ಅಭಿವೃದ್ದಿಗಾಗಿ ಸಂಸದರ ನಿಧಿ ಸಮರ್ಪಕ ಬಳಕೆ

KannadaprabhaNewsNetwork |  
Published : Jul 18, 2025, 12:54 AM IST
ದೊಡ್ಡಬಳ್ಳಾಪುರ ನಗರ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಸಂಸದ ಡಾ.ಕೆ.ಸುಧಾಕರ್‌ ಗುರುವಾರ ಚಾಲನೆ ನೀಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಡಾ.ಕೆ ಸುಧಾಕರ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ದೊಡ್ಡಬಳ್ಳಾಪುರ: ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಡಾ.ಕೆ ಸುಧಾಕರ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ತಾವು ಬದ್ಧರಾಗಿದ್ದು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸುವುದು ತಮ್ಮ ಆದ್ಯತೆಯಾಗಿದೆ. ಈ ಎಲ್ಲಾ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿವೆ. ಮೂಲಸೌಕರ್ಯ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಂಸದರ ನಿಧಿಯ ಪರಿಪೂರ್ಣ ಬಳಕೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಕಾಮಗಾರಿಗಳಿಗೆ ಚಾಲನೆ:

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.15ರ ರಂಗಪ್ಪ ಸರ್ಕಲ್ ಹಾಗೂ ವಾರ್ಡ್ ನಂ.4 ರ ಪ್ರವಾಸಿ ಮಂದಿರ ವೃತ್ತದ ಬಳಿ ನೂತನ ಬಸ್ ತಂಗುದಾಣ, ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಯ ಕೊಡಿಗೆಹಳ್ಳಿ ಹಾಗೂ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿಯ ನಾಗಸಂದ್ರ ಗ್ರಾಮಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹೈಮಾಸ್ಕ್ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿದರು.

ದೊಡ್ಡಬೆಳವಂಗಲ ಗ್ರಾಮದಲ್ಲಿ ಆರ್‌ಸಿಸಿ ಕಟ್ಟಡದೊಂದಿಗೆ ನಿರ್ಮಿಸಲಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಬಸ್ ತಂಗುದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಹುಲಿಕುಂಟೆ ಗ್ರಾಮದಲ್ಲಿ ಹೈಮಾಸ್ಟ್ ದೀಪ ಅಳವಡಿಕೆ, ಬನವತಿ ಗ್ರಾಮದಲ್ಲಿ ಆರ್‌ಸಿಸಿ ಕಟ್ಟಡದೊಂದಿಗೆ ನಿರ್ಮಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಬೀಡಿಕೆರೆ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿಗಳಿಗೆ ಸಂಸದರು ಶಂಕುಸ್ಥಾಪನೆ ನೆರವೇರಿಸಿದರು.

ಶಾಸಕ ಧೀರಜ್ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್, ಹಲವು ಸದಸ್ಯರು, ಸ್ಥಳೀಯ ಮುಖಂಡರು, ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

17ಕೆಡಿಬಿಪಿ1- ದೊಡ್ಡಬಳ್ಳಾಪುರ ನಗರ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಸಂಸದ ಡಾ.ಕೆ.ಸುಧಾಕರ್‌ ಗುರುವಾರ ಚಾಲನೆ ನೀಡಿದರು.

PREV

Latest Stories

ನಗರದಲ್ಲಿ ಶೀಘ್ರ ಟೋಯಿಂಗ್ ವ್ಯವಸ್ಥೆ ಮರು ಜಾರಿ:ಪರಂ
ದೇಶದಲ್ಲೇ ಫಸ್ಟ್‌ ಟೈಂ ಜನರ ಮನೆ ಬಾಗಿಲಿಗೆ ಪೊಲೀಸ್ : ಪರಂ
ನೀರುಗಾಲುವೆಗಳಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣದಿಂದ ಪ್ರವಾಹ