ಟೊಮೆಟೊ, ಮಾವಿಗೆ ಬೆಂಬಲ ಬೆಲೆಗೆ ಪ್ರಸ್ತಾವನೆ

KannadaprabhaNewsNetwork |  
Published : Jun 07, 2025, 01:52 AM IST
೬ಕೆಎಲ್‌ಆರ್-೩ಕೋಲಾರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಟೊಮೇಟೊ, ಮಾವು ಬೆಳೆಗಾರರ ಸಮಸ್ಯೆ ಆಲಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ  ಸಭೆಯಲ್ಲಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ರಾಜ್ಯದಲ್ಲಿ ಅತಿ ಹೆಚ್ಚು ಮಾವು ಬೆಳೆಯುವ ಜಿಲ್ಲೆ ನಮ್ಮದಾಗಿದ್ದರೂ ಈ ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಇಲ್ಲದಿರುವುದು ಜಿಲ್ಲೆಯ ಮಾವು ಬೆಳೆಗಾರರಿಗೆ ಅಸಮಾಧಾನವಾಗಿದೆ. ಅಕಾಲವೃಷ್ಟಿಯಿಂದ ಮಾವು ಇಳುವರಿಯಲ್ಲಿ ವ್ಯತ್ಯಾಸವಾಗಿದೆ. ಗುಣಮಟ್ಟದ ಮಾವು ಲಭ್ಯವಿಲ್ಲದ ಕಾರಣ ಬೆಳೆಗೆ ತಕ್ಕ ಬೆಲೆ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿಲ್ಲ

ಕನ್ನಡಪ್ರಭ ವಾರ್ತೆ ಕೋಲಾರಮಾವು ಹಾಗೂ ಟೊಮೆಟೊ ಬೆಳೆಗಾರರ ಸಮಸ್ಯೆ ಬಗ್ಗೆ ಇಂದೇ ವರದಿ ತರಿಸಿಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾವು ಬೆಳೆಗಾರರಿಗೆ ಭರವಸೆ ನೀಡಿದರು.ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಟೊಮೇಟೊ, ಮಾವು ಬೆಳೆಗಾರರ ಸಮಸ್ಯೆ ಆಲಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕರೆಯಲಾದ ಸಭೆಯಲ್ಲಿ ಮಾತನಾಡಿ, ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ರಕ್ಷಣೆಗೆ ಬೆಂಬಲ ಬೆಲೆ ಘೋಷಣೆ ಮಾಡಲು ಸರ್ಕಾರಕ್ಕೆ ಶೀಘ್ರದಲ್ಲಿಯೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮಾವು ಸಂಸ್ಕರಣಾ ಘಟಕ ಅಗತ್ಯ

ರಾಜ್ಯದಲ್ಲಿ ಅತಿ ಹೆಚ್ಚು ಮಾವು ಬೆಳೆಯುವ ಜಿಲ್ಲೆ ನಮ್ಮದಾಗಿದ್ದರೂ ಈ ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಇಲ್ಲದಿರುವುದು ಜಿಲ್ಲೆಯ ಮಾವು ಬೆಳೆಗಾರರಿಗೆ ಅಸಮಾಧಾನವಾಗಿದೆ. ಅಕಾಲವೃಷ್ಟಿಯಿಂದ ಮಾವು ಇಳುವರಿಯಲ್ಲಿ ವ್ಯತ್ಯಾಸವಾಗಿದೆ. ಗುಣಮಟ್ಟದ ಮಾವು ಲಭ್ಯವಿಲ್ಲದ ಕಾರಣ ಬೆಳೆಗೆ ತಕ್ಕ ಬೆಲೆ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿಲ್ಲ. ಇದಲ್ಲದೆ ಕಳೆದ ಸಾಲಿನಲ್ಲಿ ಖಾಸಗಿ ಸಂಸ್ಥೆಗಳು ಖರೀದಿಸಿದ ಮಾವು ಹಾಗೂ ಉತ್ಪನ್ನಗಳು ಕಾರಣಾತರಗಳಿಂದ ಬೇಡಿಕೆ ಕಳೆದುಕೊಂಡಿದೆ. ಹೀಗಾಗಿ ಆ ಸಂಸ್ಥೆಗಳು ಮಾವು ಖಾರಿದಿಗೆ ಮುಂದೆ ಬರುತ್ತಿಲ್ಲ ಎಂದು ತಿಳಿಸಿದರು. ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ಮಾರುಕಟ್ಟೆಯ ಜಾಗದ ಸಮಸ್ಯೆ, ದಲ್ಲಾಳಿಗಳ ಸಮಸ್ಯೆ ಮುಂತಾದ ರೈತ ವಿರೋಧಿ ಸಮಸ್ಯೆಗಳನ್ನು ಸಭೆಯಲ್ಲಿ ವಿವರಿಸಿದರು.

ಸಭೆಯಲ್ಲಿ ಎಡಿಸಿ ಮಂಗಳ, ಕೋಲಾರ ಎಸ್‌ಪಿ ಡಾ.ಬಿ.ನಿಖಿಲ್, ಎಸಿ ಡಾ.ಮೈತ್ರಿ, ಕೃಷಿ ಜಂಟಿ ನಿರ್ದೇಶಕಿ ಸುಮಾ, ತೋಟಗಾರಿಕೆ ಉಪನಿರ್ದೇಶಕ ಕುಮಾರಸ್ವಾಮಿ, ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಮುಖಂಡ ಮರಗಲ್ ಶ್ರೀನಿವಾಸ್, ಕದಿರಿನತ್ತ ಅಪ್ಪೋಜಿರಾವ್, ಮಂಗಸಂದ್ರ ತಿಮ್ಮಣ್ಣ, ಯಲ್ಲಣ್ಣ, ಶೈಲಜ, ರತ್ನಮ್ಮ, ವೆಂಕಟಮ್ಮ, ಗೌರಮ್ಮ, ಮುನಿರತ್ನಮ್ಮ, ಹೆಬ್ಬಣಿ ಆನಂದರೆಡ್ಡಿ, ಪುತ್ತೇರಿ ರಾಜು, ಗೀರೀಶ್ ಇದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ