ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಪ್ರಚುರಪಡಿಸಿ: ಸತೀಶ ಪಾಂಡುರಂಗ ನಾಯಕ

KannadaprabhaNewsNetwork |  
Published : Jun 01, 2025, 02:02 AM IST
31ಎಚ್.ಎಲ್.ವೈ-1: ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಸತೀಶ ಪಾಂಡುರಂಗ ನಾಯಕ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಹಳಿಯಾಳ ತಾಲೂಕಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು. | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಶೋಷಿತರ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು...

ಹಳಿಯಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಶೋಷಿತರ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜವಾಬ್ದಾರಿಯಿಂದ ಅಧಿಕಾರಿಗಳು, ಸಮಿತಿ ಸದಸ್ಯರು ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಸತೀಶ ಪಾಂಡುರಂಗ ನಾಯಕ ಹೇಳಿದರು.ಶನಿವಾರ ಹಳಿಯಾಳ ತಾಲೂಕು ಪಂಚಾಯತ ಸಭಾಭವನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಅನ್ನಭಾಗ್ಯಕ್ಕೆ ವಿತರಣೆ ಸರಿಯಾಗಲಿ:

ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಅಕ್ಕಿಯು ಅಕ್ರಮವಾಗಿ ಕಳ್ಳಸಾಗಣೆ ಆಗುವುದನ್ನು ಅಧಿಕಾರಿಗಳು ಸಂಪೂರ್ಣವಾಗಿ ಹತೋಟಿಗೆ ತರಬೇಕು. ಕಳಪೆ ಅಕ್ಕಿ ವಿತರಿಸಲಾಗುತ್ತಿದ್ದರೇ ಅಥವಾ ವಿತರಣೆಯಲ್ಲಿ ಫಲಾನುಭವಿಗಳಿಗೆ ಮೋಸವಾಗದಂತೆ ನೋಡಿಕೊಳ್ಳಬೇಕು, ಆಹಾರ ಧಾನ್ಯ ವಿತರಿಸುವಾಗ ತೂಕದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ನ್ಯಾಯಬೆಲೆ ಅಂಗಡಿಕಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ತಿಳಿಸಿದರು.

ತಿಂಗಳಿಗೊಮ್ಮೆ ಅಧಿಕಾರಿಗಳು ಪಡಿತರ ವಿತರಣೆ ಅಂಗಡಿಗಳಿಗೆ ಆಕಸ್ಮಿಕ ಭೇಟಿ ನೀಡುವುದನ್ನು ಆರಂಭಿಸಬೇಕೆಂದರು.

ಗ್ಯಾರಂಟಿಯಿಂದ ಮಹಿಳೆಯರಿಗೆ ಸಬಲತೆ:

ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಗಳು ಆರ್ಥಿಕ ಸಬಲತೆಯೊಂದಿಗೆ ಸ್ತ್ರೀ ಸ್ವಾತಂತ್ರ್ಯ ನೀಡಿವೆ. ಇಂದು ಮಹಿಳೆಯು ಸ್ವತಂತ್ರವಾಗಿ ಕುಟುಂಬ ನಿರ್ವಹಣೆ ಮಾಡುವ ಮೂಲಕ ಕುಟುಂಬವನ್ನು ಆರ್ಥಿಕವಾಗಿ ಸಬಲವಾಗಿಸಲು ಪಂಚಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದರು.

ಕೆಲವು ಫಲಾನುಭವಿಗಳ ಗೃಹಲಕ್ಷ್ಮೀ ಮೊತ್ತವು ಬ್ಯಾಂಕ್ ಖಾತೆಗೆ ಜಮಾಯಾಗದೇ ಇರುವ ಪ್ರಕರಣಗಳು ಕಂಡು ಬಂದರೆ ಅಧಿಕಾರಿಗಳು ಇದನ್ನು ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು ಎಂದರು.

ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯನ್ನು ಅಧಿಕಾರಿಗಳು ಮಂಡಿಸಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ ಎಂ. ಮುಡೇಶ್ವರ, ತಾಲೂಕು ಅಧ್ಯಕ್ಷ ಏಕನಾಥ ಜಾವಳೇಕರ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಆನಂದ ಜಬೀಬ, ಹಳಿಯಾಳ ತಾಪಂ ಇಒ ವಿಲಾಸರಾಜ ಹಾಗೂ ಎಲ್ಲ ತಾಲೂಕಿನ ಅಧ್ಯಕ್ಷರು, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಹಳಿಯಾಳ ತಾಲೂಕ ಸಮಿತಿಯ ಸದಸ್ಯರು ಇದ್ದರು.

PREV

Recommended Stories

ದರ್ಶನ್‌ ಅಶ್ಲೀಲ ಫ್ಯಾನ್ಸ್‌ ವಿರುದ್ಧ ರಮ್ಯ ಸಮರ
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ನಾಲ್ವರು ಐಪಿಎಸ್‌ ಸಸ್ಪೆಂಡ್‌ ವಾಪಸ್‌