ವಿದೇಶದ ಸಮ್ಮೇಳನದಿಂದ ಕನ್ನಡ ಭಾಷೆ ವೃದ್ಧಿ: ಆದಿಚುಂಚನಗಿರಿಯ ಶಂಭುನಾಥ ಸ್ವಾಮೀಜಿ ಅಭಿಪ್ರಾಯ

KannadaprabhaNewsNetwork | Published : Feb 25, 2024 1:50 AM

ಸಾರಾಂಶ

ಹೊರ ದೇಶಗಳು ಹಾಗೂ ಇತರೆ ರಾಜ್ಯಗಳಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡಲು ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದರೆ ಕನ್ನಡ ಸಾಹಿತ್ಯ, ಕಲೆ ಬೆಳೆಸಲು ಅನುಕೂಲವಾಗುತ್ತದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

ಹೆಬ್ಬಾಳಲಿನಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಹೊರ ದೇಶಗಳು ಹಾಗೂ ಇತರೆ ರಾಜ್ಯಗಳಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡಲು ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದರೆ ಕನ್ನಡ ಸಾಹಿತ್ಯ, ಕಲೆ ಬೆಳೆಸಲು ಅನುಕೂಲವಾಗುತ್ತದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು.

ಹೋಬಳಿಯ ಹೆಬ್ಬಾಳಲು ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಹಾಗೂ ಹೋಬಳಿ ಘಟಕ ಆಯೋಜಿಸಿದ್ದ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಆಶೀರ್ವಚನ ನೀಡಿದರು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಜ್ಞಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸಾಹಿತ್ಯಾತ್ಮಕವಾಗಿ ಮಕ್ಕಳಲ್ಲಿ ಜ್ಞಾನದ ಸಂಪತ್ತನ್ನು ಹೆಚ್ಚಿಸಿ ಕನ್ನಡವನ್ನು ಶ್ರೀಮಂತಗೊಳಿಸಲು ಸರ್ಕಾರಗಳು, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳು ಒಗ್ಗಟ್ಟಾಗಿ ಪ್ರೋತ್ಸಾಹ ನೀಡಿದರೆ ಎಲ್ಲಾ ಕಡೆ ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ನಡೆಸಲು ಅನುಕೂಲವಾಗುತ್ತದೆ. ಇದರಿಂದ ಮಕ್ಕಳು ಉನ್ನತ ಮಟ್ಟಕ್ಕೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮಕ್ಕಳ ಸಾಹಿತ್ಯ ಪರಿಷತ್ ಸಮ್ಮೇಳನ, ಶೃಂಗೇರಿ, ನವದೆಹಲಿಯ ಸಮ್ಮೇಳನಗಳ ಯಶಸ್ಸನ್ನು ಸ್ಮರಿಸಿದರು. ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಕನ್ನಡಕ್ಕೆ 2 ಸಾವಿರ ವರ್ಷ ಇತಿಹಾಸ ಇದೆ. ಭಾರತದಲ್ಲಿ ಕನ್ನಡದಲ್ಲಿ ಮಾತ್ರ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಮಕ್ಕಳಲ್ಲಿ ಸಾಹಿತ್ಯದ ಗಟ್ಟಿತನ ಬೆಳೆಸಲು ಬೆಂಗಳೂರು ಹಾಗೂ ಮಹಾರಾಷ್ಟ್ರದಲ್ಲಿ ಸಮ್ಮೇಳನಗಳನ್ನು ಮಾಡಲು ಶಾಸಕರು ಹಾಗೂ ಮಹಾರಾಷ್ಟ್ರದ ಕನ್ನಡದ ಪ್ರತಿನಿಧಿಗಳನ್ನು ಸಂಪರ್ಕಿಸುತ್ತೇನೆ ಎಂದು ತಿಳಿಸಿದರು.

ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕಾರಣರಾದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಸಿದ್ದಲಿಂಗಯ್ಯನವರನ್ನು ಸ್ಮರಿಸಿದರು. ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸಿ.ಎನ್. ಅಶೋಕ್ ಮಾತನಾಡಿ, ಚನ್ನರಾಯಪಟ್ಟಣ ತಾಲೂಕಿನಲ್ಲಿ 10 ವರ್ಷದಲ್ಲಿ ಪ್ರಾರಂಭವಾದ ಮಕ್ಕಳ ಸಾಹಿತ್ಯ ಸಮ್ಮೇಳನ ನವದೆಹಲಿ, ಶೃಂಗೇರಿ, ಹಾಸನ, ವಿವಿಧ ಜಿಲ್ಲೆಗಳು, ತಾಲೂಕಿನಲ್ಲಿ ನಡೆದ ಕಾರ್ಯಕ್ರಮಗಳು ಯಶಸ್ವಿಯಾಗಿ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಸಮ್ಮೇಳನ ಅಧ್ಯಕ್ಷೆ ಕುಮಾರಿ ಕೆ. ಕಲಾ, ಕುಮಾರಿ ಬುಶ್ರಾಫಿರ್ದೋಸ್, ಕುಮಾರಿ ಎಂ. ಲೀಲಾ ಅವರನ್ನು ಶಾಸಕ ಸಿ.ಎನ್. ಬಾಲಕೃಷ್ಣ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಸಮಾರಂಭದಲ್ಲಿ ಶಿಕ್ಷಣಾಧಿಕಾರಿ ದೀಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಅನಿಲ್, ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎ.ಎಲ್. ನಾಗೇಶ್, ಹೋಬಳಿ ಘಟಕ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ಅಂತೋನಿ ಪ್ರಸಾದ್, ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ಅಧ್ಯಕ್ಷ ಬಿ. ಆರ್. ದೊರೆಸ್ವಾಮಿ, ಎನ್. ಎಸ್. ಲಕ್ಷ್ಮಣ್, ತಾಲೂಕು ಉಪಾಧ್ಯಕ್ಷ ಜಗದೀಶ್, ಸಂಘಟನಾ ಕಾರ್ಯದರ್ಶಿ ಸಚಿನ್, ಗ್ರಾಮ ಪಂಚಾಯತಿ ಸದಸ್ಯ ರವಿಕುಮಾರ್, ಉಮೇಶ್, ಪುಟ್ಟರಾಜು, ಸಾಹಿತಿ ಬೆಳಗುಲಿ ಕೆಂಪಯ್ಯ, ಡಾ ಲೋಕೇಶ್, ಮುಳಕೆರೆ ಪ್ರಕಾಶ್, ಸಂತೋಷ್, ಸಮೂಹ ಸಂಪನ್ಮೂಲ ವ್ಯಕ್ತಿ ಅಶೋಕ್ ಸುಂದರಂ, ಹಿರೀಸಾವೆ ಹೋಬಳಿ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಿವಾಸ್ ಉಳ್ಳವಳ್ಳಿ, ಕೆಂಪೇಗೌಡ ವೇದಿಕೆ ರಾಜ್ಯಾಧ್ಯಕ್ಷ ಆನಂದ್ ಕಾಳೆನಹಳ್ಳಿ, ಇನಾಸಪ್ಪ ಹಾಜರಿದ್ದರು. ಹೆಬ್ಬಾಳಲು ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ದ್ವಿತೀಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕ ಸಿ.ಎನ್.ಬಾಲಕೃಷ್ಣ, ಸಿ.ಎನ್.ಅಶೋಕ್, ಎ.ಎಲ್.ನಾಗೇಶ್, ದೊರೆಸ್ವಾಮಿ, ಸಿದ್ದರಾಜು, ಕುಮಾರಿ ಕೆ. ಕಲಾ ಇದ್ದರು.

Share this article