದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ