ಶಿಕ್ಷಣ, ಆರೋಗ್ಯ, ಸೇವೆಯಿಂದ ಸಮೃದ್ಧ ಸಮಾಜ: ಉದಯಕುಮಾರ್‌ ಶೆಟ್ಟಿ ಮುನಿಯಾಲು

KannadaprabhaNewsNetwork |  
Published : Dec 05, 2025, 02:15 AM IST
04ಎಂಜಿಎಂಶಿಬಿರವನ್ನು ಉದಯ ಕುಮಾರ್ ಶೆಟ್ಟಿ ಉದ್ಘಾಟಿಸಿದರು | Kannada Prabha

ಸಾರಾಂಶ

ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 2025 - 26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಕುಕ್ಕುಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಡೆಯುತ್ತಿದೆ.

ಉಡುಪಿ: ಇಲ್ಲಿನ ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 2025 - 26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಕುಕ್ಕುಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಡೆಯುತ್ತಿದೆ. ಶಿಬಿರವನ್ನು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು ಉದ್ಘಾಟಿಸಿ, ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೇವೆಗಳ ಬಲದಿಂದಲೇ ಒಂದು ಸಮೃದ್ಧ ಸಮಾಜವನ್ನು ನಿರ್ಮಿಸಬಹುದು ಎಂದರು.

ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದು, ಸಮಾಜಮುಖಿ ಕಾರ್ಯಕ್ರಮಗಳು ಸಮುದಾಯದ ಬಾಂಧವ್ಯವನ್ನು ಬಲಪಡಿಸುವ ಮಹತ್ವದ ವೇದಿಕೆಗಳು ಎಂದಭಿಪ್ರಾಯಪಟ್ಟರು.

ಕಡ್ತಲ ಗ್ರಾ.ಪಂ. ಅಧ್ಯಕ್ಷ ಸುಕೇಶ್ ಹೆಗ್ಡೆ, ಅಜೆಕಾರು ಪೊಲೀಸ್ ಠಾಣಾಧಿಕಾರಿ ಮಹೇಶ್ ಟಿ.ಎಂ., ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯೋಗೀಶ್ ಮಲ್ಯ, ಪಂಚಮಿ ಚಾರಿಟೇಬಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಹರೀಶ್ ಪಂಚಮಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಖಿಲೇಶ್ ಶೆಟ್ಟಿ, ಶಾಲೆಯ ಹಳೆವಿದ್ಯಾರ್ಥಿ ಸಂಘದ ಅದ್ಯಕ್ಷ ವಾಮನ ಭಟ್, ಮುಖ್ಯೋಪಾಧ್ಯಾಯ ದಯಾನಂದ ನಾಯಕ್‌, ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ ಉಪಪ್ರಾಂಶುಪಾಲ ಡಾ.ಎಂ. ವಿಶ್ವನಾಥ ಪೈ, ಐಎಸ್‌ಎ ಫೌಂಡೇಶನ್‌ನ ಡಾ.ಪ್ರಭಾಕರ್ ಶಾಸ್ತ್ರಿ ಉಪಸ್ಥಿತರಿದ್ದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿ ಸನತ್ ಕೋಟ್ಯಾನ್, ಯುವ ರೆಡ್ ಕ್ರಾಸ್ ಶಿಬಿರಾಧಿಕಾರಿ ದೀಪಿಕಾ ಹಾಗೂ ರೋವರ್ಸ್-ರೇಂಜರ್ಸ್ ಶಿಬಿರಾಧಿಕಾರಿ ಅಕ್ಷತಾ ನಾಯಕ್ ಹಾಗೂ ಸ್ಟಾಲಿನ್ ಡಾನ್ಸನ್ ಡಿಸೋಜಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟಿ.ಎಂ. ಶಹೀದ್ ಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ
ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಕೊಡುಗೆ