ಸ್ವಾತಂತ್ರ್ಯ ರಕ್ಷಿಸಿ ಬಲಿಷ್ಠ ದೇಶ ನಿರ್ಮಿಸಿ: ಶ್ರವಣ್‌ಕುಮಾರ್‌

KannadaprabhaNewsNetwork |  
Published : Aug 16, 2024, 12:51 AM IST
ಮೂಡುಬಿದಿರೆ ತಾಲೂಕಿನಲ್ಲಿ 78 ನೇ ಸ್ವಾತಂತ್ರ್ಯೋತ್ಸವಸುಭದ್ರ ಮತ್ತು ಶಕ್ತಿಶಾಲಿಯಾಗಿ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸೋಣ: ಶ್ರವಣ್ ಕುಮಾರ್ | Kannada Prabha

ಸಾರಾಂಶ

ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಡಳಿತ ಸೌಧದಲ್ಲಿ ನಡೆದ 78 ನೇ ಸ್ವಾತಂತ್ರ್ಯೋವದಲ್ಲಿ ಧ್ವಜ ಅರಳಿಸಿ ಐಎಎಸ್ ಪ್ರೊಬೆಶನರಿ ಅಧಿಕಾರಿ ಶ್ರವಣ್ ಕುಮಾರ್ ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್ ಅದ್ಯಕ್ಷತೆ ವಹಿಸಿ, ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ವಿದೇಶಿಯರ ಆಳ್ವಿಕೆಯಲ್ಲಿದ್ದ ಭಾರತವನ್ನು ನಮ್ಮ ದೇಶ ಭಕ್ತ ನಾಯಕರು ತಮ್ಮ ದೇಹ ಪಣಕ್ಕಿಟ್ಟು ಹೋರಾಡಿದರ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಇದನ್ನು ನಾವು ಸಂರಕ್ಷಿಸಿ ನಮ್ಮ ದೇಶವನ್ನು ಸುಭದ್ರ ಮತ್ತು ಶಕ್ತಿಶಾಲಿಯಾಗಿ ರೂಪಿಸಬೇಕಾಗಿದೆ ಎಂದು ಐಎಎಸ್ ಪ್ರೊಬೆಶನರಿ ಅಧಿಕಾರಿ ಶ್ರವಣ್ ಕುಮಾರ್ ಹೇಳಿದ್ದಾರೆ.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಡಳಿತ ಸೌಧದಲ್ಲಿ ನಡೆದ 78 ನೇ ಸ್ವಾತಂತ್ರ್ಯೋವದಲ್ಲಿ ಧ್ವಜ ಅರಳಿಸಿ ಮಾತನಾಡಿದರು.

ಶಾಸಕ ಉಮಾನಾಥ ಕೋಟ್ಯಾನ್ ಅದ್ಯಕ್ಷತೆ ವಹಿಸಿ, ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿ ತಾಲೂಕಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು.

ಮೂಡಾ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

ಪಿ. ಶ್ರೀಧರ್ , ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಶಿಕ್ಷಣಾಧಿಕಾರಿ ವಿರೂಪಾಕ್ಷ, ವೈದ್ಯಾಧಿಕಾರಿ ಅಕ್ಷತಾ ನಾಯಕ್ ಇದ್ದರು.

ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಸ್ವಾಗತಿಸಿದರು. ಉಪತಹಸೀಲ್ದಾರ್ ರಾಮ ನಿರೂಪಿಸಿದರು.

ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್ ಸಿಸಿ ವಿದ್ಯಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಮೂಡುಬಿದಿರೆ ಪುರಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಧ್ವಜಾರೋಹಣ ನೆರವೇರಿಸಿದರು. ಸಮಾಜ ಮಂದಿರ ದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಧ್ವಜಾರೋಹಣ ನೆರವೇರಿಸಿದರು.ಉಪಾಧ್ಯಕ್ಷ ಎಸ್.ಡಿ.ಸಂಪತ್ ಸಾಮ್ರಾಜ್ಯ , ಕಾರ್ಯದರ್ಶಿ ಹೆಚ್. ಸುರೇಶ್ ಪ್ರಭು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ