ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ಪ್ರಸ್ತಾಪ ಸರಿಯಲ್ಲ

KannadaprabhaNewsNetwork |  
Published : May 26, 2026, 01:30 AM IST
ತುಮಕೂರು ಜಿಲ್ಲೆ ತನ್ನದೇ ಆದ ಇತಿಹಾಸ ಹಾಗೂ ಬೌಗೋಳಿಕ ಮಹತ್ವವನ್ನು ಹೊಂದಿದೆ : ಶಾಂತಕುಮಾರ್ | Kannada Prabha

ಸಾರಾಂಶ

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡಿ ಗ್ರೇಟರ್ ಬೆಂಗಳೂರಿಗೆ ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿರುವುದು ಹಾಸ್ಯಾಸ್ಪದವಾಗಿದ್ದು ಇದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್‌ ತಿಳಿಸಿದರು.

ಕನ್ನಡಪ್ರಭವಾರ್ತೆ ತಿಪಟೂರು

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡಿ ಗ್ರೇಟರ್ ಬೆಂಗಳೂರಿಗೆ ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿರುವುದು ಹಾಸ್ಯಾಸ್ಪದವಾಗಿದ್ದು ಇದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ತಿಳಿಸಿದರು.

ನಗರದ ತಮ್ಮ ಗೃಹಕಚೇರಿಯಲ್ಲಿ ಚಿಕ್ಕಮಾರ್ಪನಹಳ್ಳಿ ಭರತ್‌ರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆ ತನ್ನದೇ ಆದ ಇತಿಹಾಸ ಹೊಂದಿದ್ದು ಶೈಕ್ಷಣಿಕವಾಗಿ ಸಾಮಾಜಿಕವಾಗಿ ವಿಶೇಷ ಸ್ಥಾನ ಪಡೆದಿದೆ. ಜನರ ಅಭಿಪ್ರಾಯ ಪಡೆಯದೇ ಇದಕ್ಕೆ ಮನವಿ ಮಾಡಿರುವುದು ತಪ್ಪು. ತಿಪಟೂರು ತಾಲೂಕಿನ ಜನರೂ ಸೇರಿದಂತೆ ಜಿಲ್ಲೆಯ ಎಲ್ಲ ಹತ್ತು ತಾಲೂಕಿನ ಜನರ ಅಭಿಪ್ರಾಯ ತೆಗೆದುಕೊಂಡು ಈ ವಿಷಯದಲ್ಲಿ ಮುನ್ನಡೆಯಬೇಕಿತ್ತು ಎಂದರು.ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠ ದೇಶದಲ್ಲಿಯೇ ಪ್ರಸಿದ್ದಿ ಹೊಂದಿದೆ. ಶಿವಕುಮಾರಸ್ವಾಮಿಗಳು ಲಕ್ಷಾಂತರ ಜನರಿಗೆ ದಾರಿದೀಪ. ವಿಶೇಷವಾಗಿ ಕೊಬ್ಬರಿ ಬೆಳೆಯುವ ಜಿಲ್ಲೆ. ಇಲ್ಲಿನ ಕೊಬ್ಬರಿಗೆ ಭೌಗೋಳಿಕ ಮಾನ್ಯತೆ ಪಡೆದುಕೊಳ್ಳುವುದರಲ್ಲಿದೆ. ಇದೆಲ್ಲವನ್ನೂ ಮರೆತು ತುಮಕೂರನ್ನು ಬೆಂಗಳೂರಿಗೆ ಸೇರಿಸಲು ಪ್ರಸ್ತಾಪ ಮಾಡಿರುವುದು ಎಷ್ಟರಮಟ್ಟಿಗೆ ಸರಿ. ಅದರ ಬದಲು ತಿಪಟೂರನ್ನು ಜಿಲ್ಲೆ ಮಾಡಿದರೆ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ. ಇನ್ನೊಂದು ವರ್ಷದಲ್ಲಿ ಚುನಾವಣಾ ಕೆಲಸ ಪ್ರಾರಂಭವಾಗುವುದರಿಂದ ಶಾಸಕರು ಇದರ ಬಗ್ಗೆ ಕೇವಲ ಹೇಳಿಕೆ ನೀಡುವುದು ಬಿಟ್ಟು ಮುಖ್ಯಮಂತ್ರಿಗಳಲ್ಲಿ ಒತ್ತಡ ತಂದು ತಿಪಟೂರನ್ನು ಜಿಲ್ಲಾ ಘೋಷಣೆ ಮಾಡಿಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಸ್ವಇಚ್ಛೆಯಿಂದ ಯಾವುದೇ ಬೇಡಿಕೆ ಹಾಗೂ ಷರತ್ತುಗಳಿಲ್ಲದೇ ಪಕ್ಷವನ್ನು ಸೇರುತ್ತಿರುವ ಭರತ್‌ರವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇನೆ. ಅವರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರಲಿದೆ. ಭರತ್‌ರವರು ಚಿಕ್ಕಮಾರ್ಪನಹಳ್ಳಿಯಲ್ಲಿ ಒಂದು ಗೋಶಾಲೆಯನ್ನು ಪ್ರಾರಂಭಿಸಲಿದ್ದಾರೆ. ಎತ್ತು ಹಸುಗಳನ್ನು ಸಾಕಲು ಸಾಧ್ಯವಿಲ್ಲದ ರೈತರು ಇವರ ಗೋಶಾಲೆಗೆ ಬಿಡಬಹುದು ಎಂದರು. ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಶಿವಸ್ವ್ವಾಮಿ, ನಗರಾಧ್ಯಕ್ಷ ರಾಜು ಕಂಚಾಘಟ್ಟ, ಮುಖಂಡರಾದ ಸುದರ್ಶನ್, ಸಂತೋಷ್ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಯಾಣಿಕರ ತಂಗುದಾಣಕ್ಕೆ ಶಾಸಕ ಬಾಲಕೃಷ್ಣ ಭೂಮಿಪೂಜೆ
ಕೇವಲ ಓದುಗರ ಪ್ರೀತಿ ಬೆಂಬಲವೇ ಟೀಚರ್ ಪತ್ರಿಕೆಯ ಬಂಡವಾಳ