ಪೌರಕಾರ್ಮಿಕರಿಗೆ ವಸತಿ ಕಲ್ಪಿಸುವ ಭರವಸೆ

KannadaprabhaNewsNetwork |  
Published : Sep 26, 2025, 01:00 AM IST
23ಕೆಜಿಎಫ್‌4 | Kannada Prabha

ಸಾರಾಂಶ

ನಗರದ ಸ್ವಚ್ಚತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವುದರ ಮೂಲಕ ಅವರ ಬದುಕು ಮತ್ತು ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸಿಬೇಕು

ಕನ್ನಡಪ್ರಭ ವಾರ್ತೆ ಕೆಜಿಎಫ್ನಗರಸಭೆಯಲ್ಲಿ ೧೧೯ ಮಂದಿ ಪೌರಕಾರ್ಮಿಕರು ಇದ್ದು, ೫೯ ಮಂದಿಗೆ ಮಾತ್ರ ಗೃಹ ಭಾಗ್ಯ ಯೋಜನೆಯಡಿ ಮನೆಗಳನ್ನು ನೀಡಲಾಗಿದೆ. ಉಳಿದ ೬೦ ಮಂದಿಗೆ ಸರ್ಕಾರದಿಂದ ಅನುದಾನ ತಂದು, ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸುವ ಕೆಲಸ ಮಾಡಲಾಗುವುದು ಎಂದು ಶಾಸಕಿ ರೂಪಕಲಾ ಶಶಿಧರ್ ಭರವಸೆ ನೀಡಿದರು. ನಗರಸಭಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಸರ್ಕಾರದಲ್ಲಿ ಪೌರಕಾರ್ಮಿಕರಿಗೆ ಯಾವುದೇ ಸವಲತ್ತುಗಳು ಇರಲಿಲ್ಲ. ಕಾರ್ಮಿಕರ ಸತತ ಹೋರಾಟದಿಂದ ಕಾರ್ಮಿಕರನ್ನು ಕಾಯಂಗೊಳಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ ಎಂದರು. ಮಕ್ಕಳ ಶಿಕ್ಷಣಕ್ಕೆ ಆಧ್ಯತೆ ನೀಡಿ

ನಗರದ ಸ್ವಚ್ಚತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವುದರ ಮೂಲಕ ಅವರ ಬದುಕು ಮತ್ತು ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸಿಬೇಕು. ಪೌರ ಕಾರ್ಮಿಕರು ಕುಡಿತದಿಂದ ದೂರವಿದ್ದು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಕೆಟ್ಟ ಅಭ್ಯಾಸಗಳಿಂದ ಅನಾಹುತ ಮಾಡಿಕೊಂಡು ನಿಮ್ಮನ್ನೇ ನಂಬಿದ ಕುಟುಂಬದವರಿಗೆ ಅನ್ಯಾಯ ಮಾಡಬಾರದು. ಬಂದ ವೇತನದಲ್ಲಿ ಹಣ ಉಳಿತಾಯ ಮಾಡಿ, ಒಳ್ಳೆಯ ಉದ್ದೇಶಗಳಿಗೆ ಬಳಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಕೆಲವು ಪೌರ ಕಾರ್ಮಿಕರು ಕೇವಲ ಹಾಜರಾತಿ ಪುಸಕ್ತದಲ್ಲಿ ಸಹಿ ಮಾಡಿ ಎಲ್ಲೋ ಕುಳಿತುಕೊಂಡು ಕಾಲಹರಣ ಮಾಡುತ್ತಿರುತ್ತಾರೆ, ಅಂತಹವರ ವಿರುದ್ಧ ನಗರಸಭೆ ಪೌರಾಯುಕ್ತರು ಕ್ರಮಕೈಗೊಳ್ಳಬೇಕು. ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಪೌರಕಾರ್ಮಿಕರನ್ನು ಗುರುತಿಸಿ ಸನ್ಮಾನಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಇಂಧಿರಾಗಾAಧಿ, ಸ್ಥಾಯಿ ಸಮಿತಿ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಪೌರಾಯುಕ್ತ ಆಂಜನೇಯಲು, ಎಇಇ ಗಂಗಾಧರ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ರಾಮು, ಕಾರ್ಯದರ್ಶಿ ವೆಂಕಟೇಶ್, ಉಪಾಧ್ಯಕ್ಷ ರಾಜಾ, ಮೂರ್ತಿ, ಓಬಳಯ್ಯ, ಗಿರಿ, ರಾಜೇಂದ್ರ, ವಾಸು, ಕೊಂಡಯ್ಯ, ತಂಗರಾಜು, ಅರುಣ್, ನಾರಾಯಣಸ್ವಾಮಿ ಇತರರು ಹಾಜರಿದ್ದರು.

PREV

Recommended Stories

ಕಾಸರಗೋಡಲ್ಲಿ ಕನ್ನಡ ಫಲಕ: ಕೇರಳಕ್ಕೆ ಕೇಂದ್ರ ನಿರ್ದೇಶನ
ಒಂದು ತಿಂಗಳಾದ್ರೂ ಬೈಕ್‌ ಟ್ಯಾಕ್ಸಿಗೆ ನೀತಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ