ಗ್ರಾಮ ಸಡಕ್ ಯೋಜನೆ ಹಂತ-4 ಸಮರ್ಪಕ ಜಾರಿಗೊಳಿಸಿ

KannadaprabhaNewsNetwork |  
Published : Mar 29, 2025, 12:31 AM IST
ಕ್ಯಾಪ್ಷನ28ಕೆಡಿವಿಜಿ33 ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಹಂತ-4ರ ಅನುಷ್ಠಾನಕ್ಕೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಂಸತ್ತಿನ ಗಮನ ಸೆಳೆದರು.

- ಸಂಸತ್‌ ಅಧಿವೇಶನ ಪ್ರಶ್ನೋತ್ತರ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಒತ್ತಾಯ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಹಂತ-4ರ ಅನುಷ್ಠಾನಕ್ಕೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಂಸತ್ತಿನ ಗಮನ ಸೆಳೆದರು.

ಗುರುವಾರ ನಡೆದ ಸಂಸತ್ತಿನ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪಿಎಂಜೆಎಸ್‌ವೈ ಹಂತ 1, 2, 3, 4ರ ಕುರಿತು ವಿವರವಾಗಿ ತಿಳಿಸಿದ ಅವರು, ಕೇಂದ್ರ ಸರ್ಕಾರ ಗ್ರಾಮ ಸಡಕ್ ಯೋಜನೆ 2000-01 ರಿಂದ ದಾವಣಗೆರೆ ಜಿಲ್ಲೆಯಲ್ಲಿ 3 ಹಂತಗಳಲ್ಲಿ ಅನುಕ್ರಮವಾಗಿ 536 ಕಿಮೀ, 72 ಕಿಮೀ ಮತ್ತು 179 ಕಿಮೀ ರಸ್ತೆಗಳನ್ನು ಒಳಗೊಂಡಿದ್ದು, ಒಟ್ಟು 788.45 ಕಿಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮೊದಲ ಹಂತದಲ್ಲಿ 500ಕ್ಕೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ರಸ್ತೆಗಳನ್ನು ನಿರ್ಮಿಸಲಾಗಿದೆ. 2ನೇ ಮತ್ತು 3ನೇ ಹಂತಗಳಲ್ಲಿ, ಅಸ್ತಿತ್ವದಲ್ಲಿರುವ ಮಾರ್ಗಗಳ ಮೂಲಕ ಮತ್ತು ಪ್ರಮುಖ ಗ್ರಾಮೀಣ ಲಿಂಕ್ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ರಸ್ತೆಗಳು ಗ್ರಾಮೀಣರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಬಲೀಕರಣ ಮತ್ತು ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಕಡಿಮೆ ವೆಚ್ಚದಲ್ಲಿ ಸಾಗಿಸಲು ಮಹತ್ವದ ಕೊಡುಗೆ ನೀಡಿವೆ ಎಂದು ವಿವರಿಸಿದರು.

ಪಿಎಂಜಿಎಸ್‌ವೈ ಹಂತ-4ರ ಯೋಜನೆಯಡಿ, 2011ರ ಜನಗಣತಿಯ ಪ್ರಕಾರ 500ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಸಂಪರ್ಕವಿಲ್ಲದ ಜನವಸತಿ ಗ್ರಾಮಗಳಿಗೆ ರಸ್ತೆಗಳನ್ನು ನಿರ್ಮಿಸುವ ಪ್ರಾಥಮಿಕ ಉದ್ದೇಶದೊಂದಿಗೆ ಹೊಸ ಮಾರ್ಗಸೂಚಿಗಳನ್ನು ಡಿಸೆಂಬರ್-2024 ರಿಂದ ಜಾರಿಗೆ ತರಲಾಗಿದೆ. ಒಂದು ಗ್ರಾಮಕ್ಕೆ ಈಗಾಗಲೇ ರಸ್ತೆ ಇದೆ. ಅದೇ ಗ್ರಾಮಕ್ಕೆ ಮತ್ತೊಂದು ಪರ್ಯಾಯ ರಸ್ತೆ ಅಭಿವೃದ್ಧಿಪಡಿಸಲು ಅವಕಾಶವಿಲ್ಲ. ಈ ಹೊಸ ಮಾರ್ಗಸೂಚಿಯಡಿ ಜಿಲ್ಲೆಯಲ್ಲಿ ಯಾವುದೇ ರಸ್ತೆಗಳು ಅಭಿವೃದ್ಧಿಗೆ ಲಭ್ಯವಿಲ್ಲ, ಆದ್ದರಿಂದ ಅವುಗಳನ್ನು ಗುರುತಿಸಲು ಸಾಧ್ಯವಿಲ್ಲ ಮತ್ತು ಆ ಮೂಲಕ ಗ್ರಾಮ ಸಡಕ್ ಯೋಜನೆಯ 4ನೇ ಹಂತದ ಅನುಷ್ಠಾನಕ್ಕೆ ತೊಂದರೆಯಾಗಿದೆ. ಆದ್ದರಿಂದ, ಮೊದಲ 3 ಹಂತಗಳಲ್ಲಿ ಅನುಸರಿಸಿದ ಹಿಂದಿನ ಮಾರ್ಗಸೂಚಿಗಳ ಪ್ರಕಾರ ಅಸ್ತಿತ್ವದಲ್ಲಿರುವ ಹದಗೆಟ್ಟ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೆ ಅವಕಾಶ ಕಲ್ಪಿಸಲು ಗ್ರಾಮ ಸಡಕ್ ಯೋಜನೆ-4ರ ಮಾರ್ಗಸೂಚಿಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ಮಾಡಲು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಮನವಿ ಮಾಡಿದರು.

- - -

-28ಕೆಡಿವಿಜಿ33: ಡಾ.ಪ್ರಭಾ ಮಲ್ಲಿಕಾರ್ಜುನ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''