ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಎಲೆಕೆರೆ ಹ್ಯಾಂಡ್ ಪೋಸ್ಟ್‌ನಲ್ಲಿ ಇರುವ ಆದರ್ಶ ವಿದ್ಯಾಲಯ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ನಡೆದ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಲಿಖಿತ ರಸಪ್ರಶ್ನೆ ಕಾರ್‍ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಮುಖ್ಯ ಗುರಿಯಾಗಬೇಕು. ಜವಾಬ್ದಾರಿಯಿಂದ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿಕೊಂಡು ಪ್ರತಿವರ್ಷಕೊಮ್ಮ ಒಂದೊಂದು ಗಿಡನೆಟ್ಟು ಬೆಳೆಸಬೇಕು ಎಂದರು.ಪ್ರಕೃತಿ, ಪರಿಸರ ನಮ್ಮೆಲ್ಲರ ಪಾಲಿಗೂ ದೇವರಿದ್ದಂತೆ. ಜಾಗತೀಕರಣದಿಂದ ಪ್ರಕೃತಿ ಮುನಿದು ಹಲವು ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ. ಪರಿಸರ ಉತ್ತಮವಾಗಿದ್ದರೆ ಮನುಷ್ಯರು ಸಹ ಆರೋಗ್ಯವಾಗಿರುತ್ತಾರೆ. ಪರಿಸರ ಹದಗೆಟ್ಟರೆ ಮನುಷ್ಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತಂತೆ ಲಿಖಿತ ರಸಪ್ರಶ್ನೆ ಸ್ಪರ್ಧೆ ನಡೆದು ವಿಜೇತರಾದ ವಿದ್ಯಾರ್ಥಿಗಳಾದ ಸೀಮಾ, ಪುನೀತ್‌ಗೌಡ, ವರ್ಷಿತ ಅವರಿಗೆ ನಗದು ಬಹುಮಾನ ನೀಡಿ ಗೌರವಿಸಿ ಪ್ರಶಂಸಾ ಪತ್ರ ವಿತರಿಸಲಾಯಿತು.