ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಶಕ್ತಿ ಯೋಜನೆಯಡಿ ಜಿಲ್ಲೆಗೆ ಹೆಚ್ಚುವರಿ ಬಸ್‌ಗಳ ಬೇಡಿಕೆಗಾಗಿ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚಿಸಲಾಗುವುದು. ೫ ಗ್ಯಾರಂಟಿ ಯೋಜನೆಗಳ ವ್ಯಾಪಕ ಪ್ರಚಾರ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು ೧೧.೪೨ ಕೋಟಿ ಮಹಿಳೆಯರು ಮತ್ತು ಮಕ್ಕಳು ಉಚಿತವಾಗಿ ಪ್ರಯಾಣಿಸಿದ್ದು, ₹ ೩೫೯.೨೨ ಕೋಟಿ ವೆಚ್ಚವಾಗಿದೆ. ಇನ್ನೂ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ, ವಿದ್ಯಾರ್ಥಿಗಳು ಶಾಲೆ ಕಾಲೇಜುಗಳಿಗೆ ಹೋಗಲು ಹೆಚ್ಚವರಿ ಬಸ್‌ಗಳನ್ನು ಓಡಿಸಲು ಮತ್ತು ಅಂತರ ರಾಜ್ಯಗಳಿಗೆ ಹೊಂದಿಕೊಂಡಿರುವ ಗ್ರಾಮಗಳಿಗೆ ಬಸ್‌ಗಳ ನಿಲುಗಡೆ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದರು.ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸಭೆಗೆ ಮಾಹಿತಿ ನೀಡಿ, ಶಕ್ತಿ ಯೋಜನೆಯಡಿ ಸಾಧಿಸಲಾದ ಪ್ರಗತಿ ಹಾಗೂ ಜಿಲ್ಲೆಯಿಂದ ಬೆಂಗಳೂರಿಗೆ ಅಮೋಘವರ್ಷ ಹಾಗೂ ಕಲ್ಯಾಣ ರಥ ಬಸ್ ಸೇವೆ ಆರಂಭಿಸಲಾಗಿದ್ದು, ಈ ಬಸ್‌ಗಳಿಂದ ಸಾರ್ವಜನಿಕರಿಗೆ ಕಲ್ಪಿಸಲಾದ ಅನುಕೂಲತೆಗೆ ಕೇಂದ್ರ ಸರ್ಕಾರದಿಂದ ಬಹುಮಾನ ನೀಡಲಾಗಿದೆ. ಜಿಲ್ಲೆಗೆ ಹೆಚ್ಚುವರಿ ಬಸ್‌ಗಳನ್ನು ಒದಗಿಸಿದ್ದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಶಿಫಾರಸಿನ ಮೇರೆಗೆ ಅವಶ್ಯಕತೆ ಇರುವ ಕಡೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಹಾಗೂ ಬಸ್ ನಿಲ್ದಾಣಗಳಲ್ಲಿರುವ ಆವರಣ ಮತ್ತು ಶೌಚಾಲಯಗಳಲ್ಲಿ ಸ್ವಚ್ಛತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಉಪಾದ್ಯಕ್ಷ ಸುಂದರಪಾಲ ರೂಪಸಿಂಗ್ ರಾಠೋಡ, ನಬಿಲಾಲ ಶಾಬುದ್ದೀನ ನಾಯ್ಕೋಡಿ, ಆನಂದ ಜಾಧವ ಹಾಗೂ ಮಹಾದೇವಿ ಅಶೋಕ ಗೋಕಾಕ ಸೇರಿದಂತೆ ಮುಂತಾದವರು ಇದ್ದರು. ಜಿಲ್ಲಾ ಪಂಚಾಯತಿ ಯೋಜನಾ ಮತ್ತು ಅಂದಾಜು ಮೌಲ್ಯಮಾನಪನಾಧಿಕಾರಿ ಎ.ಬಿ.ಅಲ್ಲಾಪುರ ವಂದಿಸಿದರು.