ಮಕ್ಕಳ ಹಕ್ಕು ರಕ್ಷಣೆ ನಮ್ಮ ಆದ್ಯ ಕರ್ತವ್ಯ

KannadaprabhaNewsNetwork |  
Published : Aug 22, 2026, 01:15 AM IST
 | Kannada Prabha

ಸಾರಾಂಶ

ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮಕ್ಕಳಿಲ್ಲದ ದಂಪತಿಗಳಿಗೆ ಕಾನೂನಾತ್ಮಕವಾಗಿ ದತ್ತು ಪಡೆಯುವುದು ಮತ್ತು ಬಾಲ್ಯ ವಿವಾಹ ನಿಷೇದ ಮಾಡುವಲ್ಲಿ ಅಧಿಕಾರಿಗಳ ಸಮನ್ವಯತೆ ಅತೀ ಮುಖ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ ಕಾರನೂರು ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮಕ್ಕಳಿಲ್ಲದ ದಂಪತಿಗಳಿಗೆ ಕಾನೂನಾತ್ಮಕವಾಗಿ ದತ್ತು ಪಡೆಯುವುದು ಮತ್ತು ಬಾಲ್ಯ ವಿವಾಹ ನಿಷೇದ ಮಾಡುವಲ್ಲಿ ಅಧಿಕಾರಿಗಳ ಸಮನ್ವಯತೆ ಅತೀ ಮುಖ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ ಕಾರನೂರು ಹೇಳಿದರು.

ಇಲ್ಲಿನ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ)ದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಮಾರ್ಗದರ್ಶಿ ಸೊಸೈಟಿ ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ರಾಯಚೂರು ಹಾಗೂ ಡಾನ್‌ ಬೋಸ್ಕೋ ಸಂಸ್ಥೆ ದೇವದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಪೋಷಕತ್ವ ಯೋಜನೆ, ಕಾನೂನಾತ್ಮಕ ದತ್ತು, ಬಾಲ್ಯವಿವಾಹ ನಿಷೇಧ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಕಾನೂನುಗಳ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರು, ಪೊಲೀಸ್ ಇಲಾಖೆ ಅಧಿಕಾರಿ / ಸಿಬ್ಬಂದಿ, ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ / ಸಿಬ್ಬಂದಿಗೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಘಟಕ ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೋಷಕತ್ವ ಯೋಜನೆಯ ಅನುಷ್ಠಾನ ಮಾಡುವಲ್ಲಿ ಡಾನ್‌ ಬೋಸ್ಕೋ ಸಂಸ್ಥೆಯು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಮಕ್ಕಳಿಲ್ಲದ ದಂಪತಿಗಳಿಗೆ ಕಾನೂನಾತ್ಮಕವಾಗಿ ದತ್ತು ಪಡೆಯುವುದು ಮತ್ತು ಬಾಲ್ಯ ವಿವಾಹ ನಿಷೇದ ಮಾಡುವಲ್ಲಿ ಅಧಿಕಾರಿಗಳ ಸಮನ್ವಯತೆ ಅತೀ ಮುಖ್ಯವಾಗಿದೆ. ಅದರಂತೆ ಪ್ರತಿಯೊಂದು ಮಗುವು ತನ್ನ ಹಕ್ಕುಗಳನ್ನು ಅನುಭವಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದು ನಮ್ಮ-ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಯೋಜನೆಗಳು ಮತ್ತು ಬಾಲಮಂದಿರಗಳ ಸೌಲಭ್ಯಗಳ ಕುರಿತು ತಿಳಿಸಿ, ಮಕ್ಕಳನ್ನು ದತ್ತು ನಿಯಮಗಳ ಪ್ರಕಾರ ಮಕ್ಕಳನ್ನು ಕಾನೂನಾತ್ಮಕ ದತ್ತು ಪಡೆಯುವುದು ಮತ್ತು ಪೋಷಕತ್ವದಿಂದ ಮಕ್ಕಳನ್ನು ದತ್ತು ಪಡೆಯುವುದು ಮತ್ತು ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳ ಕುರಿತು ತಿಳಿಸಿದರು.

ಕಲಬುರಗಿ ಮಾರ್ಗದರ್ಶಿ ಸೊಸೈಟಿ ನಿರ್ದೇಶಕ ಆನಂದ್‌ರಾಜ್,ಸಹಾಯಕ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ,ಸಂಪನ್ಮೂಲ ವ್ಯಕ್ತಿಯಾಗಿ ಶಿವಮಲ್ಲು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಎಂ.ಡಿ. ಗೋಕುಲ್, ರಾಯಚೂರು ಶಿಶು ಅಬಿವೃದ್ದಿ ಯೋಜನಾಧಿಕಾರಿ ಮಂಜುನಾಥ, ವೆಂಕಟೇಶ, ಸರ್ಕಾರಿ ಬಾಲಕರ ಬಾಲಮಂದಿರ, ಭಾರತಿ, ಅಂಥೋನಿರಾಜ್, ತಿಕ್ಕಯ್ಯ, ಮಾರ್ಗದರ್ಶಿ ಸೊಸೈಟಿ ಕಲಬುರಗಿ ವ್ಯವಸ್ಥಾಪಕ ಸುನಂದ್,ಈರಮ್ಮ, ಸಿದ್ದಲಿಂಗಪ್ಪ, ನಾಗಪ್ಪ, ರವೀಂದ್ರ, ನಾಗರಾಜ, ಹನುಮೇಶ್, ದಿನೇಶ್ ಕುಮಾರ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದ ಅಭಿವೃದ್ಧಿಯೇ ಲಯನ್ಸ್ ಧ್ಯೇಯ: ಡಾ.ಕೃಷ್ಣೇಗೌಡ
ಮಂಡ್ಯ: ೬೭ ಆಸ್ತಿ ಮಾಲೀಕರಿಂದ ರಾಜಕಾಲುವೆ ಒತ್ತುವರಿ..!