ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌: ಅಭಿಮಾನಿಗಳಿಂದ ಪ್ರತಿಭಟನೆ

KannadaprabhaNewsNetwork |  
Published : Aug 19, 2024, 12:49 AM IST
ಜೇವರ್ಗಿ : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ರಾಜ್ಯಪಾಲರು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದನ್ನು ವಿರೋಧಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಿದ್ದರಾಮಯ್ಯನವರ ಅಭಿಮಾನಿಗಳ ಬಳಗದಿಂದ ರಾಷ್ಟ್ರೀಯ ಹೆದ್ದಾರಿ ಮೇಲೆ ಟೈರಿಗೆ ಬೆಂಕಿ ಹಚ್ಚಿ ರಸ್ತೆ ತಡೆ. ಚಂದ್ರಶೇಖರ ನೇರಡಗಿ, ರಾಜಶೇಖರ ಮುತ್ತಕೋಡ, ನಿಂಗಣ್ಣ ರದ್ದೆವಾಡಗಿ, ರವಿ ಕುರಳಗೇರ, ಭೀಮರಾಯ ಬಿಲ್ಲಾಡ ಇದ್ದರು. | Kannada Prabha

ಸಾರಾಂಶ

ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಖಂಡನೀಯವಾಗಿದೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಶನಿವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಜೇವರ್ಗಿ

ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಖಂಡನೀಯವಾಗಿದೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಶನಿವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ನೇರಡಗಿ ಮಾತನಾಡಿ, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ರಾಜಕೀಯ ಪ್ರೇರಿತವಾಗಿ ಸೇಡು ತೀರಿಸಿಕೊಳ್ಳಲು ಅನ್ಯ ಪಕ್ಷಗಳನ್ನು ಹವಣಿಸುತ್ತಿದ್ದು, ಅದಕ್ಕೆ ರಾಜ್ಯಪಾಲರು ಪೂರಕವಾಗಿ ನಡೆದುಕೊಳ್ಳುತ್ತಿದ್ದಾರೆ. ಪ್ರಜಾಸತ್ತಾತ್ಮಕವಾಗಿ ರಾಜ್ಯಭವನವನ್ನು ದುರ್ಬಲಗೊಳಿಸಲು ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಪತನಗೊಳಿಸಲು ತನ್ನ ಎಲ್ಲಾ ಅಸ್ತ್ರಗಳನ್ನು ಬಳಸುತ್ತಿದೆ. ಆದರೆ ಜನಾದೇಶದ ಸರ್ಕಾರಕ್ಕೆ ಇಡಿ ರಾಜ್ಯದ ಜನರು ರಾಜ್ಯಪಾಲರ ವಿರುದ್ಧ ಸಿಡಿದೇಳಲಿದ್ದಾರೆ ಎಂದು ಅವರು ಹೇಳಿದರು.ಈ ವೇಳೆ ರಸ್ತೆ ತಡೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದ್ದಾಗ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆಗೊಳಿಸಿದರು.

ಪ್ರತಿಭಟನೆಯಲ್ಲಿ ಚಂದ್ರಶೇಖರ ನೇರಡಗಿ, ರಾಜಶೇಖರ ಮುತ್ತಕೋಡ, ನಿಂಗಣ್ಣ ರದ್ದೆವಾಡಗಿ, ರವಿ ಕುರಳಗೇರ, ಭೀಮರಾಯ ಬಿಲ್ಲಾಡ, ಭೀಮು ಖಾದ್ಯಾಪೂರ, ಹಣಮಂತ ಮಯೂರ, ಸಿದ್ದರಾಮ ಗಡ್ಡದ, ದತ್ತಪ್ಪ ಪೂಜಾರಿ, ಪೀರಪ್ಪ ಬೇಲೂರ, ಮಲ್ಲಿಕಾರ್ಜುನ ಕಟ್ಟಿಮನಿ ಗಡ್ಡದ, ಶರಣಗೌಡ ಬಿರಾದಾರ, ಶರಣಗೌಡ ಸರಡಗಿ, ರಾಜಲಿಂಗು, ಶೇಖರ ಹಾಲಗಡ್ಲ, ಯಲ್ಲಪ್ಪ ದೂರೆ, ಮರೆಪ್ಪ ಬಣಮಿಗಿ, ಶೇಖಪ್ಪ ನೆಲೋಗಿ, ಸಿಕ್ರು ಕಟ್ಟಿಸಂಗಾವಿ ಸೇರಿದಂತೆ ನೂರಾರು ಸಿದ್ದರಾಮಯ್ಯನವರ ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ