ಜಿಲ್ಲೆಗೆ 375 ಕೋಟಿ ಬೆಳೆ ವಿಮೆ ಪರಿಹಾರಕ್ಕೆ ಪ್ರಸ್ತಾವನೆ: ಇಕ್ರಂ ಶರೀಫ್

KannadaprabhaNewsNetwork |  
Published : Nov 27, 2026, 01:15 AM IST
ಕೋತೋವಹೀೋುಗ | Kannada Prabha

ಸಾರಾಂಶ

ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟು ಬರಗಾಲ ಆವರಿಸಿ ಬಿತ್ತಿದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಇಳುವರಿಯಲ್ಲಿ ಗಣನೀಯ ಪ್ರಮಾಣದ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರೈತರಿಗೆ ಉಂಟಾಗಿರುವ ಆರ್ಥಿಕ ನಷ್ಟ ತಗ್ಗಿಸುವ ಹಾಗೂ ಸಕಾಲದಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಗೆ 375 ಕೋಟಿಗೂ ಅಧಿಕ ಮೊತ್ತದ ಬೆಳೆ ವಿಮೆ ಪರಿಹಾರ ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟು ಬರಗಾಲ ಆವರಿಸಿ ಬಿತ್ತಿದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಇಳುವರಿಯಲ್ಲಿ ಗಣನೀಯ ಪ್ರಮಾಣದ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರೈತರಿಗೆ ಉಂಟಾಗಿರುವ ಆರ್ಥಿಕ ನಷ್ಟ ತಗ್ಗಿಸುವ ಹಾಗೂ ಸಕಾಲದಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಗೆ 375 ಕೋಟಿಗೂ ಅಧಿಕ ಮೊತ್ತದ ಬೆಳೆ ವಿಮೆ ಪರಿಹಾರ ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದರು.ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಉಂಟಾಗಿ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿರುತ್ತದೆ. ಸರ್ಕಾರವು ಜಿಲ್ಲೆಯ ಎಲ್ಲಾ 11 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಈಗಾಗಲೆ ಅಧಿಕೃತವಾಗಿ ಘೋಷಿಸಿದ್ದು, ಜಿಲ್ಲೆಯ ಪ್ರಮುಖ ಬೆಳೆಗಳಾದ ಹೆಸರು, ಉದ್ದು, ಸೋಯಾಅವರೆ, ತೊಗರಿ, ಹತ್ತಿ ಸೇರಿದಂತೆ ಇತರೆ ಬೆಳೆಗಳ ಮಳೆ ಕೊರತೆಯಿಂದ ಉಂಟಾದ ಹಾನಿ ಹಾಗೂ ಬೆಳೆಗಳ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಗಣಿಸಿ ಬೆಳೆ ವಿಮೆ ಯೋಜನೆಯಡಿ ರೈತರಿಗೆ ಪರಿಹಾರ ಕಲ್ಪಿಸಲು ಮಧ್ಯಂತರ ಬೆಳೆ ವಿಮೆ ಪರಿಹಾರ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ವಿಮಾ ಸಂಸ್ಥೆಯಾದ ಇಂಡಸ್‌ ಇಂಡ್ ಜನರಲ್ ಇನ್ಶೂರೆನ್ಸ್ ಕಂಪನಿ ಸಹ ಪ್ರಸ್ತಾವನೆಗೆ ತನ್ನ ಸಮ್ಮತಿ ಸೂಚಿಸಿದೆ ಎಂದರು.ಬೆಳೆ ವಿಮೆ ಮಧ್ಯಂತರ ಪರಿಹಾರ ಪ್ರಸ್ತಾವನೆಗೆ ಸರ್ಕಾರದಿಂದ ಅನುಮೋದನೆ ದೊರೆತು ಪರಿಹಾರ ಮಂಜೂರಾದಲ್ಲಿ, ರೈತರು ತಮ್ಮ ವಂತಿಕೆಯಾಗಿ ಪಾವತಿಸಿರುವ 67.82 ಕೋಟಿ ರು. ಪ್ರೀಮಿಯಂ ಮೊತ್ತಕ್ಕೆ ಎದುರಾಗಿ ಸುಮಾರು 6 ಪಟ್ಟು ಹೆಚ್ಚು ಅಂದರೆ 375 ಕೋಟಿ ರು. ಗಳಿಗೂ ಅಧಿಕ ಮೊತ್ತದ ಮಧ್ಯಂತರ ಬೆಳೆ ವಿಮೆ ಪರಿಹಾರವನ್ನು ಜಿಲ್ಲೆಯ ಅರ್ಹ ರೈತರು ಪಡೆಯುವ ನಿರೀಕ್ಷೆಯಿದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಗಣನೀಯ ಪ್ರಮಾಣದ ಆರ್ಥಿಕ ನೆರವು ದೊರೆಯಲಿದ್ದು, ಮುಂದಿನ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದರು.*ಹಿಂಗಾರು ಬೆಳೆ ವಿಮೆ ನೋಂದಣಿ ನ.30ಕ್ಕೆ ಕೊನೆ: ಪ್ರಸಕ್ತ 2026-27ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳಾದ ಕಡಲೆ, ಜೋಳ, ಗೋಧಿ, ಕುಸುಬೆ, ಹಾಗೂ ಇತರೆ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೊಂದಾಯಿಸಲು ನ.30 ಕೊನೆಯ ದಿನಾಂಕವಾಗಿದ್ದು, ರೈತರು ಕೂಡಲೆ ತಮ್ಮ ಹತ್ತಿರದ ಬ್ಯಾಂಕ್, ಗ್ರಾಮ-ಒನ್ ಅಥವಾ ಸಿ.ಎಸ್.ಸಿ ಕೆಂದ್ರಗಳಲ್ಲಿ ನೊಂದಣಿ ಮಾಡಿಸಬಹುದು. ಬೆಳೆ ಸಾಲ ಇರುವ ರೈತರು ತಮ್ಮ ಬೆಳೆ ಸಾಲ ಹೊಂದಿರುವ ಬ್ಯಾಂಕ್‌ಗೆ ಸಂಪರ್ಕಿಸಿ ನೊಂದಣಿ ಮಾಡಿಸಿಕೊಳ್ಳುವಂತೆ ಡಿ.ಸಿ. ಇಕ್ರಂ ಶರೀಫ್ ರೈತರಲ್ಲಿ ಮನವಿ ಮಾಡಿದರು.

---ಬಾಕ್ಸ್‌-----

ಬೆಳೆ ವಿಮೆ: ಕಲಬುರಗಿ ನಂಬರ್-1ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆಗಳಿಗೆ ಪ್ರಕೃತಿ ವಿಕೋಪ, ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇತರ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಆರ್ಥಿಕ ನಷ್ಟದಿಂದ ರಕ್ಷಣೆ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 4,52,609 ರೈತರು 5,35,820.48 ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಸಿ 67.82 ಕೋಟಿ ಪ್ರೀಮಿಯಂ ಮೊತ್ತ ಪಾವತಿಸಿದ್ದಾರೆ. ಕೃಷಿ ಇಲಾಖೆಯ ಅಧಿಕಾರಿ -ಸಿಬ್ಬಂದಿ ನಿರಂತರ ಪ್ರಯತ್ನ ಮತ್ತು ಜಾಗೃತಿಯಿಂದ ಇದು ಸಾಧ್ಯವಾಗಿದೆ. ರಾಜ್ಯದಲ್ಲಿಯೇ ಬೆಳೆ ವಿಮೆ ನೋಂದಣಿಯಲ್ಲಿ ಕಲಬುರಗಿ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ ಎಂದು ಡಿ.ಸಿ. ಇಕ್ರಂ ಶರೀಫ್ ತಿಳಿಸಿದರು

----ಫೋಟೊ-----

ಫೋಟೋ- ಕಲಬುರಗಿ ಮ್ಯಾಪ್‌

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾವುದೇ ಬೇಧವಿಲ್ಲದೆ ಸಮಾನತೆ ಸಾರುವ ಗ್ರಂಥವೇ ಸಂವಿಧಾನ: ನ್ಯಾ. ಸೌಭಾಗ್ಯ ಭೂಷೇರ್
ಸಂವಿಧಾನದ ಆಶಯಗಳನ್ನು ಈಡೇರಿಸುವುದು ಪ್ರತಿಯೊಬ್ಬರ ಕರ್ತವ್ಯ: ಸಚಿವ ಸಿ. ಪುಟ್ಟರಂಗಶೆಟ್ಟಿ