ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಕನ್ನಡಪ್ರಭ ವಾರ್ತೆ ಗದಗ
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮತದಾನದ ಹಕ್ಕು ಉಳಿದರೆ ಮಾತ್ರ ಪ್ರಜಾಪ್ರಭುತ್ವ ಶಕ್ತಿಯಾಲಿಯಾಗುತ್ತದೆ. ಸಂವಿಧಾನದ ಪೀಠಿಕೆಯಂತೆ ಸರ್ವರು ಬದುಕನ್ನು ನಡೆಸಬೇಕು. ಪ್ರಜಾಪ್ರಭುತ್ವದ ಕುರಿತು ಜಾಗೃತಿ ಮೂಡಿಸುವುದಕ್ಕೋಸ್ಕರವೇ ಈ ದಿನ ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬರಿಗೂ ಸಮಾನವಾದ ಅವಕಾಶ, ಸ್ಥಾನಮಾನ ದೊರಕುಬೇಕು. ಬಡತನವನ್ನು ಬೇರು ಸಹಿತ ಕಿತ್ತೊಗೆಯುವಲ್ಲಿ ಯಶಸ್ವಿಯಾಗಿದ್ದೇವೆ ಆದರೂ ಸಹಿತ ಅಸ್ಪೃಶ್ಯತೆಯನ್ನು ಕಿತ್ತೊಗೆಯಲು ಸಾಧ್ಯವಾಗಿಲ್ಲ. ಸರ್ಕಾರವು ಜಗಜ್ಯೋತಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅನುಭವ ಮಂಟಪವೇ ಮೊದಲ ಸಂಸತ್ತಾಗಿದೆ. ಸಂವಿಧಾನ ಮತ್ತು ಬಸವೇಶ್ವರ ವಚನಗಳಲ್ಲಿ ಸಾಮ್ಯತೆಯನ್ನು ಕಾಣುತ್ತೇವೆ. ಪ್ರಜಾಪ್ರಭುತ್ವ ಕಾಪಾಡಿಕೊಂಡು ಬಲಿಷ್ಟ ರಾಷ್ಟ್ರವಾಗಿ ನಮ್ಮ ದೇಶ ಬೆಳೆಯಲು ಸಂವಿಧಾನವೇ ಕಾರಣವಾಗಿದೆ. ಜಗತ್ತಿನಲ್ಲಿಯೇ ಬಲಿಷ್ಟ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರ ನಮ್ಮ ದೇಶವಾಗಿದೆ ಎಂದರು.ಸಹಾಯಕ ಕಾನೂನು ನೆರವು ಅಭಿರಕ್ಷಕ ಗುರುರಾಜ ಗೌರಿ ಉಪನ್ಯಾಸ ನೀಡಿ, ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲು ನೆಲ್ಸನ್ ಮಂಡೇಲಾ ಅವರನ್ನು ಇಂದು ನಾವು ಸ್ಮರಿಸಬೇಕಾಗಿದೆ. ನೆಲ್ಸನ್ ಮಂಡೇಲಾ ಪ್ರಜಾಪ್ರಭುತ್ವ ದಿನಾಚರಣೆಗೆ ಶ್ರಮಿಸಿದವರಾಗಿದ್ದಾರೆ. ಪ್ರಜಾಪ್ರಭುತ್ವವು ಕೇವಲ ಆಡಳಿತವಲ್ಲ. ಇದೊಂದು ಜೀವನ ಶೈಲಿಯಾಗಿದೆ. ದೇಶದ ಪ್ರಗತಿಗೆ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಅದ್ಭುತ ಪ್ರತಿಭೆಯನ್ನು ನಾವು ಇವತ್ತಿನ ದಿವಸ ಸ್ಮರಿಸಬೇಕಾಗಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಪಂ ಸಿಇಒ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಆರ್.ಡಿ.ಪಿ.ಆರ್ ವಿವಿ ಕುಲಸಚಿವ ಡಾ. ಅಮರೇಶ, ಅಶೋಕ ಮಂದಾಲಿ, ಸಿ.ಆರ್. ಮುಂಡರಗಿ, ಗಂಗಪ್ಪ ಎಂ., ಎಸ್.ಜಿ. ಪಲ್ಲೇದ, ಎಸ್.ಎನ್. ಬಳ್ಳಾರಿ, ಆದಪ್ಪನವರ, ಬಸವರಾಜ ಕಡೆಮನಿ, ಆನಂದ ಸಿಂಗಾಡೆ, ಮಾರ್ತಾಂಡ ಹಾದಿಮನಿ, ಪ್ರೊ. ಕೆ.ಎಚ್. ಬೇಲೂರ ಸೇರಿದಂತೆ ಇತರರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿದರು. ಪ್ರೊ. ಬಾಬಹುಬಲಿ ಜೈನರ್ ಹಾಗೂ ನಂದಿತಾ ಹಂಪಿಹೊಳಿ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಬಿಡಿಸಿದ ರಂಗೋಲಿ ಎಲ್ಲರ ಕಣ್ಮನ ಸೆಳೆಯಿತು.