ಕನ್ನಡಪ್ರಭ ವಾರ್ತೆ, ತುಮಕೂರು
ವಿವೇಕಾನಂದ ಕ್ರೀಡಾ ಸಂಸ್ಥೆ ಹಾಗೂ ರಾಜ್ಯ ಖೋ ಖೋ ಸಂಸ್ಥೆ ಆಶ್ರಯದಲ್ಲಿ ಶುಕ್ರವಾರ ಸಂಜೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಖೋ ಖೋ ಪಂದ್ಯಾವಳಿ ಉದ್ಘಾಟನೆ ಮಾಡಿ ಮಾತನಾಡಿದರು.
ವ್ಯಕ್ತಿಯ ಬೆಳವಣಿಗೆಗೆ ಜ್ಞಾನದಷ್ಟೇ ಕ್ರೀಡೆಯೂ ಮುಖ್ಯ. ಯುವಜನರು ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ ಸಾಮರ್ಥ್ಯ, ಆರೋಗ್ಯ ವೃದ್ಧಿಸಿಕೊಳ್ಳುವಂತೆ ಸಲಹೆ ಮಾಡಿದರು.ಕ್ರೀಡಾವಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸಹಕಾರದ ಸಹಕಾರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಈ ಕಾಲೇಜು ಮೈದಾನದಲ್ಲಿ ಆರು ಕೋಟಿ ರು. ವೆಚ್ಚ ಮಾಡಿ ವಿವಿಧ ಕ್ರೀಡೆಗಳಿಗಾಗಿ ವ್ಯವಸ್ಥಿತ ಕ್ರೀಡಾಂಗಣ, ಅಗತ್ಯ ಅನುಕೂಲ ಮಾಡಿಕೊಡಲಾಗಿದೆ. ಕ್ರೀಡಾಪಟುಗಳು ಇದರ ಉಪಯೋಗ ಪಡೆದು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಜ್ಯೋತಿಗಣೇಶ್ ಹೇಳಿದರು.
ಎಸ್.ಪಿ.ಡೆವಲಪರ್ಸ್ ಮಾಲೀಕ ಎಸ್.ಪಿ.ಚಿದಾನಂದ್ ಮಾತನಾಡಿ, 50 ವರ್ಷದ ಆಸುಪಾಸಿನಲ್ಲಿರುವ ವಿವೇಕಾನಂದ ಕ್ರೀಡಾ ಸಂಸ್ಥೆ ಅನೇಕ ಪ್ರತಿಭಾವಂತ ಕ್ರೀಡಾಪಟುಗಳನ್ನು ನಾಡಿಗೆ ನೀಡಿದೆ. ಅವರು ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದಾರೆ. ಸಂಸ್ಥೆಯ ಕ್ರೀಡಾ ಸೇವೆ ಶ್ಲಾಘನೀಯ. ಮುಂದೆ ಇದೇ ಜಾಗದಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಆಯೋಜನೆ ಮಾಡಿ ಹೆಸರಾಗಲಿ ಎಂದು ಆಶಿಸಿದರು.ಹಿರಿಯ ಕ್ರೀಡಾಪಟು ಚೈತ್ರ ಖೋ ಖೋ ಪಂದ್ಯಾವಳಿಗೆ ಚಾಲನೆ ನೀಡಿದರು. ರಾಜ್ಯ ಖೋ ಖೋ ಸಂಸ್ಥೆ ಅಧ್ಯಕ್ಷ ಲೋಕೇಶ್ವರ್, ವಿವೇಕಾನಂದ ಕ್ರೀಡಾ ಸಂಸ್ಥೆ ಅಧ್ಯಕ್ಷ ಎಚ್.ಡಿ.ಕುಮಾರ್, ಗೌರವಾಧ್ಯಕ್ಷ ರಾಮಕೃಷ್ಣಯ್ಯ, ಉಪಾಧ್ಯಕ್ಷ ಎನ್.ನರಸಿಂಹರಾಜು, ಮಾಜಿ ಅಧ್ಯಕ್ಷ ಧನಿಯಾಕುಮಾರ್, ಕಾರ್ಯದರ್ಶಿ ವಿನಯ್, ಜಂಟಿ ಕಾರ್ಯದರ್ಶಿ ಪ್ರೀತಂ, ಖಜಾಂಚಿ ಎಸ್.ಎನ್.ಹರೀಶ್, ಹಿರಿಯ ಕ್ರೀಡಾ ತರಬೇತುದಾರ ರವೀಶ್, ಪ್ರದೀಪ್‌ಕುಮಾರ್, ವಿವಿಧ ಸಂಘಟನೆಗಳ ಮುಖಂಡರಾದ ಸೋಮಶೇಖರ್, ವೀರಭದ್ರಯ್ಯ, ಚಂದ್ರಶೇಖರ , ಸುರೇಶ್ ಮೊದಲಾದವರು ಭಾಗವಹಿಸಿದ್ದರು.