ಬೆಳೆ ಹಾನಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ

KannadaprabhaNewsNetwork |  
Published : Oct 12, 2025, 01:00 AM IST
11ಕೆಎಂಎನ್ ಡಿ18 | Kannada Prabha

ಸಾರಾಂಶ

ಅಧಿಕ ಮಳೆಯಿಂದಾಗಿ ಸಿಡಿಎಸ್ ನಾಲೆ ಒಡೆದು ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮಳೆ ನಿಂತ ನಂತರ ಜಂಟಿ ಸರ್ವೇ ಕಾರ್ಯಾಚರಣೆ ನಡೆಸಿ ಬೆಳೆ ಎಷ್ಟು ಹಾನಿಯಾಗಿದೆ ಎಂದು ತಿಳಿದುಕೊಂಡು ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ಸಿಡಿಎಸ್ ನಾಲೆ ಒಡೆದು ರೈತರ ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಒಡೆದು ಹೋಗಿದ್ದ ನಾಲೆ ಹಾಗೂ ರೈತರ ಜಮೀನು ಪರಿಶೀಲನೆ ನಡೆಸಿ ಮಾತನಾಡಿ, ಅಧಿಕ ಮಳೆಯಿಂದಾಗಿ ಸಿಡಿಎಸ್ ನಾಲೆ ಒಡೆದು ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮಳೆ ನಿಂತ ನಂತರ ಜಂಟಿ ಸರ್ವೇ ಕಾರ್ಯಾಚರಣೆ ನಡೆಸಿ ಬೆಳೆ ಎಷ್ಟು ಹಾನಿಯಾಗಿದೆ ಎಂದು ತಿಳಿದುಕೊಂಡು ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ವೇ ಕಾರ್ಯ ಬಳಿಕ ಎಷ್ಟು ಎಕರೆ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತಿಳಿಯುತ್ತದೆ ಎಂದರು.

ಸದ್ಯ ಎಲ್ಲಾ ನಾಲೆಗಳಿಗೂ ನೀರನ್ನು ನಿಲ್ಲಿಸಲಾಗಿದೆ. ಮಳೆ ನಿಂತ ನಂತರ ಒಡೆದ ನಾಲೆಯನ್ನು ಸರಿಪಡಿಸಲಾಗುವುದು. ಎನ್‌ಡಿಆರ್‌ಎಸ್ ನಲ್ಲಿ 1 ಹೆಕ್ಟೇರ್ ಮಳೆ ಆಶ್ರಿತ ಬೆಳೆಗಳಿಗೆ 8500 ರು. ನೀರಾವರಿ ಆಶ್ರಿತ ಬೆಳೆಗಳಿಗೆ 17,000 ರು. ತೋಟಗಾರಿಕೆ ಬೆಳೆಗೆ 22,500 ರು. ಪರಿಹಾರ ನೀಡಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಂಟಾದ ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ರೈತರ ಬೇಡಿಕೆಯಂತೆ ಎಲ್ಲಾ ಬಗೆಯ ಬೆಳೆಗಳಿಗೂ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 8,500 ರು. ನೀಡುವುದಾಗಿ ಘೋಷಣೆ ಮಾಡಲಾಗಿದೆ ಎಂದರು.

ಜಂಟಿ ಸರ್ವೇ ನಡೆದ ತಕ್ಷಣ ಯಾರು ಕಾಯುವಂತಿಲ್ಲ. ವೆಬ್ ಸೈಟ್‌ನಲ್ಲಿ ಅಪ್ಲೋಡ್ ಮಾಡಿದ ಮಾರನೇ ದಿನಕ್ಕೆ ಪರಿಹಾರ ನೀಡಲಾಗುವುದು. ಈ ಪ್ರಕ್ರಿಯೆಯು ಮಳೆ ನಿಂತ ಒಂದು ವಾರದೊಳಗೆ ಮಾಡಲಾಗುತ್ತದೆ. ರೈತರು ತಮ್ಮ ಬೆಳೆಗಳಿಗೆ ಇನ್ಶೂರೆನ್ಸ್ ಮಾಡಿಸಿದ್ದರೆ ಇನ್ಶೂರೆನ್ಸ್ ಹಣದ ಜೊತೆ ಸರ್ಕಾರ ಪರಿಹಾರ ನೀಡಲಾಗುವುದು ಎಂದರು.

ಈ ವೇಳೆ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಿಇಒ ಕೆ.ಆರ್.ನಂದಿನಿ, ತಹಸೀಲ್ದಾರ್ ಚೇತನ ಯಾದವ್, ನೀರಾವರಿ ನಿಗಮದ ರಘುರಾಮ್, ಕಾರ್ಯಪಾಲಕ ಎಂಜಿನಿಯರ್ ಜಯಂತ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೇರಿದಂತೆ ಇತರರು ಇದ್ದರು.

PREV

Recommended Stories

ಪ್ರೇಮಿ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ
ಇಂದು ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ - ಮುಂದಿನ 3-4 ದಿನ ಹಲವೆಡೆ ಉತ್ತಮ ಮಳೆ